ರಾಜ್ಯ ಸರ್ಕಾರದಿಂದ ದ್ವೇಷ ರಾಜಕಾರಣ


Team Udayavani, Apr 25, 2019, 3:39 AM IST

rajya-sar

ಬೆಂಗಳೂರು: ಪ್ರಧಾನಿ ಮೋದಿಯವರ ಪರ ಪ್ರಚಾರ ಮಾಡಿದವರನ್ನು ಬಂಧಿಸುವ ಮೂಲಕ ರಾಜ್ಯ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೇಳಿದರು.

ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಬುಧವಾರ ಮಾತನಾಡಿದ ಅವರು, ಪೋಸ್ಟ್‌ ಕಾರ್ಡ್‌ ಜಾಲತಾಣ ಮುಖ್ಯಸ್ಥ ಹಾಗೂ ಮೋದಿ ಪರ ಪ್ರಚಾರ ಮಾಡುತ್ತಿದ್ದ ಮಹೇಶ್‌ ವಿಕ್ರಂ ಹೆಗ್ಡೆ ಅವರನ್ನು ಬಂಧಿಸುವ ಮೂಲಕ ರಾಜ್ಯ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ.

ಮೋದಿ ವಿರುದ್ಧ ಸಚಿವ ಜಮೀರ್‌ ಅಹ್ಮದ್‌, ಬೇಳೂರು ಗೋಪಾಲಕೃಷ್ಣ ಅವಹೇಳನಕಾರಿಯಾಗಿ ಮಾತನಾಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. ಪೋಸ್ಟ್‌ ಕಾರ್ಡ್‌ ಜಾಲತಾಣದ ಮಹೇಶ್‌ ಹೆಗ್ಡೆ, ಮಂಡ್ಯದಲ್ಲಿ ಸುಮಲತಾ ಪರ ಕೆಲಸ ಮಾಡಿದವರಿಗೆ ಸರ್ಕಾರ ಕಿರುಕುಳ ನೀಡುತ್ತಿದೆ. ಸರ್ಕಾರದ ನಡೆ ಪ್ರಶ್ನಿಸಿದ್ದಕ್ಕೆ ಹುಬ್ಬಳ್ಳಿಯಲ್ಲಿ ಯುವತಿಯನ್ನು ಬಂಧಿಸಲಾಗಿದೆ.

ಈ ಸರ್ಕಾರದ ಆಯಸ್ಸು ತುಂಬಾ ಕಡಿಮೆ. ಅಲ್ಲಿಯವರೆಗೆ ಇಂತಹ ಅನೇಕ ಪ್ರಕರಣ ನಡೆಯಲಿವೆ. ಇದನ್ನೆಲ್ಲ ಬಿಟ್ಟು, ಸರ್ಕಾರ ಬರ ನಿರ್ವಹಣೆ ಕಡೆಗೆ ಗಮನ ನೀಡಬೇಕು ಎಂದು ಆಗ್ರಹಿಸಿದರು. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್‌, ಸಹ ವಕ್ತಾರರಾದ ಎ.ಎಚ್‌. ಆನಂದ್‌, ಎಸ್‌. ಪ್ರಕಾಶ್‌ ಸುದ್ದಿಗೋಷ್ಠಿಯಲ್ಲಿದ್ದರು.

ಕೇಂದ್ರ ಚುನಾವಣಾ ಆಯೋಗಕ್ಕೆ ದೂರು: ಮತದಾರರ ಪಟ್ಟಿಯಿಂದ ಅನುಮಾನಾಸ್ಪದವಾಗಿ ಅನೇಕ ಹೆಸರುಗಳು ಡಿಲೀಟ್‌ ಆಗಿದ್ದರ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುತ್ತದೆ. ಅಭ್ಯರ್ಥಿಗಳು ಹಾಗೂ ಪಕ್ಷಕ್ಕೆ ಚುನಾವಣೆಗೂ ಮುನ್ನ ನೀಡುವ ಮತದಾರರ ಪಟ್ಟಿಗೂ ಚುನಾವಣಾಧಿಕಾರಿ ಬಳಿ ಇರುವ ಪಟ್ಟಿಗೂ ವ್ಯತ್ಯಾಸವಾಗಿದೆ.

ಇದ್ದ ಹೆಸರುಗಳ ಮೇಲೆ ಯಾವುದೇ ಕಾರಣವಿಲ್ಲದೆ ಡಿಲೀಟ್‌ ಠಸ್ಸೆ ಒತ್ತಲಾಗಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಲಿದ್ದೇವೆ. ಎರಡು ಹಂತಗಳಲ್ಲಿ ಚುನಾವಣೆ ಉತ್ತಮವಾಗಿ ನಡೆದಿದ್ದು, ಬಿಜೆಪಿ ಹಾಗೂ ಮೋದಿ ಪರ ಅಲೆ ಪ್ರಬಲವಾಗಿದೆ. 20-22 ಸ್ಥಾನಗಳನ್ನು ಜಯಿಸುವ ವಿಶ್ವಾಸವಿದೆ ಎಂದು ಅರವಿಂದ ಲಿಂಬಾವಳಿ ಹೇಳಿದರು.

ಟಾಪ್ ನ್ಯೂಸ್

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.