ಲಾಕ್‌ಡೌನ್‌ ಸಂಕಷ್ಟದಲ್ಲಿರುವವರಿಗೆ ನೆರವಿನ ಹಸ್ತ ಚಾಚಿ

Team Udayavani, May 10, 2021, 6:40 AM IST

ಲಾಕ್‌ಡೌನ್‌ ಸಂಕಷ್ಟದಲ್ಲಿರುವವರಿಗೆ ನೆರವಿನ ಹಸ್ತ ಚಾಚಿ

ರಾಜ್ಯದಲ್ಲಿ ಲಾಕ್‌ಡೌನ್‌ ಎಂದು ಹೇಳದಿದ್ದರೂ ಲಾಕ್‌ಡೌನ್‌ ಮಾದರಿಯ ಕರ್ಫ್ಯೂ ಜಾರಿಯಾಗಿದೆ. ಕೆಲವು ವಲಯ ಹೊರತುಪಡಿಸಿ ಗಾರ್ಮೆಂಟ್ಸ್‌ ಸೇರಿದಂತೆ ಆಟೋ, ಟ್ಯಾಕ್ಸಿ, ಕಟ್ಟಡ ನಿರ್ಮಾಣ ಎಲ್ಲ ಕಾಮಗಾರಿಗಳು ಸ್ಥಗಿತಗೊಂಡಿವೆ. ಇದರಿಂದ ಲಕ್ಷಾಂತರ ಶ್ರಮಿಕ ವರ್ಗದ ಉದ್ಯೋಗ ಬಂದ್‌ ಆಗಿದೆ.

ನೆರೆ ರಾಜ್ಯಗಳಾದ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ದೇಶದ ರಾಜಧಾನಿ ದಿಲ್ಲಿ ಸೇರಿ ಬಹುತೇಕ ರಾಜ್ಯಗಳಲ್ಲಿ ಅಧಿಕೃತವಾಗಿ ಲಾಕ್‌ಡೌನ್‌ ಘೋಷಿಸಿ ಬಡವರ್ಗಕ್ಕೆ ಆಹಾರ ಧಾನ್ಯಗಳ ಕಿಟ್‌ ಸೇರಿದಂತೆ ಆರ್ಥಿಕ ನೆರವು ಸಹ ಘೋಷಿಸಲಾಗಿದೆ. ಇಂತಹ ಸಂಕಷ್ಟ ಸಂದರ್ಭದಲ್ಲಿ ಬಡವರ್ಗದ ನೆರವಿಗೆ ನಿಲ್ಲಬೇಕಾಗಿರುವುದು ಯಾವುದೇ ಒಂದು ರಾಜ್ಯ ಸರಕಾರದ ಕರ್ತವ್ಯ ಸಹ. ಆರ್ಥಿಕ ಪರಿಸ್ಥಿತಿ ಏನೇ ಇದ್ದರೂ ದೊಡ್ಡ ಪ್ರಮಾ ಣದ ಯೋಜನೆ ಒಂದು ಅಥವಾ ಎರಡು ವರ್ಷದ ಮಟ್ಟಿಗೆ ಸ್ಥಗಿತಗೊಳಿಸಿ ತತ್‌ಕ್ಷಣದ ಆದ್ಯತೆಯಾಗಿ ಆರೋಗ್ಯ ಸೇವೆ ಹಾಗೂ ಬಡಜನರಿಗೆ ನೆರವಾಗುವ ನಿಟ್ಟಿನಲ್ಲಿ ಸರಕಾರ ಮುಂದಡಿ ಇಡಬೇಕಾಗಿದೆ.

ಲಾಕ್‌ಡೌನ್‌ ಘೋಷಿಸಿದರೆ ನೆರವಿನ ಪ್ಯಾಕೇಜ್‌ ಘೋಷಿಸಬೇಕು ಎಂಬ ಕಾರಣಕ್ಕೆ ಕರ್ಫ್ಯೂ ಹೆಸರು ಬಳಕೆ ಮಾಡಲಾಗುತ್ತಿದೆ ಎಂದು ವಿಪಕ್ಷಗಳು ಟೀಕಿಸುತ್ತಿದ್ದು, ಬಡವರ್ಗಕ್ಕೆ ಪ್ಯಾಕೇಜ್‌ ಘೋಷಿಸಲು ಸರಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತಲೇ ಇವೆ.

