Bamboo shoot: ಬಿದಿರಿನ ಚಿಗುರಿನ ಆರೋಗ್ಯ ಮಹತ್ವ-ಮಲೆನಾಡಿನ ನೆಚ್ಚಿನ ಖಾದ್ಯ!
ಕಳಲೆ ಉಪಯೋಗಿಸಿ ವಿವಿಧ ಖಾದ್ಯಗಳನ್ನು ತಯಾರಿಸಿ ಸೇವಿಸಲಾಗುತ್ತದೆ.
ಕಾವ್ಯಶ್ರೀ, Jul 23, 2024, 6:12 PM IST
ಬಿದಿರು ಕಳಲೆ ಅಥವಾ ಬಿದಿರಿನ ಚಿಗುರನ್ನು ಮಳೆಗಾಲ, ಆಟಿ ಸಮಯದಲ್ಲಿ ಮಾತ್ರ ಸೇವಿಸಲಾಗುತ್ತದೆ. ಇದನ್ನು ಆಹಾರದಲ್ಲಿ ಸೇರಿಸುವುದರಿಂದ ನಾವು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಕರಾವಳಿ ಭಾಗದಲ್ಲಿ ಇದನ್ನು ಕಣಿಲೆ ಎಂದು ಕರೆಯಲಾಗುತ್ತದೆ.
ಎಳೆಯ ಬಿದಿರಿನ ಚಿಗುರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ಫೈಬರ್ ಮತ್ತು ಖನಿಜಗಳು ಹೆಚ್ಚಾಗಿರುತ್ತವೆ. ಹಾಗಾಗಿ ಕಳಲೆ ದೇಹದ ಆರೋಗ್ಯ ಹೆಚ್ಚಿಸಲು ಸಹಾಯ ಮಾಡುತ್ತದೆ.
ಇದರಲ್ಲಿರುವ ಔಷಧೀಯ ಗುಣ, ಆರೋಗ್ಯಕರ ಅಂಶ ದೇಹಕ್ಕೆ ಅತ್ಯುತ್ತಮ ಪೋಷಣೆ ನೀಡುತ್ತದೆ. ಕಳಲೆ ಉಪಯೋಗಿಸಿ ವಿವಿಧ ಖಾದ್ಯಗಳನ್ನು ತಯಾರಿಸಿ ಸೇವಿಸಲಾಗುತ್ತದೆ.
ಆಟಿ ತಿಂಗಳಿನಲ್ಲಿ, ಮಳೆಗಾಲದಲ್ಲಿ ಕಳಲೆಯನ್ನು ಒಮ್ಮೆಯಾದರೂ ಸೇವಿಸಬೇಕು ಎಂದು ಹಿರಿಯರು ಹೇಳುವುದನ್ನು ಕೇಳಿರುತ್ತೇವೆ. ಮಳೆಗಾಲದಲ್ಲಿ ಇದನ್ನು ತಿಂದರೆ ಒಳ್ಳೆಯದು. ಇದು ನಮ್ಮ ಹಿರಿಯರಿಂದ ಬಂದ ಆಹಾರ ಪದ್ಧತಿ.
ಕಳಲೆಯಲ್ಲಿರುವ ಫೀನಾಲಿಕ್ ಕಣಗಳು ಕ್ಯಾನ್ಸರ್ ವಿರೋಧಿ ಗುಣ ಹೊಂದಿದೆ. ನಮ್ಮ ದೇಹವನ್ನು ವೈರಸ್‌ಗಳ ವಿರುದ್ಧ ಹೋರಾಡಲು ಕೂಡಾ ಸಹಾಯ ಮಾಡುತ್ತದೆ. ಇತರ ಆರೋಗ್ಯಕರ ಲಾಭಗಳು ಏನೆಂಬುದು ತಿಳಿದುಕೊಳ್ಳೋಣ ..
