HDK ಭೇಟಿಗೆ ಬಿಜೆಪಿಗರಿಂದಲೇ ವಿರೋಧ
ಬಿಜೆಪಿ ನಾಯಕರ ಬಿಡದಿ ಚಲೋಗೆ ಸಂಘದ ಪ್ರಮುಖರ ಬೇಸರ - ಮುಖಂಡರಿಗೆ ಎಚ್ಚರಿಕೆ ಕೊಟ್ಟರೆ ಸಂಘಟನಾ ಪ್ರಧಾನ ಕಾರ್ಯದರ್ಶಿ?
Team Udayavani, Feb 7, 2024, 5:21 AM IST
ಬೆಂಗಳೂರು: ಬಿಜೆಪಿ ನಾಯಕರು ಪದೇಪದೆ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡುತ್ತಿರುವುದು ಕೇಸರಿಪಡೆಯ ಸಂಘಟನ ವಲಯದಲ್ಲಿ ಭಾರೀ ಆಕ್ಷೇಪಕ್ಕೆ ಕಾರಣವಾಗುತ್ತಿದ್ದು, ಬಿಡದಿ ತೋಟದ ಮನೆ ಪರ್ಯಾಯ ಶಕ್ತಿ ಕೇಂದ್ರವಾಗುತ್ತಿರುವುದು ಪಕ್ಷದ ಹಿರಿಯರ ಅಸಹನೆಗೆ ಕಾರಣವಾಗಿದೆ.
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಘೋಷಣೆಯಾದ ಬಳಿಕ ಬಿಜೆಪಿ ನಾಯಕರು ಜಗನ್ನಾಥ ಭವನಕ್ಕಿಂತಲೂ ಹೆಚ್ಚಾಗಿ ಬಿಡದಿ ತೋಟದ ಮನೆಗೆ ಎಡತಾಕುತ್ತಿದ್ದಾರೆ. ಇದರಲ್ಲಿ ಬಹುತೇಕರು ಲೋಕಸಭಾ ಚುನಾವಣ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಅನ್ಯ ಪಕ್ಷದಿಂದ ವಲಸೆ ಬಂದವರ ಜತೆಗೆ ಬಿಜೆಪಿಯಲ್ಲಿ ಹುಟ್ಟಿ-ಬೆಳೆದ ನಾಯಕರು ಕೂಡಾ ಮಲ್ಲೇಶ್ವರದ ಬದಲು ರಾಮನಗರದತ್ತ ರಥಯಾತ್ರೆ ನಡೆಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಈ ರೀತಿ ರಾಜಕೀಯ ತಳಿ ಸಂಕರ ಭವಿಷ್ಯದಲ್ಲಿ ವ್ಯತಿರಿಕ್ತ ಪರಿಣಾಮವನ್ನುಂಟು ಮಾಡಬಹುದೆಂಬ ಚರ್ಚೆ ಪಕ್ಷದ ವಲಯದಲ್ಲಿ ತೀವ್ರವಾಗುತ್ತಿದ್ದು, ಸಂಘದಿಂದ ಸಂಘಟನೆಗೆ ನಿಯೋಜನೆಗೊಂಡ ಪ್ರಧಾನ ಕಾರ್ಯದರ್ಶಿಯೊಬ್ಬರು ಪಕ್ಷದ ವೇದಿಕೆಯಲ್ಲೇ ಕೆಲವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಒಂದು ಕಾಲದಲ್ಲಿ ಕುಮಾರಸ್ವಾಮಿ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಆಕ್ಷೇಪ ವ್ಯಕ್ತಪಡಿಸಿದ್ದ ಮಾಜಿ ಸಚಿವರಾದ ಆರ್. ಅಶೋಕ, ಸಿ.ಟಿ. ರವಿ, ವಿ. ಸೋಮಣ್ಣ, ಡಾ| ಕೆ. ಸುಧಾಕರ್, ಸಿ.