ಹೆಗಡೆ, ಶೋಭಾ ವಿರುದ್ಧ ಕ್ರಮಕ್ಕೆ ದೂರು
Team Udayavani, Apr 11, 2020, 5:26 AM IST
ಬೆಂಗಳೂರು: ಕೋವಿಡ್ 19 ವಿಷಯದಲ್ಲಿ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಪ್ರಚೋದನಾತ್ಮಕ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರಾದ ಅನಂತಕುಮಾರ್ ಹೆಗಡೆ, ಶೋಭಾ ಕರಂದ್ಲಾಜೆ, ಬಸನಗೌಡ ಪಾಟೀಲ್ ಹಾಗೂ ಎಂ.ಪಿ. ರೇಣುಕಾಚಾರ್ಯ ವಿರುದ್ದ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ವತಿಯಿಂದ ಡಿಜಿಪಿ ದೂರು ಸಲ್ಲಿಸಲಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ನಾರಾಯಣಸ್ವಾಮಿ, ಎಂಎಲ್ಸಿ ಎಂ.ಸಿ. ವೇಣುಗೋಪಾಲ್ ಅವರನ್ನೊಳಗೊಂಡ ಕಾಂಗ್ರೆಸ್ ನಿಯೋಗವು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಬೆಂಗಳೂರಿನ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಭೇಟಿ ಮಾಡಿ, ಕೋವಿಡ್ 19 ಸೋಂಕು ಹರಡಿಕೆ ಸಂಬಂಧ ವದಂತಿ ಹಬ್ಬಿಸುವುದರ ಜತೆಗೆ ಪ್ರಚೋದನಕಾರಿ ಹೇಳಿಕೆ ನೀಡಿ ಕೋಮು ಸಾಮರಸ್ಯ ಹಾಳುಗೆಡವಲು ಯತ್ನಿಸುತ್ತಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಮಾಜಿ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ, ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಮೊಕದ್ದಮೆ ದಾಖಲಿಸಬೇಕು ಹಾಗೂ ಅವರನ್ನು ತತ್ಕ್ಷಣ ಬಂಧಿಸಬೇಕು ಎಂದು ದೂರು ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.