ಕ್ಯಾನ್ಸರ್ ನಿವಾರಣೆಗೆ:
ಕಳಲೆ ಅಥವಾ ಬಿದಿರಿನ ಚಿಗುರಿನಲ್ಲಿ ಫಿನಾಲಿಕ್ ಎನ್ನುವ ಸಂಯುಕ್ತಗಳಿವೆ. ಇದು ಉತ್ಕರ್ಷಣ ನಿರೋಧಕ ಸ್ವತಂತ್ರ ರಾಡಿಕಲ್ಸ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದು ಆಂಟಿ ವೈರಲ್ ಗುಣಲಕ್ಷಣಗಳನ್ನು ಒಳಗೊಂಡಿರುವುದರಿಂದ ಕ್ಯಾನ್ಸರ್ ನಂತಹ ಕಣಗಳನ್ನು ನಾಶ ಮಾಡುತ್ತದೆ.
ಕೊಲೆಸ್ಟ್ರಾಲ್ ನಿಯಂತ್ರಣ:
ಕಳಲೆ ಅಥವಾ ಬಿದಿರಿನ ಚಿಗುರು ತಿನ್ನುವುದರಿಂದ ನಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ದೇಹಕ್ಕೆ ಅಗತ್ಯವಿಲ್ಲದ ಕೆಟ್ಟ ಕೊಲೆಸ್ಟ್ರಾಲ್ ಕರಗಿಸಲು ಬಿದಿರಿನ ಚಿಗುರು ಸಹಾಯ ಮಾಡುತ್ತದೆ.
ಹೃದಯದ ಆರೋಗ್ಯಕ್ಕೆ:
ಕಳಲೆ ಅಥವಾ ಬಿದಿರಿನ ಚಿಗುರು ಫೈಟೊಸ್ಟೆರಾಲ್‌ಗಳು ಮತ್ತು ಫೈಟೊನ್ಯೂಟ್ರಿಯೆಂಟ್ ಎಂಬ ಅಂಶಗಳು ಹೆಚ್ಚಾಗಿರುತ್ತದೆ. ಇದು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಇದು ಹೃದಯ ಸಮಸ್ಯೆ ಇರುವವರಿಗೆ ಅತ್ಯುತ್ತಮವಾದ ಆಹಾರ. ಕೆಟ್ಟ ಕೊಲೆಸ್ಟ್ರಾಲ್ ವಿರುದ್ಧ ಹೋರಾಡುವುದರ ಜೊತೆಗೆ ರಕ್ತದ ಸ್ಥಿತಿ ಸಮತೋಲನದಲ್ಲಿ ಇರುವಂತೆ ಮಾಡುವುದು. ಹೃದಯಕ್ಕೆ ಸಂಬಂಧಿಸಿದಂತೆ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ.
ರೋಗನಿರೋಧಕ ಶಕ್ತಿ ಹೆಚ್ಚಿಸಲು:
ಕಳಲೆ ಅಥವಾ ಕಣಿಲೆಯಲ್ಲಿ ಜೀವಸತ್ವಗಳು ಮತ್ತು ಖನಿಜಗಳ ಅಂಶ ಹೆಚ್ಚಾಗಿರುತ್ತದೆ. ಇದು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ ವೈರಸ್, ಬ್ಯಾಕ್ಟೀರಿಯಾ ಮತ್ತು ಸೋಂಕುಗಳು ನಮ್ಮ ದೇಹಕ್ಕೆ ತಗುಲದಂತೆ ರಕ್ಷಣೆ ನೀಡುತ್ತದೆ. ಹಾಗಾಗಿ ಮಳೆಗಾಲದಲ್ಲಿ ಇದನ್ನು ತಪ್ಪದೇ ಸೇವಿಸಬೇಕು ಎಂದು ಹಿರಿಯರು ಹೇಳುವುದು ಎಂದು ಹೇಳಲಾಗುತ್ತದೆ.
ಮೂಳೆಗಳ ಆರೋಕ್ಯಕ್ಕೆ:
ಎಳೆ ಬಿದಿರಿನ ಚಿಗುರಿನಲ್ಲಿ ಪೊಟ್ಯಾಶಿಯಂ ಮತ್ತು ರಂಜಕ ಅಂಶ ಹೆಚ್ಚಾಗಿರುತ್ತದೆ. ಇದು ಮೂಳೆಗಳನ್ನು ಮತ್ತು ಸ್ನಾಯುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಪೊಟ್ಯಾಶಿಯಂ ಹೃದಯ ಬಡಿತ ನಿಯಂತ್ರಿಸಲು ಸಹಾಯ ಮಾಡುತ್ತದೆ. ಈ ಎರಡೂ ಘಟಕಗಳು ಒಟ್ಟಾಗಿ ಆರೋಗ್ಯಕರ ಮೂಳೆಗಳನ್ನು ಕಾಪಾಡಿಕೊಳ್ಳಲು ಮತ್ತು ಸ್ನಾಯುವಿಗೆ ಬಲ ತುಂಬಲು ಸಹಾಯ ಮಾಡುತ್ತದೆ.
