ಕರಿಬೇವು ಒಗ್ಗರಣೆಗೆ ಮಾತ್ರವಲ್ಲ…ಆರೋಗ್ಯದ ದೃಷ್ಠಿಯಲ್ಲೂ ಹಲವು ಉಪಯೋಗವಿದೆ
ತೂಕ ಮತ್ತು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಕಾವ್ಯಶ್ರೀ, Feb 14, 2023, 5:26 PM IST
ಕರಿಬೇವು ಅಡುಗೆಯ ರುಚಿ ಹೆಚ್ಚಿಸಲು ಸಾಮಾನ್ಯವಾಗಿ ಬಳಸಲಾಗುತ್ತದೆ. ಕರಿಬೇವು ಬಳಸಿ ಒಗ್ಗರಣೆ ಹಾಕುವುದು ಇಲ್ಲಿನ ಪದ್ಧತಿ. ಆದರೆ ಕರಿಬೇವಿನಲ್ಲೂ ಹಲವಾರು ಆರೋಗ್ಯಕರ ಸಂಗತಿಗಳು ಇವೆ ಎಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. ದಕ್ಷಿಣ ಭಾರತದ ಅಡುಗೆಗಳು.. ಅದರಲ್ಲೂ.. ವಿಶೇಷ ಅಡುಗೆಗಳಿಗೆ ಕರಿಬೇವಿನ ಎಲೆಗಳಿಲ್ಲದೆ ಇದ್ದರೆ ಅಡುಗೆ ಅಪೂರ್ಣ ಎನಿಸಿಬಿಡುತ್ತದೆ.
ಅಂತಹ ಕರಿಬೇವಿನ ಸೊಪ್ಪು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ, ಇದು ಆರೋಗ್ಯಕ್ಕೂ ಒಳ್ಳೆಯದು. ಕರಿಬೇವು ಅಡುಗೆಯಲ್ಲಿ ಬಳಸಿದರೂ ಸೇವಿಸುವಾಗ ಅದನ್ನು ಬದಿಗೆ ಸರಿಸಿ ಬಿಸಾಡುವವರು ಅಧಿಕ ಮಂದಿ. ಕರಿಬೇವಿನ ಎಲೆಗಳ ಪ್ರಯೋಜನಗಳ ಬಗ್ಗೆ ತಿಳಿದರೆ ನೀವು ಮುಂದೆ ಕರಿಬೇವು ಸೇವಿಸುವ ಅಭ್ಯಾಸ ರೂಢಿಸಿಕೊಳ್ಳಬಹುದು.
ಮಧುಮೇಹ ನಿಯಂತ್ರಣ: ಕರಿಬೇವು ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಹೈಪೊಗ್ಲಿಸಿಮಿಕ್ ಎಂಬ ಗುಣಲಕ್ಷಣ ಹೊಂದಿವೆ. ಇದರ ಸೇವನೆಯಿಂದ ದೇಹದಲ್ಲಿರುವ ಸಕ್ಕರೆ ಪ್ರಮಾಣವನ್ನು ನಿಯಂತ್ರಣವಾಗುತ್ತದೆ.
ಜೀರ್ಣಕ್ರಿಯೆಗೆ ಉತ್ತಮ: ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ ಕರಿಬೇವಿನ ಎಲೆಗಳನ್ನು ಜಗಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುವುದು ಮಾತ್ರವಲ್ಲದೇ ಮಲಬದ್ಧತೆ, ಆಮ್ಲೀಯತೆ, ಹೊಟ್ಟೆ ಉಬ್ಬುವುದು ಸೇರಿದಂತೆ ಹೊಟ್ಟೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ.
ಶೀತ, ಕೆಮ್ಮಿಗೂ ಉಪಯುಕ್ತ: ಕರಿಬೇವಿನ ಸೇವನೆಯಿಂದ ಶ್ವಾಸಕೋಶದ ಆರೋಗ್ಯ ವೃದ್ಧಿಯಾಗುತ್ತದೆ. ಅದರೊಂದಿಗೆ ಕೆಮ್ಮು, ನೆಗಡಿ, ಅಸ್ತಮಾದಂತಹ ಸಮಸ್ಯೆಗಳು ದೂರವಾಗುತ್ತದೆ.
