ಜಿಲ್ಲೆಯಲ್ಲಿ ಭರ್ಜರಿ ಮಳೆ; ಜನ ತತ್ತರ : ಮನೆಗಳಿಗೆ ನುಗ್ಗಿದ ಮಳೆ ನೀರು

Team Udayavani, Oct 1, 2020, 12:38 PM IST

ಜಿಲ್ಲೆಯಲ್ಲಿ ಭರ್ಜರಿ ಮಳೆ; ಜನ ತತ್ತರ : ಮನೆಗಳಿಗೆ ನುಗ್ಗಿದ ಮಳೆ ನೀರು

ಮಂಡ್ಯ: ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿದ್ದಾರೆ. ಬುಧವಾರ ಮಧ್ಯಾಹ್ನವೂ ಧಾರಾಕಾರ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತು. ಮಂಡ್ಯ ನಗರ ಸೇರಿದಂತೆ ವರುಣ ಅಬ್ಬರಿಸಿದ್ದಾನೆ. ಮಧ್ಯಾಹ್ನ 1 ಗಂಟೆಗೂ ಹೆಚ್ಚು ಕಾಲ ಮಳೆಯಿಂದ ನಗರದಲ್ಲಿ ವಾಹನ ಸವಾರರು, ಸಾರ್ವಜನಿಕರು ಕಿರಿಕಿರಿ ಅನುಭವಿಸಬೇಕಾಯಿತು. ವ್ಯಾಪಾರ , ಕಾರ್ಮಿಕರಿಗೆ ತೊಂದರೆಯಾಯಿತು.

ಮನೆಗಳಿಗೆ ಮಳೆ ನೀರು: ಮಂಗಳವಾರ ರಾತ್ರಿ ಹಾಗೂ ಬುಧವಾರ ಮಧ್ಯಾಹ್ನ ಸುರಿದ ಮಳೆಯಿಂದ ನಗರದಲಿ ಅವಾಂತರ ಸೃಷ್ಟಿಯಾಗಿದ್ದು, ಜನ  ಪರದಾಡುವಂತಾಗಿದೆ. ನಗರದ ಕಾರ್ಮಿಕರ ಕಾಲೋನಿ, ಕಾಲೋನಿಯ ಹಲವು ಮನೆಗಳಿ ರಾತ್ರಿಯೇ ಕೆಲವು ಮನೆಗಳಿಗೆ ಮಳೆ ನೀರು ಮನೆಗೆ ನುಗ್ಗಿದ್ದರಿಂದ ಕುಟುಂಬಸ್ಥರು ರಾತ್ರಿಪೂರ್ತಿ ನೀರು ಹೊರ ಹಾಕಲು ಜಾಗರಣೆ ಅನುಭವಿಸಬೇಕಾಯಿತು.

ರಸ್ತೆಗಳು ಜಲಾವೃತ: ಕಾಲೋನಿಯ ರಸ್ತೆಗಳೂ ಹಳ್ಳ ಗುಂಡಿಗಳಿಂದ ಕೂಡಿದ್ದು, ನೀರಿನಿಂದ ಆವೃತವಾಗಿದೆ. ಕೆಸರು ಮಯವಾಗಿದೆ. ಜನರು ತಿರುಗಾಡದ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವು ಮನೆಗಳಿಗೆ ನೀರು ನುಗ್ಗಿದ್ದು ಮಂಗಳವಾರ ರಾತ್ರಿ ನೀರು ಹೊರ ಹಾಕುವುದರಲ್ಲಿ ನಿರತರಾಗಿದ್ದರು.

ಕಾಲೋನಿಯ ಅಂಗಡಿಗಳಿಗೂ ನೀರು ನುಗ್ಗಿದ್ದು ತರಕಾರಿಗಳು, ಕೆಲವು ಸಮಾಗ್ರಿಗಳು ಹಾಳಾಗಿದೆ. ಮಳೆ ಬಂದರೆ ರೈತರ ಮೊಗದಲ್ಲಿ ಸಂತಸ ಮೂಡಿಸಿದರೆ, ಇಲ್ಲಿನ ನಿವಾಸಿಗಳ ಮುಖದಲ್ಲಿ ಭಯದ ಛಾಯೆ ಕಂಡು ಬರುತ್ತದೆ. ಇಲ್ಲಿನ ಪ್ರಮುಖ ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ವಾಹನ ಸವಾರರು ನಗರಸಭೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಸೂಕ್ತ ರಸ್ತೆ ಕಲ್ಪಿಸಿ: ರಸ್ತೆಗಳನ್ನು ಮಾಡುತ್ತೇವೆ ಎಂದು ಅಗೆದು ಅಗೆದು ಕಾಲೋನಿಯ ರಸ್ತೆಗಳನ್ನು ಹಾಳು ಮಾಡಿದ್ದಾರೆ. ಮಳೆ ನೀರು ಮನೆಗೆ ನುಗ್ಗಿದರೆ ಅದನ್ನು ಹೊರ ಹಾಕುವುದೇ ಒಂದು ಕೆಲಸವಾಗಿದೆ. ಇದರಿಂದ ಮನೆಯ ಕೆಲವು ಸಾಮಾನುಗಳು ಹಾಳಾಗಿದ್ದು, ಸೂಕ್ತ ರಸ್ತೆ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ಬುಧವಾರ ಮಧ್ಯಾಹ್ನವೂ ಅದೇ ಮುಂದುವರೆದಿತ್ತು.

139.16 ಮಿ.ಮೀ ಮಳೆ: ಬುಧವಾರ ಬೆಳಗ್ಗೆ 8ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 136.16 ಮೀ.ಮೀ ಮಳೆಯಾಗಿರುವ ವರದಿ ಯಾಗಿದೆ. ಮದ್ದೂರು ತಾಲೂಕಿನಲ್ಲಿ ಅತಿ ಹೆಚ್ಚು 48 ಮಿ.ಮೀ ಸರಾಸರಿ ಮಳೆಯಾಗಿದೆ. ಉಳಿದಂತೆ ಮಂಡ್ಯ 43, ಪಾಂಡವಪುರ 2.8, ಮಳವಳ್ಳಿ 24.6, ಶ್ರೀರಂಗ ಪಟ್ಟಣ2.4,ಕೆ.ಆರ್‌.ಪೇಟೆ1.6 ಹಾಗೂ ನಾಗಮಂಗಲ ತಾಲೂಕಿನಲ್ಲಿ17.3 ಮಿ.ಮೀ ಮಳೆಯಾಗಿದೆ.

ಟಾಪ್ ನ್ಯೂಸ್

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

3-ct-ravi

ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.