ಜೀರ್ಣಕ್ರಿಯೆಗೆ ಸಹಕಾರಿ:
ಎಳೆ ಬಿದಿರಿನ ಚಿಗುರು ಜೀರ್ಣಕ್ರಿಯೆಗೆ ಒಳ್ಳೆಯದು. ಮಳೆಗಾಲದಲ್ಲಿ ಜೀರ್ಣಕ್ರಿಯೆ ನಿಧಾನವಾಗುತ್ತದೆ. ಆದ್ದರಿಂದ ಕಣಿಲೆ ಜೀರ್ಣಕ್ರಿಯೆ ಚೆನ್ನಾಗಿ ನಡೆಯಲು ಸಹಕಾರಿಯಾಗಿದೆ. ಇದನ್ನು ತಿನ್ನುವುದರಿಂದ ಮಲಬದ್ಧತೆ ಸಮಸ್ಯೆ ತಡೆಗಟ್ಟಬಹುದು.
ಗಮನದಲ್ಲಿರಿಸಬೇಕಾದ ವಿಷಯ: ಕಣಿಲೆ ತಿನ್ನುವಾಗ ಎಚ್ಚರ ವಹಿಸಬೇಕಾಗಿರುವುದು ಅಗತ್ಯ. ಇದು ಒಂದು ಬಗೆಯ ವಿಷದ ರೂಪ. ಇದನ್ನು ಅಡುಗೆಗೆ ಬಳಸುವ ಮುನ್ನ ಕುದಿಯುವ ನೀರಿನಲ್ಲಿ ಹಲವಾರು ಬಾರಿ ಕುದಿಸಿ, ಸ್ವಚ್ಛ ಮಾಡಬೇಕು. ಹಾಗೆ ಮಾಡಿದರೆ ಮಾತ್ರ ಅದರಲ್ಲಿರುವ ಅಂಶ ಸಂಪೂರ್ಣ ನಾಶವಾಗುತ್ತದೆ. ನಂತರ ಇದನ್ನು ಅಡುಗೆಯಲ್ಲಿ ಬಳಸಬಹುದು.
ಅಥವಾ ಕಣಿಲೆ ತಿನ್ನುವ ಮೊದಲು 3 ದಿನ ಅದನ್ನು ನೀರಿನಲ್ಲಿ ಹಾಕಿ ಹುಳಿ ಬರಿಸಬೇಕು. ಪ್ರತಿದಿನ ಅದರ ನೀರು ಬದಲಾಯಿಸುತ್ತಿರಬೇಕು. 3 ದಿನಗಳ ಬಳಿಕ ಆ ನೀರಿನಿಂದ ಸ್ವಚ್ಛಗೊಳಿಸಿ ಅಡುಗೆಗೆ ಬಳಸಬಹುದು.
ಇಲ್ಲದ್ದಿದ್ದರೆ ವಾಂತಿ-ಬೇಧಿ, ಹೊಟ್ಟೆ ಉಬ್ಬುವಿಕೆಯಂತಹ ಸಮಸ್ಯೆ ಕಂಡು ಬರುತ್ತದೆ. ಆದ್ದರಿಂದ ಇದನ್ನು ಹೇಗೆ ಬಳಸಬೇಕು ಎಂಬುದನ್ನು ತಿಳಿದಿರಬೇಕಾಗಿರುವುದು ಅತೀ ಅಗತ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು
Winter: ಚಳಿಗಾಲದಲ್ಲಿ ಆರೋಗ್ಯಕರವಾಗಿರಲು ಸೇವಿಸಬೇಕಾದ ಆಹಾರಗಳು ಇವು…
Zakir Hussain ; ಸರಸ್ವತಿ, ಗಣಪತಿಯ ಆರಾಧಕರಾಗಿದ್ದರು ತಬಲಾ ಮಾಂತ್ರಿಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.