ನಿಂಬೆ ಹಣ್ಣಿನಿಂದ ಆರೋಗ್ಯ ವೃದ್ಧಿ
ನಿಂಬೆ ಹಣ್ಣಿನಲ್ಲಿರುವ ಸಿಟ್ರಿಕ್ ಆಮ್ಲವು ಕಿಡ್ನಿಯಲ್ಲಿರುವ ಕಲ್ಲುಗಳನ್ನು ಕರಗಿಸಿ ಕಿಡ್ನಿಸ್ಟೋನ್ ನಿವಾರಿಸುವಲ್ಲಿ ಸಹಕರಿಸುತ್ತದೆ
Team Udayavani, Nov 27, 2020, 11:00 AM IST
ನಿಂಬೆ ಹಣ್ಣನ್ನು ನಮ್ಮ ದಿನನಿತ್ಯದ ಅಡುಗೆಯಲ್ಲಿ ಹೆಚ್ಚಾಗಿ ಬಳಸುವುದರಿಂದ ಅದರಲ್ಲಿರುವ ಆರೋಗ್ಯಕರ ಗುಣಗಳು ನಮ್ಮ ಆರೋಗ್ಯವನ್ನು ಕಾಪಾಡುವುದರ ಜತೆಗೆ ಕಾಯಿಲೆ ಮುಕ್ತರನ್ನಾಗಿಸುತ್ತದೆ.
ಚಿಕಿತ್ಸಾ ಗುಣಗಳು:
ನೆಗಡಿ ಮತ್ತು ಫೂ ಶಮನಕಾರಿ: ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ ಇರುವುದರಿಂದ ಇದು ಸೋಂಕು ತಗುಲದಂತೆ ನೋಡಿಕೊಳ್ಳುತ್ತದೆ ಮತ್ತು ನೆಗಡಿಯಿಂದ ನಮ್ಮನ್ನು ರಕ್ಷಿಸುತ್ತದೆ.
ದೊಡ್ಡ ಕರುಳನ್ನು ಸ್ವತ್ಛಗೊಳಿಸುತ್ತದೆ: ನಿಂಬೆ ಸೇವನೆಯಿಂದ ಕರುಳಿನಲ್ಲಿ ತ್ಯಾಜ್ಯದ ಸುಲಭ ಚಲನೆಗೆ ಸಹಕಾರಿ. ನಿಂಬೆ ರಸವನ್ನು ಪ್ರತಿದಿನ ಬೆಳಗ್ಗೆ ನೀರಿನೊಂದಿಗೆ ಸೇರಿಸಿ ಕುಡಿದರೆ ಇನ್ನಷ್ಟು ಉತ್ತಮ.
ಕ್ಯಾನ್ಸರ್ ದೂರಗೊಳಿಸಲು ಸಹಕಾರಿ: ನಿಂಬೆ ಹಣ್ಣು 22 ಕ್ಯಾನ್ಸರ್ ಪ್ರತಿಬಂಧಕ ಸಂಯುಕ್ತಗಳನ್ನು ಹೊಂದಿದೆ.
ಲಿವರ್ ಸಮಸ್ಯೆಗೆ ರಾಮಬಾಣ: ಒಂದು ಲೋಟ ನೀರಿಗೆ ನಿಂಬೆ ರಸವನ್ನು ಸೇರಿಸಿ ಕುಡಿಯುವುದರಿಂದ ಲಿವರ್ ಆರೋಗ್ಯ ಕಾಪಾಡಬಹುದು.
ಸಮತೋಲನ ಕಾಪಾಡುತ್ತದೆ: ನಿಂಬೆ ಹಣ್ಣು ಆಮ್ಲಿàಯವಾಗಿದ್ದು, ಅದು ದೇಹದ ಪಚನ ಕ್ರಿಯೆಯಲ್ಲಿ ಪಾತ್ರವಹಿಸುತ್ತದೆ. ದೇಹದ ವಿವಿಧ ದ್ರವಗಳ ಮೆಲೆ ಪ್ರತ್ಯಾಮ್ಲಿàಯ ಪರಿಣಾಮವನ್ನು ಉಂಟು ಮಾಡುತ್ತದೆ.
