ಮುಂದುವರಿದ ಜೆಡಿಎಸ್ “ಆತ್ಮಾವಲೋಕನ’
ಪಕ್ಷ ಕಟ್ಟುವ ಛಲವಿದ್ದವರಿಗೆ ಅವಕಾಶ: ಎಚ್‌ಡಿಕೆ
Team Udayavani, Jun 10, 2023, 8:15 AM IST
ಬೆಂಗಳೂರು: ಜೆಡಿಎಸ್‌ನ “ಆತ್ಮಾವಲೋಕನ’ ಮುಂದುವರಿದಿದ್ದು, ಮುಂಬರುವ ಲೋಕಸಭೆ ಚುನಾವಣೆ ಹಾಗೂ ಜಿಲ್ಲಾ , ತಾಲೂಕು ಪಂಚಾಯತ್ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಸಂಕಲ್ಪದೊಂದಿಗೆ ಪಕ್ಷ ಸಂಘಟನೆ ವಿಷಯದಲ್ಲಿ ಕೆಲವು ಕಠಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಾಲ್ಕನೇ ದಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆ ಗಳ ಜಿಲ್ಲಾ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಕುಮಾರಸ್ವಾಮಿ ಮಾತನಾಡಿದರು.
ಪಕ್ಷದ ಪದಾಧಿಕಾರಿಗಳನ್ನು ಮುಲಾಜಿಲ್ಲದೆ ಬದಲಾಯಿಸಿ ಯುವಜನರಿಗೆ ಆದ್ಯತೆ ನೀಡುತ್ತೇವೆ. ಪಕ್ಷ ಕಟ್ಟುವ ಉತ್ಸಾಹಿಗಳಿಗೆ ಹಾಗೂ ಬದ್ಧತೆಯಿಂದ ಕೆಲಸ ಮಾಡುವವರಿಗೆ ಅವಕಾಶ ನೀಡಲಾಗುವುದು. ಮುಂದಿನ ಚುನಾವಣೆಗಳನ್ನು ಜಿಲ್ಲಾ , ತಾಲೂಕು, ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಎಲ್ಲ ಹಂತದಲ್ಲೂ ಬದಲಾವಣೆ ಖಚಿತ ಎಂದು ಕುಮಾರಸ್ವಾಮಿ ಹೇಳಿದರು.
ಜಿಲ್ಲೆ ಗಳಲ್ಲಿ ಸಭೆ ಮಾಡಿ ಜಿಲ್ಲಾ ಘಟಕಗಳನ್ನು ಸರಿಪಡಿಸಲಾಗುವುದು. ಪಕ್ಷ ಸಂಘಟನೆ ಮಾಡದಿರುವ ಜಿಲ್ಲಾ ಧ್ಯಕ್ಷರನ್ನು ಹಾಗೂ ಚುನಾವಣೆಗೆ ಸಮರ್ಥ ಅಭ್ಯರ್ಥಿಗಳನ್ನು ತಯಾರು ಮಾಡಲಾಗದವರನ್ನು ಬದಲಾಯಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ, ಶಾಸಕರಾದ ನೇಮಿರಾಜ್ ನಾಯಕ್, ರಾಜುಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ಸಹಿತ ಆಯಾ ಜಿಲ್ಲೆ ಗಳ ಅಧ್ಯಕ್ಷರು, ಹಿರಿಯ ನಾಯಕರು, ಶಾಸಕರು, ಅಭ್ಯರ್ಥಿಗಳು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.