ಮಹಿಳಾ ಮತದಾರರ ಓಲೈಕೆಗೆ ಭಾರೀ ಪೈಪೋಟಿ; ಅರ್ಧ ರಾಜ್ಯದಲ್ಲಿ ಮಹಿಳೆಯರೇ ನಿರ್ಣಾಯಕ

ಮತದಾರರ ಸಂಖ್ಯೆ 6 ಕೋಟಿ ಅಸುಪಾಸಿನಲ್ಲಿದ್ದು ಅದರಲ್ಲಿ 2.54 ಕೋಟಿ ಮಹಿಳೆಯರಿದ್ದಾರೆ

Team Udayavani, Jan 17, 2023, 10:50 AM IST

ಮಹಿಳಾ ಮತದಾರರ ಓಲೈಕೆಗೆ ಭಾರೀ ಪೈಪೋಟಿ; ಅರ್ಧ ರಾಜ್ಯದಲ್ಲಿ ಮಹಿಳೆಯರೇ ನಿರ್ಣಾಯಕ

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ರಾಜ್ಯದಲ್ಲಿನ ಮೂರೂ ರಾಜಕೀಯ ಪಕ್ಷಗಳು ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳಾ ಮತದಾರರ ಮನವೊಲಿಕೆಗೆ ಮುಂದಾಗಿವೆ. ಹೀಗಾಗಿ ರಾಜ್ಯದ ವಿಧಾನ ಕದನ ಭರ್ಜರಿ ರಂಗು ಪಡೆ ದು ಕೊಂಡಿದೆ.

ಮಹಿಳಾ ಮತದಾರರ ಓಲೈಕೆಗೆ ಮೊದಲು ಮುಂದಾಗಿದ್ದು, ಜೆಡಿಎಸ್‌. ಪಂಚರತ್ನ ಯಾತ್ರೆ ನಡೆ ಸುತ್ತಿರುವ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಜೆಡಿಎಸ್‌ ಅಧಿಕಾರಕ್ಕೆ ಬಂದರೆ, ಒಬ್ಬ ಮಹಿಳೆಯನ್ನು ಉಪಮುಖ್ಯಮಂತ್ರಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಅದಷ್ಟೇ ಅಲ್ಲ, ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡುವು ದಾಗಿ ಅವರು ಘೋಷಿಸಿದ್ದಾರೆ. ಇನ್ನು ಬಿಜೆಪಿ ಕೂಡ ಸ್ತ್ರೀಶಕ್ತಿ ಯೋಜನೆ ಜಾರಿಗೆ ನಿರ್ಧರಿಸಿದೆ. ದುಡಿಯುವ ಮನೆಯೊಡತಿಗೆ ಆರ್ಥಿಕ ಶಕ್ತಿ ತುಂಬಲು ಈ ಯೋಜನೆ ಜಾರಿ ಮಾಡುವುದಾಗಿ ಹೇಳಿದೆ. ಇದರ ಬೆನ್ನಲ್ಲೇ ಕುಟುಂಬದ ಯಾಜಮಾನಿಗೆ 2 ಸಾವಿರ ರೂ. ನೀಡುವ “ಗೃಹ ಲಕ್ಷ್ಮೀ’ ಯೋಜನೆಯನ್ನು ಕಾಂಗ್ರೆಸ್‌ ಘೋಷಿಸಿದೆ. ಈ ಮೂಲಕ ಮೂರು ರಾಜಕೀಯ ಪಕ್ಷಗಳಿಗೆ ವಿಧಾನಸಭೆ ಚುನಾವಣೆಯು “ಮಹಿಳಾ ಕೇಂದ್ರಿತ’ ಆಗಲಿದೆ ಎಂಬ ಮುನ್ಸೂಚನೆ ಸಿಕ್ಕಿದೆ.

ಮಹಿಳಾ ಮತದಾರರನ್ನು ಓಲೈಸುವ ತಂತ್ರಗಾರಿಕೆ, ಘೋಷಣೆಗಳು ರಾಜಕೀಯ ಪಕ್ಷಗಳ ಪಾಲಿಗೆ ಹೊಸದೇನಲ್ಲ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿಗೆ ಮಹಿಳಾ ಮತದಾರರ ಕೊಡುಗೆ ಹೆಚ್ಚಿದೆ ಎಂದು ಹೇಳಲಾಗಿದೆ. ಅದಾದ ಅನಂತರ ನಡೆದ ಬಹುತೇಕ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷಗಳ ಗೆಲುವು- ಸೋಲಿನಲ್ಲಿ ಮಹಿಳೆಯರು ನಿರ್ಣಾಯಕ ಪಾತ್ರ ವಹಿಸಿದ್ದಾರೆ.

ಕಳೆದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಯಲ್ಲಿ ಪ್ರಿಯಾಂಕಾ ಗಾಂಧಿ ಯವರು “ಮೈ ಲಡ್ಕಿ ಹೂ ಲಡ್‌ ಸಕ್ತಿಹೂ’ ಘೋಷಣೆ ಕೊಟ್ಟು ಮಹಿಳೆಯರು ಅದರಲ್ಲೂ ಯುವತಿಯರನ್ನು ಸೆಳೆಯಲು ಮುಂದಾಗಿದ್ದರು. ಆದರೆ ಆತಂತ್ರ ಫ‌ಲ ಕೊಡಲಿಲ್ಲ. ಅದೇ ರೀತಿ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ “ಹಿಮಾಚಲ್‌ ಕಿ ಬೇಟಿ’ ಎಂಬ ಘೋಷಣೆಯೊಂದಿಗೆ ಚುನಾವಣ ಪ್ರಚಾರಕ್ಕೆ ಚಾಲನೆ ಕೊಟ್ಟಿದ್ದರು. ಅಲ್ಲಿ ಈ ತಂತ್ರಗಾರಿಕೆ ಕೈ ಹಿಡಿದಿತ್ತು. ರಾಜ್ಯದ ಚುನಾವಣ ವಿದ್ಯಮಾನಗಳು ಅದೇ ಹಾದಿಯಲ್ಲಿ ಸಾಗುತ್ತಿವೆ.

ಇದಕ್ಕೆ ಕಾರಣವೂ ಇದೆ. ಹೇಗೆಂದರೆ ಅರ್ಧ ರಾಜ್ಯದಲ್ಲಿ ಮಹಿಳೆಯರೇ ನಿರ್ಣಾಯಕರಾಗಿದ್ದಾರೆ. 2013ರ ಅಂತಿಮ ಮತದಾರರ ಪಟ್ಟಿ ಪ್ರಕಾರ ಒಟ್ಟು ಮತದಾರರ ಸಂಖ್ಯೆ 6 ಕೋಟಿ ಅಸುಪಾಸಿನಲ್ಲಿದ್ದು ಅದರಲ್ಲಿ 2.54 ಕೋಟಿ ಮಹಿಳೆಯರಿದ್ದಾರೆ. ಉಡುಪಿ ದಕ್ಷಿಣ, ದಕ್ಷಿಣ ಕನ್ನಡ, ರಾಯಚೂರು, ರಾಮನಗರ, ಬಳ್ಳಾರಿ, ಕೊಡಗು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಪ್ಪಳ, ಬಾಗಲ ಕೋಟೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರರೇ ಹೆಚ್ಚಾಗಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ 2.49 ಕೋಟಿ ಪೈಕಿ 1.78 ಕೋಟಿ ಅಂದರೆ ಶೇ.71ರಷ್ಟು ಮಹಿಳೆಯರು ಮತ ಚಲಾಯಿಸಿದ್ದರು. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಸೇರಿ ಎಲ್ಲ ರಾಜಕೀಯ ಪಕ್ಷಗಳಿಂದ ಹಾಗೂ ಸ್ವತಂತ್ರ ಅಭ್ಯರ್ಥಿಗಳಾಗಿ 220ಕ್ಕೂ ಹೆಚ್ಚು ಮಹಿಳೆಯರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಹೀಗಾಗಿಯೇ ಮಹಿಳಾ ಮತದಾರರನ್ನು ಓಲೈ ಸಿ ದರೆ ಅಧಿಕಾರಕ್ಕೇರುವುದು ಸುಲಭ ಎಂಬ ನಿಟ್ಟಿನಲ್ಲಿ ಈ ತಂತ್ರಗಾರಿಕೆಯ ಮೊರೆ ಹೋಗಿವೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?

Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?

By Poll:ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್‌ ಶೂನ್ಯ ಸಂಪಾದನೆ!?

Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್‌ ಶೂನ್ಯ ಸಂಪಾದನೆ!?

Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?

Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?

Voting in Delhi today: A triangular battle for the Capital

Delhi Election: ದಿಲ್ಲಿಯಲ್ಲಿಂದು ಮತದಾನ: ಕುರ್ಚಿಗಾಗಿ ತ್ರಿಕೋನ ಕದನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.