Hebri: ಸೀತಾನದಿ ಬಳಿ ಕಾರು ಅಪಘಾತಕ್ಕೆ ಉಡುಪಿ ಮೂಲದ ಇಬ್ಬರು ಶಿಕ್ಷಕರು ಬಲಿ; ಒಬ್ಬರು ಗಂಭೀರ
Team Udayavani, Jun 11, 2023, 3:17 PM IST
ಹೆಬ್ರಿ: ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಸೀತಾನದಿ ಜಕ್ಕನಮಕ್ಕಿ ಬಳಿ ಜೂ. 11ರ ಆದಿತ್ಯವಾರ ಸುಮಾರು 1.30 ಕ್ಕೆ ಸಂಭವಿಸಿದೆ.
ಗಂಭೀರ ಪರಿಸ್ಥಿತಿಯಲ್ಲಿರುವ ಶಿಕ್ಷರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ.
ಮೃತಪಟ್ಟವರು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮ ಶೇಖರ ಎನ್ನಲಾಗಿದೆ.
ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತದ ತೀವ್ರತೆಯಿಂದ ಬಸ್ ನ ಒಳಗೆ ಸಿಲುಕಿದ್ದ ಕಾರನ್ನು ಹೊರತರಲು ಹರಸಾಹಸ ಪಡಬೇಕಾಯಿತು. ಅಂಬುಲೆನ್ಸ್ ಸಿಗದೆ ಯಾರು ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆ ಸೇರಿಸಿದರು. ತುರ್ತು ಚಿಕಿತ್ಸೆ ಸಿಗದೆ ಇಬ್ಬರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.