ಮಳೆಗೆ ನೆಲ ಕಚ್ಚಿದ ಭತ್ತದ ಫಸಲು! ನಷ್ಟದಲ್ಲಿವೆ ಸಾವಿರಾರು ರೈತ ಕುಟುಂಬಗಳು
Team Udayavani, Oct 28, 2020, 10:35 AM IST
ಮುಂಡಗೋಡ: ಅಕಾಲಿಕ ಮಳೆ ಹಾಗೂ ಅತಿವೃಷ್ಟಿಯಿಂದ ತಾಲೂಕಿನ ಹಲವಾರು ಕಡೆಗಳಲ್ಲಿ ಭತ್ತದ ಬೆಳೆಗೆ ಹಾನಿಯಾಗಿ ರೈತರು ಅಪಾರ ಹಾನಿ ಸಂಭವಿಸಿದ್ದಾರೆ. ಸರಕಾರ ಪರಿಹಾರ ಘೋಷಣೆ ಮಾಡುವಂತೆ ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ.
ತಾಲೂಕಾದ್ಯಂತ ರೈತರು ಭತ್ತ, ಮೆಕ್ಕೆಜೋಳ, ಹತ್ತಿ, ಕಬ್ಬು ಬೆಳೆಯಲಾಗಿದೆ. ರೈತರು ಉಳುಮೆ, ಬೀಜ ಬಿತ್ತನೆ, ಗೊಬ್ಬರ, ಔಷ ಧ, ಕಳೆ ತೆಗೆಯುವ ಮುಂತಾದ ಬೇಸಾಯ ಚಟುವಟಿಕೆಗೆ ಸಹಕಾರಿ ಸಂಘ, ಸೊಸೈಟಿ ಮತ್ತು ಕೈಸಾಲ ಮಾಡಿಕೊಂಡು ಬೆಳೆ ಬೆಳೆದಿರುವ ರೈತರಿಗೆ ಅಕಾಲಿಕ ಮಳೆ ಮತ್ತು ಪ್ರಕೃತಿ ವಿಕೋಪದಿಂದ ಬಹುತೇಕ ಕಡೆಗಳಲ್ಲಿ ಭತ್ತದ ಬೆಳೆ ನಾಶಕ್ಕೆ ಕಾರಣವಾಗಿದೆ.
ಶೇ.65 ರಷ್ಟು ರೈತರು ತಾಲೂಕಾದ್ಯಂತ ಗಂಭೀರ ಸ್ವರೂಪದ ನಷ್ಟಕ್ಕೆ ಒಳಗಾಗಿದ್ದಾರೆ. ಮಳೆಗಾಲದ ಅತೀವೃಷ್ಟಿಯಿಂದ ಅಲ್ಪಸ್ವಲ್ಪ ಉಳಿಸಿಕೊಂಡ ಬೆಳೆಯನ್ನು ಕೆಲವರು ಕಟಾವು ಮಾಡಬೇಕು ಎನ್ನುವಷ್ಟರಲ್ಲಿ, ಇನ್ನೂ ಕೆಲವರು ಕಟಾವು ಮಾಡಿ ಹಾಕಿದ್ದು ಮತ್ತೆ ಕೆಲವರು ಕಟಾವ್ ಮಾಡಬೇಕು ಎನ್ನುವ ಹಂತದಲ್ಲಿದ್ದಾಗ ಅಕಾಲಿಕ ದೀರ್ಘಕಾಲದ ಮಳೆಯಿಂದ ಭತ್ತದ
ಕದರುಗಳು ಉದುರಿ, ಗದ್ದೆಯಲ್ಲಿ ನೀರು ನಿಂತು ಸಂಪೂರ್ಣವಾಗಿ ಭತ್ತದ ಪೈರು ನೀರಿನಲ್ಲಿ ಮಣ್ಣಿಗೆ ಅಂಟಿಕೊಂಡಿದ್ದು, ಇಂದು ರೈತರು ಭತ್ತದ ಬೆಳೆಯ ಆಶೆಯನ್ನು ಸಂಪೂರ್ಣ ಕೈಚಲ್ಲಿ ಚಿಂತಾಕ್ರಾಂತರಾಗಿದ್ದಾರೆ. ವರ್ಷವಿಡಿ ಕಷ್ಟಪಟ್ಟು ಬೆಳೆದ ಬೆಳೆ ಮಳೆಗೆ ಹಾನಿಯಾಗಿದ್ದು ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.
ಸರಕಾರ ತಕ್ಷಣ ಪರಿಹಾರ ನೀಡಲಿ: ಕೃಷಿಯಿಂದಲೇ ಜೀವನ ನಡೆಸುವ ಸಾವಿರಾರು ಕುಟುಂಬಗಳು ಇದೀಗ ಮಳೆಯಿಂದ ಬೆಳೆ ಹಾನಿ ಮಾಡಿಕೊಂಡು ನಷ್ಟದಲ್ಲಿವೆ. ಆದ್ದರಿಂದ ಇಂತಹ ಕುಟುಂಬಗಳಿಗೆ ಸರಕಾರ ಬೆಳೆ ಹಾನಿ ಪರಿಹಾರವನ್ನು ಕೂಡಲೇ
ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಕಳೆದ ವರ್ಷ ಇಂತಹ ಸ್ಥಿತಿ ಎದುರಾಗಿ ದೇಶದಲ್ಲಿ ಶೇ.9.7ರಷ್ಟು ರೈತರು ಆತ್ಮಹತ್ಯೆ
ಮಾಡಿಕೊಂಡಿದ್ದು ಅದರಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿತ್ತು. ಇಂತಹ ಸ್ಥಿತಿ ಮರುಕಳಿಸದಂತೆ ಮುಂಜಾಗ್ರತೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.