ಆದರೆ ಸರಕಾರ ಮೌನವಹಿಸಿದೆ. ಪ್ಯಾಕೇಜ್‌ ಘೋಷಣೆ ಸಂಬಂಧ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದೆಯಾದರೂ ಯಾವುದೇ ತೀರ್ಮಾನಕ್ಕೆ ಬಂದಿಲ್ಲ. ಇಂತಹ ಸಂದರ್ಭ ಸರಕಾರದ ಮೌನ ಸರಿಯಲ್ಲ. ಅಗತ್ಯ ಇರುವಾಗ ಬಿಟ್ಟು ಅನಂತರ ಕೊಟ್ಟರೂ ಪ್ರಯೋಜನವಿಲ್ಲ. ರೈತರು, ಕಾರ್ಮಿಕರು, ಬೀದಿ ವ್ಯಾಪಾರಿಗಳು, ದಿನದ ದುಡಿಮೆ ನಂಬಿ ಬದುಕುವ ಕುಶಲ ಕರ್ಮಿಗಳು, ಆಟೋ ಮತ್ತು ಟ್ಯಾಕ್ಸಿ ಚಾಲಕರು, ಗಾರ್ಮೆಂಟ್ಸ್‌ ನೌಕರರು ಬಹುದೊಡ್ಡ ವರ್ಗವಿದೆ. ಲಕ್ಷಾಂತರ ಕುಟುಂಬಗಳು ಇದರ ಮೇಲೆ ಆಧಾರವಾಗಿವೆ.

ಅದರಲ್ಲೂ ರಾಜ್ಯದಲ್ಲಿ ಆಯಾ ದಿನದಗಳಿಕೆಯ ಮೇರೆಗೆ ಲಕ್ಷಾಂತರ ಮಂದಿ ಬದುಕುತ್ತಿದ್ದಾರೆ. ಈ ವಿಧಿಸಲಾಗಿರುವ ನಿರ್ಬಂಧ ಅವರನ್ನು ಇನ್ನಿಲ್ಲದ ಕಷ್ಟಕ್ಕೆ ದೂಡಿದೆ. ಅದರಲ್ಲೂ ಆಟೋ ಡ್ರೈವರ್‌ ಗಳು, ಟ್ಯಾಕ್ಸಿ ಚಾಲಕರು, ಬೀದಿ ಬದಿ ವ್ಯಾಪಾರಿಗಳಂತೂ ಭಾರೀ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ ಬಾರಿ ಘೋಷಿಸಿದ ರೀತಿಯಲ್ಲಿ ಈ ಬಾರಿಯೂ ಈ ಸಮುದಾಯಗಳಿಗೆ ತಿಂಗಳಿಗೆ ಇಷ್ಟು ಅಂತ ನೆರವು ಘೋಷಿಸಲೇಬೇಕು.

ಕಳೆದ ವರ್ಷದ ಲಾಕ್‌ಡೌನ್‌ ಸಂದರ್ಭದಲ್ಲಿ ಪಡಿತರ ಹೆಚ್ಚಳ, ಆರ್ಥಿಕ ನೆರವಿನ ಪ್ಯಾಕೇಜ್‌ನಿಂದ ಸ್ವಲ್ಪ ಮಟ್ಟಿಗೆ ಬಡವರ್ಗ ನಿರಾಳವಾಗಿತ್ತು. ಈ ಬಾರಿ ಪ್ಯಾಕೇಜ್‌ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಬಹುತೇಕ ಒಂದು ತಿಂಗಳು ವಾರಾಂತ್ಯ ಕರ್ಫ್ಯೂ, ಸಂಪೂರ್ಣ ಕರ್ಫ್ಯೂ, ಲಾಕ್‌ಡೌನ್‌ ಮಾದರಿ ಕರ್ಫ್ಯೂ ಜಾರಿಯಾದಂತಾಗುತ್ತದೆ. ಒಂದು ತಿಂಗಳು ದುಡಿಮೆ ಇಲ್ಲದೆ ಶ್ರಮಿಕವರ್ಗ, ಬಡವರ್ಗ ಜೀವನ ನಡೆಸುವುದು ಕಷ್ಟ. ಮನೆ ಬಾಡಿಗೆ, ದೈನಂದಿನ ಮನೆಯ ವೆಚ್ಚಕ್ಕೆ ದಾರಿ ಕಾಣದಂತಾಗಿದೆ. ಹೀಗಾಗಿ ರಾಜ್ಯ ಸರಕಾರ ಬಡವರ್ಗ ಹಾಗೂ ಶ್ರಮಿಕ ವರ್ಗದ ಹಿತಾಸಕ್ತಿ ಗಮನ ದಲ್ಲಿಟ್ಟುಕೊಂಡು ಆ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ಪ್ರಾಮಾಣಿಕ ಹಾಗೂ ಮುಕ್ತ ಮನಸ್ಸಿನಿಂದ ಯೋಚಿಸಬೇಕಾಗಿದೆ. ಆದಷ್ಟು ಶೀಘ್ರ, ಅಂದರೆ ಇಂದು ನಾಳೆಯೊಳಗೆ ತೀರ್ಮಾನ ತೆಗೆದುಕೊಂಡಷ್ಟು ಈ ದುಡಿಯುವ ವರ್ಗಕ್ಕೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.