ಹರ್ಷ ಕೊಲೆ ಪ್ರಕರಣ; ಆರೋಪಿಗಳು ಬೆಂಗಳೂರಿಗೆ
Team Udayavani, Mar 27, 2022, 8:05 AM IST
ಬೆಂಗಳೂರು: ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿರುವ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹತ್ತು ಮಂದಿ ಆರೋಪಿಗಳನ್ನು ಶಿವಮೊಗ್ಗ ಜೈಲಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲು ಸಿದ್ಧತೆಗಳು ನಡೆಸುತ್ತಿದೆ.
ಎನ್‌ಐಎ ವಿಶೇಷ ಕೋರ್ಟ್ ಆದೇಶ ನೀಡಿ, ಕಾರಾಗೃಹದ ಮುಖ್ಯಸ್ಥರಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬೆಂಗಳೂರಿನ ಜೈಲಿಗೆ ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಒಂದೆರಡು ದಿನಗಳಲ್ಲಿ ಬೆಂಗಳೂರಿಗೆ ಸ್ಥಳಾಂತರವಾಗುವ ಸಾಧ್ಯತೆಯಿದೆ.
ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಎನ್‌ಐಎ ಅಧಿಕಾರಿಗಳು, ಬಂಧನಕ್ಕೊಳಗಾಗಿರುವ ಆರೋಪಿಗಳ ವಿಚಾರಣೆ ಅಗತ್ಯವಿದೆ. ಹೀಗಾಗಿ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿಗಳನ್ನು ಬೆಂಗಳೂರಿನ ಕಾರಾಗೃಹಕ್ಕೆ ಸ್ಥಳಾಂತರಿಸಬೇಕು. ಬಳಿಕ ಅವರನ್ನು ಬಾಡಿ ವಾರೆಂಟ್ ಮೂಲಕ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ ಎಂದು ಕೋರ್ಟ್‌ಗೆ ಮನವಿ ಮಾಡಿದ್ದರು. ಅದನ್ನು ಪುರಸ್ಕರಿಸಿರುವ ಕೋರ್ಟ್ ಹತ್ತು ಮಂದಿ ಆರೋಪಿಗಳನ್ನು ಬೆಂಗಳೂರು ಜೈಲಿಗೆ ಸ್ಥಳಾಂತರಿಸಲು ಸೂಚಿಸಿದೆ.
ಏನಿದು ಪ್ರಕರಣ?
ಫೆ. 20ರಂದು ಬಜರಂಗದಳ ಕಾರ್ಯಕರ್ತ ಹರ್ಷನನ್ನು ಆರೋಪಿ ಗಳು ಹತ್ಯೆ ಮಾಡಿದ್ದರು. ಈ ಘಟನೆಯಿಂದ ಶಿವಮೊಗ್ಗದಲ್ಲಿ ಅಶಾಂತಿ ಉಂಟಾಗಿದ್ದು, ಕೆಲವೆಡೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತವಾಗಿತ್ತು. ಅನಂತರ ಪ್ರಕರಣದ ತನಿಖೆ ಚುರುಕುಗೊಳಿಸಿದ ಜಿಲ್ಲಾ ಪೊಲೀಸರು 10 ಮಂದಿಯನ್ನು ಬಂಧಿಸಿದ್ದರು.ಶಿವಮೊಗ್ಗದ ರಿಹಾನ್ ಶರೀಫ್ (22), ಮೊಹಮ್ಮದ್ ಖಾಸೀಫ್ (30), ಆಸೀಫ್ ಉಲ್ಲಾ ಖಾನ್ (22), ಅಬ್ದುಲ್ ಅಸಾ#ನ್ (21), ಸೈಯದ್ ಫಾರೂಕ್ (21), ಅಬ್ದುಲ್ ಖಾದರ್ ಜಿಲಾನ್ (25), ರೋಶನ್ (24), ಫರಾಜ್ ಪಾಷಾ (24), ಸೈಯದ್ ನದೀಂ(20) ಮತ್ತು ಜಾಫರ್ ಸಾದಿಕ್ (50) ನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.