29 ವರ್ಷಗಳ ಹಿಂದೆ ಸಕಲೇಶಪುರದಲ್ಲೂ ಸೇನಾ ಹೆಲಿಕಾಪ್ಟರ್ ಪತನ

ಮೂವರು ನೌಕಾಪಡೆ ಯೋಧರಿದ್ದ ಹೆಲಿಕಾಪ್ಟರ್‌ ಪತನವಾದದ್ದೂ ಡಿಸೆಂಬರ್‌ನಲ್ಲೇ!

Team Udayavani, Dec 9, 2021, 9:50 AM IST

ಸಕಲೇಶಪುರದಲ್ಲೂ ನಡೆದಿತ್ತು ಹೆಲಿಕಾಪ್ಟರ್‌ ದುರಂತ

ಸಾಂದರ್ಭಿಕ ಚಿತ್ರ.

ಹಾಸನ: ಸುಮಾರು 29 ವರ್ಷಗಳ ಹಿಂದೆ ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ತಪ್ಪಲಿನ ಅರಮನೆಗುಡ್ಡದಲ್ಲೂ ಸೇನಾ ಹೆಲಿಕಾಪ್ಟರ್‌ ಪತನವಾಗಿ ಮೂವರು ಯೋಧರು ಸಾವನ್ನಪ್ಪಿದ್ದರು. ಆ ದುರಂತ ಸಂಭವಿಸಿದ್ದುದು ಕೂಡ ಡಿಸೆಂಬರ್‌ನಲ್ಲಿಯೇ!

ಬೆಂಗಳೂರಿನಿಂದ ಮಂಗಳೂರು ಕಡೆಗೆ 1992ರ ಡಿ. 22ರಂದು ಸಾಗುತ್ತಿದ್ದ ಸೇನೆಯ ಕೇರಳದ ನೌಕಾ ಪಡೆಯ ಕೊಚ್ಚಿ ವಿಭಾಗಕ್ಕೆ ಸೇರಿದ್ದ ಚೇತಕ್‌ ಹೆಲಿಕಾಪ್ಟರ್‌ ಅತಿಯಾದ ಮಂಜಿನಿಂದ ಸಕಲೇಶಪುರ ತಾಲೂ ಕಿನ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಪತನವಾಗಿತ್ತು. ಆದರೆ, ದುರಂತ ನಡೆದ ಹೆಲಿಕಾಪ್ಟರನ್ನು ಪತ್ತೆ ಹಚ್ಚಲು 5 ಹೆಲಿಕಾಪ್ಟರ್‌ಗಳನ್ನು ಬಳಸಿ, ಪೊಲೀಸರು ಹಾಗೂ ಅಧಿಕಾರಿಗಳು ಸೇರಿ ಸುಮಾರು 120 ಸೈನಿಕರು ಸತತ 45 ದಿನ ಹುಡುಕಿದರೂ ಸಾಧ್ಯವಾಗಿರಲಿಲ್ಲ.

ಪತನಗೊಂಡಿದ್ದ ಹೆಲಿಕಾಪ್ಟರ್‌ ಹುಡುಕಿಕೊಟ್ಟವರಿಗೆ 1 ಲಕ್ಷ ರೂ., ಸರಕಾರಿ ನೌಕರಿ ಹಾಗೂ 4 ಎಕರೆ ಭೂಮಿ ಮಂಜೂರು ಮಾಡುವುದಾಗಿ ಹಾಸನ ಜಿಲ್ಲಾಡಳಿತ ಘೋಷಿಸಿತ್ತು. ಇದರಿಂದ ಉತ್ತೇಜಿತರಾದ ಸ್ಥಳೀಯರು ಸಕಲೇಶಪುರ ತಾಲೂಕಿನ ಅಭಯಾರಣ್ಯ, ಬೆಟ್ಟ ಗುಡ್ಡಗಳಲ್ಲಿ ಪತನಗೊಂಡಿದ್ದ ಹೆಲಿಕಾಪ್ಟರ್‌ ಹುಡುಕಲು ಮುಂದಾಗಿದ್ದರು. ಸತತ 15 ದಿನಗಳ ಪರಿಶ್ರಮದ ಬಳಿಕ ಕಾಡುಮನೆ ಟೀ ಎಸ್ಟೇಟ್‌ ಸಮೀಪ ಕೂಲಿ ಕೆಲಸ ಮಾಡುತ್ತಿದ್ದ ಪುಟ್ಟಸ್ವಾಮಿ ಗೌಡ ಎಂಬವರು ಪಶ್ಚಿಮಘಟ್ಟದ ತಪ್ಪಲು, ಕಾಡುಮನೆ ಸಮೀಪದ ಅರಮನೆ ಗುಡ್ಡದಲ್ಲಿ ಹೆಲಿಕಾಪ್ಟರನ್ನು ಪತ್ತೆ ಮಾಡುವಲ್ಲಿ ಸಫ‌ಲರಾಗಿದ್ದರು.

ಇದನ್ನೂ ಓದಿ:ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ಪುಟ್ಟಸ್ವಾಮಿ ಗೌಡ ಅವರು ಹಾಸನ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ ಬಳಿಕ ಕೊಚ್ಚಿಯಿಂದ ಆಗಮಿಸಿದ್ದ ನೌಕಾಪಡೆಯ ಯೋಧರು ಅರಮನೆ ಗುಡ್ಡದಲ್ಲಿ ಹೆಲಿಕಾಪ್ಟರ್‌ನ ಅವಶೇಷಗಳು ಮತ್ತು ಅದರಲ್ಲಿದ್ದ ಮೂವರು ಯೋಧರ ಕಳೇಬರ ಗುರುತಿಸಿ ಖಚಿತಪಡಿಸಿದ್ದರು. ಅಂದಿನ ನೌಕಾಪಡೆ ಮುಖ್ಯಸ್ಥ ಸಿಕ್ವೇರಾ ಅವರು ಸಕಲೇಶಪುರಕ್ಕೆ ಆಗಮಿಸಿ ಪುಟ್ಟಸ್ವಾಮಿ ಗೌಡರನ್ನು ಸಮ್ಮಾನಿಸಿದ್ದರು.

-ನಂಜುಂಡೇ ಗೌಡ

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.