ಕೊರೊನಾ ಚಿಕಿತ್ಸೆಗೆ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರ ಸಜ್ಜು
Team Udayavani, Apr 25, 2021, 6:20 AM IST
ಮೂಡುಬಿದಿರೆ: ಕೋವಿಡ್ ಪಾಸಿಟಿವ್ ಆಗಿ ಕಂಡು ಬಂದವರಿಗೆ ಈಗ ಹೋಂ ಐಸೋಲೇಶನ್ ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ. ಪ್ರತ್ಯೇಕವಾದ ಸ್ನಾನದ ಕೋಣೆ, ಶೌಚಾಲಯದೊಂದಿಗೆ ಬೆಡ್‌ರೂಮ್‌ನ ವ್ಯವಸ್ಥೆ ಇರುವವರಿಗೆ ಹೋಂ ಐಸೋಲೇಶನ್‌ಗೆ ಅವಕಾಶ ಕಲ್ಪಿಸಲಾಗಿದೆ. ಇಂಥ ಸೌಕರ್ಯಗಳಿಲ್ಲದವರಿಗೆ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಳೆದ ಸಾಲಿನಿಂದಲೇ 6 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ.
ಹಳೆ ಕಟ್ಟಡದಲ್ಲಿರುವ ಈ ವ್ಯವಸ್ಥೆ ಮುಂದಕ್ಕೆ ಅಗತ್ಯ ನೋಡಿಕೊಂಡು ಹೊಸ ಕಟ್ಟಡಕ್ಕೆ ವರ್ಗಾಯಿಸುವ ಯೋಜನೆ ಇದೆ. ಹೊಸ ಕಟ್ಟಡದಲ್ಲಿ ಕೇಂದ್ರೀಕೃತ ಆಮ್ಲಜನಕ ಲೈನ್ ರೂಪಿಸಲಾಗಿದ್ದು ಸಿಲಿಂಡರ್ ಇನ್ನಷ್ಟೇ ಬರಬೇಕಾಗಿದೆ. ಕೋವಿಡ್ ಶಂಕೆಯನ್ನು ದೃಢಪಡಿಸಲು ಗಂಟಲ ದ್ರವ ಪರೀಕ್ಷೆಯ ವ್ಯವಸ್ಥೆ ಕಾರ್ಯಾಚರಿಸುತ್ತಿದೆ. ಆದರೆ ಜನ ಯಾವುದೋ ಕಾರಣದಿಂದ ಅಷ್ಟಾಗಿ ಮುಂದೆ ಬರುತ್ತಿಲ್ಲದ ಸ್ಥಿತಿ ಇದೆ. ಇನ್ನು ಇಲ್ಲಿ ಅಗತ್ಯವಾಗಿ ಬೇಕಾಗಿರುವುದು ವೆಂಟಿಲೇಟರ್ ವ್ಯವಸ್ಥೆ.
ಅದಿನ್ನೂ ಆಗಿಲ್ಲ. ಉಳಿದಂತೆ, ಆಸ್ಪತ್ರೆಯಲ್ಲಿ ಆಡಳಿತ ಮುಖ್ಯ ವೈದ್ಯಾಧಿಕಾರಿ ಡಾ| ಶಶಿಕಲಾ ಸಹಿತ ಈಗಿರುವ ವೈದ್ಯಕೀಯ ಸಿಬಂದಿಗಳೇ ಕೋವಿಡ್ ಪಾಸಿಟಿವ್ ರೋಗಿಗಳನ್ನು ನೋಡಿಕೊಳ್ಳುತ್ತಿದ್ದಾರೆ. ಸದ್ಯ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಲಸಿಕೆ ನೀಡುವ ಪ್ರಕ್ರಿಯೆ
ಗುರುವಾರ ಹೊರತುಪಡಿಸಿ ಉಳಿದೆಲ್ಲ ದಿನಗಳಲ್ಲಿ ಬೆಳಗ್ಗೆ 10ರಿಂದ ಅಪರಾಹ್ನ 4ರ ವರೆಗೆ ಲಸಿಕೆ ನೀಡಲಾಗುತ್ತಿದೆ.
ಉಳಿದಂತೆ ಸಮುದಾಯ ಆರೋಗ್ಯ ಕೇಂದ್ರದವರು ಅಲ್ಲಲ್ಲಿ ಸ್ಥಳೀಯರ ಸಹಕಾರದಲ್ಲಿ ನಡೆಸುತ್ತಿರುವ ಶಿಬಿರಗಳಲ್ಲಿ ಬೆಳಗ್ಗೆ 10ರಿಂದ 2ರ ವರೆಗೆ (ಕೆಲವೆಡೆ ಗಂ.1) ಲಸಿಕೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.