Heavy Rain ಕುಂದಾಪುರ: ಹೆದ್ದಾರಿಯಲ್ಲೇ ಸಾಗಿದ ಮಳೆನೀರು
Team Udayavani, Jul 16, 2024, 12:45 AM IST
ಕುಂದಾಪುರ: ಸೋಮವಾರ ದಿನವಿಡೀ ಕುಂದಾಪುರ, ಬೈಂದೂರು ತಾಲೂಕಿನಾದ್ಯಂತ ಭಾರೀ ಮಳೆಯಾಗಿದೆ. ಹೆದ್ದಾರಿಯ ಸರ್ವಿಸ್ ರಸ್ತೆಗಳು ಸಹಿತ ಹಲವು ಪ್ರಮುಖ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ತೊಡಕು ಉಂಟಾಯಿತು.
ಸಂಜೆ 6 ಗಂಟೆಯಿಂದ ಆರಂಭ ಗೊಂಡ ಮಳೆಯಂತೂ ಒಂದೂವರೆ ಗಂಟೆಗೂ ಹೆಚ್ಚು ಕಾಲ ಬಂದಿದ್ದು, ಇದರಿಂದ ಕುಂದಾಪುರ ನಗರದ ಸರ್ವಿಸ್ ರಸ್ತೆಯು ಹಲವೆಡೆ ಹೊಳೆ ಯಂತಾಗಿತ್ತು. ಬಸ್ರೂರು ಮೂರುಕೈ, ಸಂತೆ ಮಾರುಕಟ್ಟೆ, ಕೆಎಸ್ ಆರ್‌ಟಿಸಿ ಬಸ್ ನಿಲ್ದಾಣ ಎದುರು, ಹಂಗಳೂರು, ಸರ್ಜನ್ ಆಸ್ಪತ್ರೆ ಬಳಿ ಸರ್ವಿಸ್ ರಸ್ತೆ ಜಲಾವೃತಗೊಂಡಿತ್ತು. ಇದರಿಂದ ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಯಿತು.
ಕೋಟೇಶ್ವರ, ಬೀಜಾಡಿ, ಗೋಪಾಡಿ ಪರಿಸರದ ಹಲವೆಡೆಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಬೀಜಾಡಿಯ ಮೀನುಗಾರಿಕೆ ರಸ್ತೆ ಸಹಿತ ಪ್ರಮುಖ ರಸ್ತೆಗಳಲ್ಲಿ ಭಾರೀ ಪ್ರಮಾಣದ ನೀರು ಹರಿದು ಹೋಗಿ ಸ್ಥಳೀಯರು ತೊಂದರೆ ಅನುಭವಿಸಿದರು.
ಗದ್ದೆಗಳು ಜಲಾವೃತ
ಕುಂದಾಪುರ ಭಾಗದ ನೂರಾರು ಹೆಕ್ಟೇರ್ ನಾಟಿ ಮಾಡಿರುವ ಗದ್ದೆಗಳು ಜಲಾವೃತಗೊಂಡಿವೆ. ನಾವುಂದದ ಸಾಲುºಡ, ಅರೆಹೊಳೆ, ನಾಡದ ಚಿಕ್ಕಳ್ಳಿ, ಕುದ್ರು, ಪಡುಕೋಣೆ, ಮರವಂತೆ, ಸೌಕೂರು, ಬಸ್ರೂರು ಭಾಗದಲ್ಲಿ 10 ದಿನಗಳಿಂದಲೂ ಗದ್ದೆಗಳು ಮುಳುಗಡೆಯಾಗಿದ್ದು, ಈ ಬಾರಿಯ ಬೆಳೆ ಕೈಗೆ ಸಿಗದ ಪರಿಸ್ಥಿತಿಯಿದೆ. ಕುಂದಾಪುರ ತಾಲೂಕಿನಲ್ಲಿ ಗಾಳಿ – ಮಳೆಯಿಂದಾಗಿ 10ಕ್ಕೂ ಮಿಕ್ಕಿಮನೆಗಳಿಗೆ ಮರ ಬಿದ್ದು, ಹಾನಿಯಾಗಿದೆ. ಜನ್ಸಾಲೆಯಲ್ಲಿ ಅಡಿಕೆ ಮರಗಳು ಬಿದ್ದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.