ಪಿ. ಯೋಗೇಶ್ವರ, ಸಂಸದ ಪ್ರತಾಪ್ ಸಿಂಹ, ರಮೇಶ್ ಜಾರಕಿಹೊಳಿಯವರಂಥ ಘಟಾನುಘಟಿಗಳ ಜತೆಗೆ ಎರಡನೇ ಹಂತದಲ್ಲಿರುವ ಹಲವು ನಾಯಕರು ಬಿಡದಿ ತೋಟದ ಮನೆಗೆ ತೆರಳಿ ಕುಮಾರಸ್ವಾಮಿ ಜತೆ ರಾಜಕೀಯ ಸಮಾಲೋಚನೆ ನಡೆಸಿದ್ದಾರೆ. ಈ ಪರಿಸ್ಥಿತಿ ಮುಂದುವರಿದರೆ ಪಕ್ಷದಲ್ಲಿ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂಬ ಆತಂಕ ಬಿಜೆಪಿ ಹಿರಿಯರನ್ನು ಕಾಡುತ್ತಿದೆ. ಕುಮಾರಸ್ವಾಮಿ ನೀಡಿದ ಸಲಹೆಯನ್ನು ದಿಲ್ಲಿಯಲ್ಲಿ ರಾಷ್ಟ್ರೀಯ ನಾಯಕರು ಪರಿಗಣಿಸುತ್ತಾರೆಂಬ ಕಾರಣಕ್ಕೆ ಬಿಜೆಪಿ ನಾಯಕರು ಜೆಡಿಎಸ್ ಪ್ರಾಂಗಣದಲ್ಲಿ ಕಾವಲು ಸೇವೆ ಪ್ರಾರಂಭಿಸಿದ್ದಾರೆಂಬ ಚರ್ಚೆ ಬಿಜೆಪಿಯಲ್ಲಿ ವ್ಯತಿರಿಕ್ತ ಪರಿಣಾಮ ಮಾಡಲಾರಂಭಿಸಿದೆ.
ರಾಜ್ಯಸಭಾ ಟಿಕೆಟ್‌ಗೆ ಕುಮಾರಸ್ವಾಮಿ ಬೇಡಿಕೆ?
ತಾವು ಯಾವುದಾದರೊಂದು ಕ್ಷೇತ್ರದಿಂದ ಕಣಕ್ಕೆ ಇಳಿದರೆ; ಹಳೇ ಮೈಸೂರು ಭಾಗದಲ್ಲಿ ಉಭಯ ಪಕ್ಷಗಳ ಸಂಘಟನ ಕಾರ್ಯಕ್ಕೆ ತೊಂದರೆಯಾಗಬಹುದೆಂಬ ವಿಚಾರವನ್ನು ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ ವರಿಷ್ಠರ ಮುಂದೆ ಮಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು, ರಾಜ್ಯಸಭಾ ಸ್ಥಾನ ನೀಡುವಂತೆ ಬಿಜೆಪಿ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದಾರೆಂಬ ಮಾುಗಳು ಬಿಜೆಪಿ ವಲಯದಲ್ಲಿ ಕೇಳಿ ಬಂದಿವೆ. ಕುಮಾರಸ್ವಾಮಿಯವರನ್ನು ಮಂಡ್ಯ ಅಥವಾ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಸಬೇಕೆಂಬುದು ರಾಜ್ಯ ಬಿಜೆಪಿ ನಾಯಕರ ಉದ್ದೇಶವಾಗಿದೆ. ಆದರೆ ಹಳೆಯ ಮೈಸೂರು ಭಾಗದ ಯಾವ ಲೋಕಸಭಾ ಕ್ಷೇತ್ರದಲ್ಲೂ, ಜೆಡಿಎಸ್‌ಗೆ ಪೂರಕ ವಾತಾವರಣ ಇಲ್ಲ ಎಂಬ ಮಾಹಿತಿ ಸ್ವತಃ ಕುಮಾರಸ್ವಾಮಿ ನಡೆಸಿದ ಆಂತರಿಕ ಸಮೀಕ್ಷೆಯಿಂದ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಪಕ್ಷ ಸಂಘಟನೆಯ ದಾಳ ಉರುಳಿಸಿದ್ದು, ರಾಜ್ಯಸಭೆಯ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗುತ್ತಿದೆ. ಅದಲ್ಲದೇ ಮಂಡ್ಯ ಕ್ಷೇತ್ರದಲ್ಲಿ ಹಾಲಿ ಸಂಸದೆ ಸೋಮಲತಾ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅಲ್ಲಿ ಕುಮಾರಸ್ವಾಮಿಗೆ ಟಿಕೆಟ್ ನೀಡುವುದು, ಆಂತರಿಕ ತಿಕ್ಕಾಟಗಳಿಗೆ ಕಾರಣವಾಗುವ ಸಾಧ್ಯತೆ ದಟ್ಟವಾಗಿದೆ.
