ಮಹದಾಯಿ ಬಂದ್ ವೇಳೆ ಆಸ್ತಿ ಪಾಸ್ತಿ ನಷ್ಟ ಮಾಡಿದವರಿಗೆ ಹೈಕೋರ್ಟ್ ನೋಟೀಸ್
Team Udayavani, Sep 27, 2019, 3:16 PM IST
ಬೆಂಗಳೂರು: ಮಹದಾಯಿ ನ್ಯಾಯಾಧೀಕರಣ ತೀರ್ಪು ವಿರೋಧಿಸಿ 2018ರ ಏಪ್ರಿಲ್ ಹಾಗೂ ಆಗಸ್ಟ್ ನಲ್ಲಿ ರಾಜ್ಯದ ವಿವಿಧೆಡೆ ನಡೆದ ಬಂದ್ ಮತ್ತು ಪ್ರತಿಭಟನೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ತಿ ನಷ್ಟ ಉಂಟು ಮಾಡಿದ ಹಿನ್ನೆಲೆಯಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕವಾಗಿ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು, ವಿವಿಧ ಕನ್ನಡಪರ ಹಾಗೂ ರೈತಪರ ಸಂಘಟನೆಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
2018ರಲ್ಲಿ ಸಲ್ಲಿಕೆಯಾಗಿರುವ ಈ ಅರ್ಜಿಯಲ್ಲಿ ಅರ್ಜಿದಾರರ ಪರ ವಕೀಲರು ರಾಜಕೀಯ ಪಕ್ಷಗಳು, ವಿವಿಧ ಕನ್ನಡ ಪರ ಮತ್ತು ರೈತಪರ ಸಂಘಟನೆಗಳನ್ನು ಪ್ರತಿವಾದಿಯನ್ನಾಗಿ ಸೇರಿಸಿ ನ್ಯಾಯಾಲಯಕ್ಕೆ ಮೆಮೋ ಸಲ್ಲಿಸಿದರು. ಅದರಂತೆ, ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್, ಭಾರತೀಯ ಜನತಾ ಪಕ್ಷ, ಜಾತ್ಯತೀತ ಜನತಾದಳ, ಆಮ್ ಆದ್ಮಿ ಪಕ್ಷ, ಸಿಪಿಐ, ಸಿಪಿಎಂ, ಕರ್ನಾಟಕ ರಕ್ಷಣಾ ವೇದಿಕೆ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸೇರಿದಂತೆ ಇನ್ನಿತರ ರಾಜಕೀಯ ಪಕ್ಷಗಳು ಮತ್ತು ಕನ್ನಡಪರ ಸಂಘಟನೆಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಹಾಗೆಯೇ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ನಡೆಸಿದ ಪ್ರತಿಭಟನೆ ವೇಳೆ ಸರ್ಕಾರಿ ಹಾಗೂ ಇತರೆ ಆಸ್ತಿಪಾಸ್ತಿ ನಷ್ಟ ಉಂಟು ಮಾಡಿದ ತಪ್ಪಿತಸ್ಥರನ್ನು ಗುರುತಿಸಲು ಹಾಗೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್ ಅರ್ಜಿಯ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.