ಅಲರ್ಜಿಯಿಂದ ಮುಕ್ತಿ: ನಿಂಬೆ ಹಣ್ಣು ಅಲರ್ಜಿಯನ್ನು ದೂರಗೊಳಿಸುವ ಶಕ್ತಿಯನ್ನು ಹೊಂದಿದೆ.
ನರಸಂಬಂಧಿ ರೋಗ ಮುಕ್ತಿ: ನಿಂಬೆ ಹಣ್ಣಿನ ಸಿಪ್ಪೆಯಲ್ಲಿ ಅತಿಯಾದ ರೋಗನಿರೋಧಕ ಶಕ್ತಿಯನ್ನು ಹೊಂದಿರುವುದರಿಂದ ಮಿದುಳಿಗೆ ಸಂಬಂಧಿಸಿದ ದೋಷಗಳನ್ನು ಕಡಿಮೆಗೊಳಿಸಿ ಉತ್ತಮ ಆರೋಗ್ಯವನ್ನು ನೀಡುತ್ತದೆ.
ಕಣ್ಣಿನ ವ್ಯಾಧಿಗಳು: ನಿಂಬೆ ಹಣ್ಣಿನಲ್ಲಿರುವ ರುಟಿನ್ ಎಂಬ ಅಂಶವು ಡಯಾಬೆಟಿಕ್ ರೆಟಿನೋಪತಿಯನ್ನು ಒಳಗೊಂಡಿರುವುದರಿಂದ, ಅನೇಕ ಕಣ್ಣಿನ ರೋಗಗಳನ್ನು ನಿವಾರಿಸುತ್ತದೆ.
ಡಯಾಬಿಟಿಸ್ ನಿಯಂತ್ರಣ: ನಿಂಬೆ ಹಣ್ಣಿನಲ್ಲಿರುವ ಹೆಸ್ಪರ್‌ಟೈನ್ ಎಂಬ ರಾಸಾಯನಿಕವು ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ಕಡಿಮೆ ಮಾಡುವುದರಿಂದ ಮಧುಮೇಹವನ್ನು ನಿಯಂತ್ರಿಸುವಲ್ಲಿ ಸಹಕರಿಸುತ್ತದೆ.
ಕಿಡ್ನಿಯಲ್ಲಿನ ಕಲ್ಲುಗಳು: ನಿಂಬೆ ಹಣ್ಣಿನಲ್ಲಿರುವ ಸಿಟ್ರಿಕ್ ಆಮ್ಲವು ಕಿಡ್ನಿಯಲ್ಲಿರುವ ಕಲ್ಲುಗಳನ್ನು ಕರಗಿಸಿ ಕಿಡ್ನಿಸ್ಟೋನ್ ನಿವಾರಿಸುವಲ್ಲಿ ಸಹಕರಿಸುತ್ತದೆ.
ತಾರುಣ್ಯವನ್ನು ಕಾಪಾಡುತ್ತದೆ: ನಿಂಬೆ ಹಣ್ಣಿನಲ್ಲಿರುವ ವಿಟಮಿನ್ ಸಿ ದೇಹದಲ್ಲಿ ರಾಡಿಕಲ್ಸ್‌ಗಳನ್ನು ತಟಸ್ಥಗೊಳಿಸುತ್ತದೆ. ಇದರಿಂದ ನಮ್ಮ ತಾರುಣ್ಯ ಇನ್ನಷ್ಟು ಹೆಚ್ಚುತ್ತದೆ.
ಸಿಟ್ರಿಕ್ ಆ್ಯಸಿಡ್ ಇರುವುದರಿಂದ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ. ನಿಂಬೆ ರಸವನ್ನು ದಿನನಿತ್ಯ ಸೇವಿಸುವುದರಿಂದ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ.
ಮೊಡವೆಯಿಂದ ಮುಕ್ತಿ: ಪ್ರತಿ ದಿನ ನಿಂಬೆ ರಸ ಮುಖಕ್ಕೆ ಹಚ್ಚಿ 5 ನಿಮಿಷದ ಬಳಿಕ ಮುಖ ತೊಳೆಯುವುದರಿಮದ ಮೊಡವೆ ಸಮಸ್ಯೆಯನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ
Mother: ತಾಯಂದಿರ ಮಾನಸಿಕ ಆರೋಗ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.