Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Team Udayavani, Nov 19, 2024, 2:02 AM IST
ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆಯಿಲ್ಲ. ಆದರೆ ತಾಂತ್ರಿಕ ಕಾರಣದಿಂದ ಟೆಂಡರ್ ವಿಳಂಬವಾಗಿದೆ. ಈ ವರ್ಷವೂ ಇಂಡೆಂಟ್ ಪ್ರಕಾರವೇ ಔಷಧ ಖರೀದಿಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗಾರರಿಗೆ ತಿಳಿಸಿದರು.
ನಮ್ಮ ಸರಕಾರ ಬಂದ ಆರಂಭದಲ್ಲಿ ಕೇವಲ ಶೇ. 40ರಷ್ಟು ಔಷಧ ಮಾತ್ರ ಸಿಗುತ್ತಿತ್ತು. ಉಳಿದ ಔಷಧಗಳನ್ನು ಆಸ್ಪತ್ರೆಗಳಲ್ಲೇ ಖರೀದಿ ಮಾಡಲಾಗುತ್ತಿತ್ತು. ಈಗ ಶೇ. 75ರಷ್ಟು ಔಷಧ ವೈದ್ಯಕೀಯ ಸರಬರಾಜು ನಿಗಮದಿಂದಲೇ ಪೂರೈಕೆಯಾಗುತ್ತಿದೆ. ಸರಕಾರಿ ಆಸ್ಪತ್ರೆಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ಯಾವ ಔಷಧ ಇಲ್ಲವೋ ಅಂತಹವನ್ನು ಸ್ಥಳೀಯವಾಗಿ ಖರೀದಿಸಲು ಸೂಚನೆ ನೀಡಲಾಗಿದೆ. ಈ ಮೂಲಕ ಔಷಧ ಕೊರತೆಯಾಗದಂತೆ ನೋಡಿಕೊಳ್ಳುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.