Heavy Rain ಉಡುಪಿ: ಕೃಷಿ, ಮನೆಗಳಿಗೆ ವ್ಯಾಪಕ ಹಾನಿ
Team Udayavani, Jul 18, 2024, 12:16 AM IST
ಉಡುಪಿ: ಜಿಲ್ಲೆಯಲ್ಲಿ ಬುಧವಾರ ಹಲವೆಡೆ ಉತ್ತಮ ಮಳೆಯಾಗಿದ್ದು, ಹಲವೆಡೆ ಗಾಳಿ ಮಳೆಯಿಂದಾಗಿ ಕೃಷಿ, ತೋಟಗಾರಿಕೆ ಬೆಳೆಗಳಿಗೆ ಹೆಚ್ಚು ಹಾನಿ ಸಂಭವಿಸಿದೆ.
ಕುಂದಾಪುರ ಪುರಸಭೆ ವ್ಯಾಪ್ತಿ ಖಾರ್ವಿಕೇರಿಯಲ್ಲಿ ಮನೆಯ ಮೇಲೆ ತೆಂಗಿನ ಮರ ಬಿದ್ದು ಮೂವರು ಗಾಯಗೊಂಡ ಘಟನೆ ಸಂಭವಿಸಿದೆ. ಬುಧವಾರ ಬೆಳಗ್ಗಿನಿಂದ ಮಧ್ಯಾಹ್ನದ ವರೆಗೂ ಮಳೆ ಬಿಡುವು ಪಡೆದಿದ್ದು, ಮಧ್ಯಾಹ್ನದ ಬಳಿಕ ಎಲ್ಲೆಡೆ ಬಿಟ್ಟುಬಿಟ್ಟು ನಿರಂತರ ಮಳೆಯಾಗಿದೆ.
ಉಡುಪಿ, ಕಾರ್ಕಳ, ಬೈಂದೂರು, ಕಾರ್ಕಳ, ಹೆಬ್ರಿ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ವೇಳೆ ಹೆಚ್ಚು ಮಳೆ ಸುರಿದಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ 16ಕ್ಕೂ ಅಧಿಕ ಮನೆಗಳಿಗೆ ಹಾನಿ ಸಂಭವಿಸಿದೆ.
ಕುಂದಾಪುರ ತಾಲೂಕಿನ ಅಂಪಾರು, ಮೊಳಹಳ್ಳಿ, ಹಾಲಾಡಿ ಭಾಗದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕೃಷಿ ಬೆಳೆ ಹಾನಿಗೊಳಪಟ್ಟಿವೆ. ಕಾರ್ಕಳ 88.5., ಕುಂದಾಪುರ 108.5, ಉಡುಪಿ 72.8., ಬೈಂದೂರು 83.8., ಬ್ರಹ್ಮಾವರ 88.6., ಕಾಪು 49.8., ಹೆಬ್ರಿ 135.4 ಮಿ. ಮೀ. ಮಳೆಯಾಗಿದ್ದು, ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆ ಕಾಲ 94.9. ಮಿ. ಮೀ. ಸರಾಸರಿ ಮಳೆಯಾಗಿದೆ. ಜು.18-19ರಂದು ಅಧಿಕ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂ ಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.