ಕಟ್ಟಾ ಬಿಜೆಪಿಗರ ಕಣ್ಣು ಕೆಂಪಗಾಗಿಸಿದೆ
ಬಿಜೆಪಿಯ ಪದಾಧಿಕಾರಿಗಳ ಪಟ್ಟಿ ತಯಾರಿಸುವ ಸಂದರ್ಭದಲ್ಲಿ ಕುಮಾರಸ್ವಾಮಿಯವರ ಪ್ರಭಾವ ಕೆಲಸ ಮಾಡದೇ ಇರುವುದು ಪಕ್ಷದ ಪುಣ್ಯ ಎಂಬ ವ್ಯಂಗ್ಯ ಕಳೆದ ವಾರ ನಡೆದ ಕೋರ್ ಕಮಿಟಿ ಸಭೆ ಸಂದರ್ಭದಲ್ಲಿ ವ್ಯಕ್ತವಾಗಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಿಡಿತದ ಕ್ಷೇತ್ರದ ಮೇಲೆ ಜೆಡಿಎಸ್‌ನ ಕೆಲವು ನಾಯಕರು ದೃಷ್ಟಿ ಹಾಕಿರುವುದು ಕೂಡಾ ಕಟ್ಟಾ ಬಿಜೆಪಿಗರ ಕಣ್ಣು ಕೆಂಪಗಾಗಿಸಿದೆ. ಲೋಕಸಭಾ ಚುನಾವಣೆ ಸಮೀಪವಾಗುತ್ತಿದ್ದಂತೆ ಈ ಮುಸುಕಿನ ಗುದ್ದಾಟ ಇನ್ನೂ ತೀವ್ರವಾಗುವ ಸಾಧ್ಯತೆ ಇದ್ದು, ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕುಮಾರಸ್ವಾಮಿ ಪಕ್ಷದ ವಿರುದ್ಧ ಮಾಡಿದ ಟೀಕೆ-ವ್ಯಾಖ್ಯಾನಗಳು ಕೆಲವು ನಾಯಕರನ್ನು ಇನ್ನೂ ದುಃಸ್ವಪ್ನದಂತೆ ಕಾಡುತ್ತಿದೆ.
ಇರಿಸು-ಮುರುಸು?
ಬಿಜೆಪಿ ನಾಯಕರು ಪದೇಪದೆ ಕುಮಾರಸ್ವಾಮಿ ಭೇಟಿ ಮಾಡುತ್ತಿರುವುದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪಾಳಯದಲ್ಲೂ ಇರಿಸು-ಮುರುಸು ಸೃಷ್ಟಿ ಮಾಡಿದೆ. ಖುದ್ದು ವಿಜಯೇಂದ್ರ ಅವರೇ ತಮ್ಮ ಆಪ್ತ ವಲಯದಲ್ಲಿ ಈ ಬಗ್ಗೆ ಬೇಸರ ತೋಡಿಕೊಂಡಿದ್ದಾರೆ ಎಂದೂ ಹೇಳಲಾಗುತ್ತಿದೆ. ಈ ಕಾರಣಕ್ಕಾಗಿಯೇ ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಚರ್ಚೆಯನ್ನು ಡಾಲರ್ಸ್ ಕಾಲನಿಯಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ಕರೆದು ಅದಕ್ಕೆ ಕುಮಾರಸ್ವಾಮಿಯವರನ್ನು ಆಹ್ವಾನಿಸಲಾಗಿತ್ತು ಎಂಬುದು ಬಿಜೆಪಿ ವಲಯದ ಮಾತು.
ರಾಘವೇಂದ್ರ ಭಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.