ಕೊಲೆಸ್ಟ್ರಾಲ್ ನಿಯಂತ್ರಣ: ನಮ್ಮ ದಿನನಿತ್ಯದ ಆಹಾರದಲ್ಲಿ ಕರಿಬೇವಿನ ಬಳಕೆ ದೇಹದಲ್ಲಿನ ಕೊಲೆಸ್ಟ್ರಾಲ್ನ್ನು ನಿಯಂತ್ರಿಸುತ್ತದೆ. ಕರಿಬೇವಿನ ಎಲೆಗಳನ್ನು ಜಗಿಯುವುದು ಕೂಡಾ ತೂಕ ಮತ್ತು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಕಣ್ಣಿನ ಆರೋಗ್ಯ: ಕರಿಬೇವಿನ ಸೊಪ್ಪಿನಲ್ಲಿ ವಿಟಮಿನ್ ಎ ಪೋಷಕಾಂಶ ಇರುವುದರಿಂದ ಕಣ್ಣಿನ ದೃಷ್ಟಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಕರಿಬೇವಿನ ಎಲೆಗಳನ್ನು ತಿನ್ನುವುದರಿಂದ ಇರುಳು ಕುರುಡುತನ ನಿವಾರಣೆಯಾಗುತ್ತದೆ. ಅದರೊಂದಿಗೆ ಕಣ್ಣುಗಳಿಗೆ ಸಂಬಂಧಿಸಿದ ಇತರ ಅನೇಕ ಕಾಯಿಲೆಗಳನ್ನು ತಡೆಯುತ್ತದೆ.
ಚರ್ಮದ ಕಾಂತಿ ಹೆಚ್ಚಿಸಲು: ಕರಿಬೇವಿನ ಎಲೆಗಳಲ್ಲಿರುವ ಗುಣಗಳು ಚರ್ಮದ ಕಾಂತಿ ಹೆಚ್ಚಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ದಿನನಿತ್ಯದ ಅಡುಗೆಯಲ್ಲಿ ಕರಿಬೇವು ಉಪಯೋಗಿಸುವುದು ಸಹಕಾರಿಯಾಗಲಿದೆ.
ಮೂತ್ರ ಸಂಬಂಧಿ ಕಾಯಿಲೆಗೆ: ಕರಿಬೇವನ್ನು ಕುದಿಸಿ, ಕಷಾಯ ಮಾಡಿ ಕುಡಿಯುವುದು ಮೂತ್ರಕ್ಕೆ ಸಂಬಂಧಿಸಿದ ಕಾಯಿಲೆಗೆ ಉತ್ತಮ ಪರಿಹಾರ.
ಕೂದಲು ಸಮಸ್ಯೆ: ದೇಹದಲ್ಲಿ ಪೋಷಕಾಂಶಗಳ ಕೊರತೆಯಾದರೆ ಸಣ್ಣ ವಯಸ್ಸಿನಲ್ಲೇ ಕೂದಲು ಬಿಳಿಯಾಗಿಬಿಡುತ್ತದೆ. ಇಂತಹ ಸಮಸ್ಯೆಯನ್ನು ಕರಿಬೇವಿನ ಆಹಾರದಿಂದ ತಡೆಯಬಹುದು. ಬಿಳಿ ಕೂದಲಿನ ಸಮಸ್ಯೆ ಮಾತ್ರವಲ್ಲದೇ ಕೂದಲ ಬೆಳವಣಿಗೆಗೆ, ಕೂದಲು ಉದುರುವುದು ತಡೆಗಟ್ಟಲು, ತಲೆಹೊಟ್ಟುವಿನಂತಹ ಸಮಸ್ಯೆಗಳಿಗೆ ಕರಿಬೇವಿನ ಎಲೆಗಳು ಸಹಕಾರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು
Winter: ಚಳಿಗಾಲದಲ್ಲಿ ಆರೋಗ್ಯಕರವಾಗಿರಲು ಸೇವಿಸಬೇಕಾದ ಆಹಾರಗಳು ಇವು…
Zakir Hussain ; ಸರಸ್ವತಿ, ಗಣಪತಿಯ ಆರಾಧಕರಾಗಿದ್ದರು ತಬಲಾ ಮಾಂತ್ರಿಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.