![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 2, 2024, 1:27 AM IST
ತೆಕ್ಕಟ್ಟೆ: ಭಾರೀ ಮಳೆಗೆ ಮೊಳಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಬಳಗದ್ದೆಯಲ್ಲಿ ಮೂರು ಮನೆಗಳು ಸಂಪೂರ್ಣ ನೆಲಸಮವಾದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.
ಮನೆ ಸಮೀಪದಲ್ಲೇ ಹಾದು ಹೋಗುವ ಜಾವಳಿ ಹೊಳೆಯಲ್ಲಿ ನೀರಿನ ಒಳಹರಿವು ಹೆಚ್ಚಾಗಿ ಏಕಾಏಕಿ ದೈಹಿಕ ಶಿಕ್ಷಣ ಶಿಕ್ಷಕ ಪ್ರದೀಪ್ ಕುಮಾರ್ ಶೆಟ್ಟಿ, ಗೀತಾ ಶೆಟ್ಟಿ ಹಾಗೂ ರತ್ನಾವತಿ ಶೆಟ್ಟಿ ಅವರ ಮನೆ ಸಂಪೂರ್ಣ ಜಲಾವೃತಗೊಂಡು ಕುಸಿದು ಬಿದ್ದಿದೆ.
ಪರಿಸ್ಥಿತಿಯ ತೀವ್ರತೆಯನ್ನು ಅರಿತ ಸ್ಥಳೀಯರು ರಾತ್ರಿಯೇ ಪ್ರವಾಹ ಪೀಡಿತ ಮನೆಯಲ್ಲಿದ್ದವರನ್ನು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದರು.
ಜಿಲ್ಲಾಧಿಕಾರಿ ಭೇಟಿ
ಆ.1ರಂದು ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಉದಯವಾಣಿ ಜತೆ ಮಾತನಾಡಿ, ಮಳೆಯಿಂದ ಸಂಪೂರ್ಣ ಹಾನಿಗೀಡಾದ ಮೂರು ಕುಟುಂಬಗಳಿಗೆ ಹೊಸದಾಗಿ ಮನೆ ನಿರ್ಮಾಣಕ್ಕೆ ಪೂರ್ಣ ಪರಿಹಾರ ಮೊತ್ತ ನೀಡಲಾಗುವುದು.
ಗ್ರಾಮದಲ್ಲಿ ಗುಡ್ಡ ಕುಸಿತಗಳಿರುವ ಪ್ರದೇಶದ ನಿವಾಸಿಗಳನ್ನು ಸ್ಥಳಾಂತ ರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ಕಾಂಗ್ರೆಸ್ ಮುಖಂಡ ಎಂ.ದಿನೇಶ್ ಹೆಗ್ಡೆ ಮೊಳಹಳ್ಳಿ, ಕುಂದಾಪುರ ಎಸಿ ಮಹೇಶ್ಚಂದ್ರ, ತಹಶೀಲ್ದಾರ್ ಶೋಭಾಲಕ್ಷ್ಮೀ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.