ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಹರಿದು ಸಾವು
Team Udayavani, Jun 10, 2023, 5:51 AM IST
ಬಂಟ್ವಾಳ: ಸಜಿಪ ಮುನ್ನೂರಿನ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ಅಡಿಕೆ ಮರದಿಂದ ಅಡಿಕೆ ಕೊಯ್ಯುತ್ತಿದ್ದ ವೇಳೆ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ.
ಬೋಳಿಯಾರು ಗ್ರಾಮದ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಶಾಫಿ (28) ಮೃತಪಟ್ಟವರು. ಬೆಳಗ್ಗೆ ಸುಮಾರು 11.15ರ ಆಸುಪಾಸಿನಲ್ಲಿ ಘಟನೆ ಸಂಭವಿಸಿದೆ. ಶಾಫಿ ಅವರು ಕಳೆದ ಕೆಲವು ವರ್ಷಗಳಿಂದ ಅಡಿಕೆ ವ್ಯವಹಾರ ನಡೆಸುತ್ತಿದ್ದರು. ಅಡಿಕೆಯನ್ನು ಗಿಡದಿಂದಲೇ ಕ್ರಯಕ್ಕೆ ಪಡೆದು ಬಳಿಕ ಅದನ್ನು ಕೊಯ್ಯುವುದು ಹೀಗೆ ಕೆಲಸ ಮಾಡಿಕೊಂಡಿದ್ದರು.
ದೋಟಿಯಿಂದ ಅಡಕೆ ಕೀಳುವಾಗ ಶಾಫಿ ಅವರ ಕೈಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ತಂತಿಗೆ ತಾಗಿದೆ. ಆದರಲ್ಲಿ ಅಳವಡಿಸಿದ್ದ ಕಬ್ಬಿಣದ ಕತ್ತಿಯ ಮೂಲಕ ವಿದ್ಯುತ್ ಪ್ರವಹಿಸಿ ಶಾಫಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಸಜೀಪಮುನ್ನೂರು ಗ್ರಾಮಕರಣಿಕರಾದ ಸ್ವಾತಿ, ಮೆಸ್ಕಾಂನ ಅಧಿಕಾರಿಗಳು ಹಾಗೂ ಬಂಟ್ವಾಳ ಗ್ರಾಮಾಂತರ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.