ಸುಬ್ರಹ್ಮಣ್ಯದಲ್ಲಿ ಗುಡುಗು ಸಹಿತ ಭಾರೀ ಮಳೆ
Team Udayavani, May 24, 2020, 10:25 AM IST
ಮಂಗಳೂರು/ಉಡುಪಿ: ಅರಬಿ ಸಮುದ್ರದಲ್ಲಿ ನಿಮ್ನ ಒತ್ತಡ ಇರುವ ಕಾರಣ ಕರಾವಳಿ ಭಾಗದ ಕೆಲವು ಕಡೆಗಳಲ್ಲಿ ಶನಿವಾರ ಮಳೆಯಾದ ವರದಿಯಾಗಿದೆ. ಸುಬ್ರಹ್ಮಣ್ಯ ಪರಿಸರದಲ್ಲಿ ಶನಿವಾರ ಸಂಜೆ ಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಎಲ್ಲಿಯೂ ಮಳೆಯಾದ ಸುದ್ದಿಯಿಲ್ಲ.
ಸುಬ್ರಹ್ಮಣ್ಯದ ದೀಪಕ್ ಎಚ್.ಪಿ. ಎಂಬವರ ವಸತಿಗೃಹದ ಸೋಲಾರ್, ವಾಟರ್ ಹೀಟರ್ ಪೆನಲ್ ಸಹಿತ ಗಾಲಿಗೆ ನೆಲಕ್ಕುರುಳಿ ಹಾನಿಯಾಗಿದ್ದು ಸುಮಾರು ಎರಡು ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ. ಸುಬ್ರಹ್ಮಣ್ಯ ಪರಿಸರದ ಹರಿಹರ, ಏನೆಕಲ್ಲು, ಪಂಜ, ಗುತ್ತಿಗಾರು, ಆಸುಪಾಸಿನಲ್ಲಿ ಗಾಳಿ ಗುಡುಗು ಸಹಿತ ಸುಮಾರು ಒಂದು ತಾಸು ಉತ್ತಮ ಮಳೆಯಾಗಿದೆ.
ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಕಕ್ಕಿಂಜೆ, ನೆರಿಯಾ ಸೇರಿದಂತೆ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಮಳೆ ಯಾಗಿದೆ. ಮಂಗಳೂರು ನಗರದಲ್ಲಿ ಬೆಳಗ್ಗೆ ಯಿಂದ ಬಿಸಿಲು ಮತ್ತು ಸೆಕೆ ಯಿಂದ ಕೂಡಿದ ವಾತಾವರಣ ಇತ್ತು. ಸಂಜೆ ವೇಳೆ ಮೋಡ ಕವಿದ ವಾತಾವರಣ ಇತ್ತು.
ಭಾರತೀಯ ಹವಾಮಾನ ಇಲಾಖೆಯ ಮಾಹಿತಿಯಂತೆ ಶನಿವಾರ ದಂದು ಪಣಂಬೂರಿನಲ್ಲಿ 35.1 ಡಿ.ಸೆ. ಗರಿಷ್ಠ ಮತ್ತು 27 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್ಲೈನ್ ಗೇಮ್ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.