Heavy Rains ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ; ಕೆಲವೆಡೆ ಹಾನಿ
Team Udayavani, Jul 19, 2024, 12:26 AM IST
ಮಂಗಳೂರು: ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ದಿನವಿಡೀ ಬಿರುಸಿನ ಮಳೆಯಾಗಿದೆ. ಪರಿಣಾಮ ಕೆಲವು ಕಡೆ ಹಾನಿ ಸಂಭವಿಸಿದೆ.
ಸತತ ಮಳೆಯಿಂದಾಗಿ ಜೀವನದಿಗಳು ತುಂಬಿ ಹರಿಯುತ್ತಿದೆ. ತುಂಬೆಯಲ್ಲಿ ನೀರಿನ ಮಟ್ಟ ಏರಿಕೆ ಕಂಡ ಕಾರಣ ಅಣೆಕಟ್ಟಿನ ಎಲ್ಲ ಗೇಟ್‌ಗಳನ್ನು ತೆರೆಯಲಾಗಿದೆ. ಮಂಗಳೂರಿ ನಲ್ಲೂ ಬಿರುಸಿನ ಮಳೆಯಾಗಿದೆ.
ಬುಧವಾರ ರಾತ್ರಿ 11 ಗಂಟೆಯ ಸುಮಾರಿಗೆ ಸುರಿದ ಭಾರೀ ಗಾಳಿ ಮಳೆಗೆ ಪಡೀಲ್ ಕಣ್ಣೂರು ಸಮೀಪದ ಬಳ್ಳೂರು ಗುಡ್ಡದಲ್ಲಿ ಮತ್ತೆ ಕುಸಿತವಾಗಿದ್ದು, ಕೆಲವು ಮನೆಗಳು ಅಪಾಯಕ್ಕೆ ಸಿಲುಕಿವೆ. ಮಳೆ ಇದೇ ರೀತಿ ಮುಂದುವರಿದರೆ ಮತ್ತಷ್ಟು ಕುಸಿಯಲಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಭಾಗದ ಹಲವು ಮನೆಗಳಿಗೆ ಸಂಪರ್ಕಿಸುವ ಕಾಲುದಾರಿ ಕುಸಿದಿದ್ದು, ಶಾಲಾ ವಿದ್ಯಾರ್ಥಿಗಳು ಸಹಿತ ಸಾರ್ವಜನಿಕರು ಅತಂತ್ರರಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಇಂದು ರೆಡ್, ಆರೆಂಜ್ ಅಲರ್ಟ್
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜು.19ರ ಬೆಳಗ್ಗೆ 8.30ರ ವರೆಗೆ ರೆಡ್ ಅಲರ್ಟ್, ಬಳಿಕ ಜು. 20 ಬೆಳಗ್ಗೆ 8.30ರ ವರೆಗೆ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಿರುಸಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಜು.21 ಮತ್ತು 22ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಘಾಟಿಯಲ್ಲಿ ಗುಡ್ಡ ಕುಸಿತ
ಶಿರಾಡಿ ಘಾಡಿಯಲ್ಲಿ ಬುಧವಾರ ರಾತ್ರಿ ಗುಡ್ಡ ಕುಸಿತದ ಪರಿಣಾಮ ಬೆಂಗಳೂರು ಕಡೆಯಿಂದ ಹೊರಟ ಬಸ್‌ಗಳು ಹಾಗೂ ಇತರ ವಾಹನಗಳು ಶಿರಾಡಿಯಲ್ಲೇ ಬಾಕಿಯಾಗಿದ್ದವು. ಮಣ್ಣು ತೆರವು ಕಾರ್ಯಾಚರಣೆ ಬಳಿಕ ಸುಮಾರು ವಾಹನ ಸಂಚಾರ ಆರಂಭಗೊಂಡಿತ್ತು. ಗುರುವಾರ ಬೆಳಗ್ಗೆ ಸುಮಾರು 6 ಗಂಟೆಗೆ ಮಂಗಳೂರು ತಲುಪಬೇಕಾದ ಬಸ್‌ಗಳು ಸುಮಾರು 9 ಗಂಟೆಗೆ ತಲುಪಿತು.
ಹಾಸನ-ಮಾರನಹಳ್ಳಿಯವರೆಗೂ ಗುಡ್ಡ ಕುಸಿತ ಉಂಟಾದ ಕಾರಣ ಜು.18ರಿಂದ ರಸ್ತೆ ದುರಸ್ತಿ ಮುಗಿಯುವವರೆಗೆ ಎಲ್ಲ ರೀತಿಯ ವಾಹನ ನಿಷೇಧಿಸಿ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.