ಹೆಮ್ಮಾಡಿ : ಬ್ಯಾಂಕ್‌ವೊಂದರ ಸಿಬಂದಿಗೆ ಪಾಸಿಟಿವ್ ವದಂತಿ
Team Udayavani, Jul 11, 2020, 8:00 AM IST
ಕುಂದಾಪುರ: ಹೆಮ್ಮಾಡಿಯಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್‌ವೊಂದರ ಸಿಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ ಎನ್ನುವ ಸುಳ್ಳು ವದಂತಿ ಶುಕ್ರವಾರ ಎಲ್ಲೆಡೆ ಹಬ್ಬಿತ್ತು. ಆದರೆ ಅಲ್ಲಿನ ಯಾವ ಸಿಬಂದಿಗೂ ಈವರೆಗೆ ಪಾಸಿಟಿವ್ ಬಂದಿಲ್ಲ.
ಈ ಸುದ್ದಿ ಎಲ್ಲೆಡೆ ಹಬ್ಬಿದ್ದು, ಇದರಿಂದ ಶುಕ್ರವಾರ ಗ್ರಾಹಕರು ಬ್ಯಾಂಕಿನತ್ತ ಸುಳಿಯಲೇ ಇಲ್ಲ. ಈ ಕಾರಣಕ್ಕೆ ಬೆಳಗ್ಗೆ 11 ಗಂಟೆಯಿಂದ ಬಂದ್ ಮಾಡಲಾಯಿತು.
ಆಗಿದ್ದೇನು?
ಇದೇ ಬ್ಯಾಂಕಿನ ಶಿರೂರು ಶಾಖೆಯ ಮ್ಯಾನೇಜರ್ ಒಬ್ಬರಿಗೆ ಪಾಸಿಟಿವ್ ಬಂದಿದ್ದು, ಅಲ್ಲಿನ ಮಹಿಳಾ ಸಿಬಂದಿಯೊಬ್ಬರು ಗುರುವಾರ ಒಂದು ದಿನದ ಮಟ್ಟಿಗೆ ಬದಲಿಯಾಗಿ ಹೆಮ್ಮಾಡಿಯ ಶಾಖೆಗೆ ಕೆಲಸಕ್ಕೆ ಬಂದಿದ್ದಾರೆ. ಆದರೆ ಆ ಸಿಬಂದಿಗೆ ಕೊರೊನಾ ಇರುವುದು ದೃಢವಾಗಿಲ್ಲ. ಹಾಗಾಗಿ ಆತಂಕ ಪಟ್ಟುಕೊಳ್ಳಬೇಕಾದ ಅಗತ್ಯವಿಲ್ಲ. ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳದೇ ಸುಳ್ಳು ಸಂದೇಶವನ್ನು ರವಾನಿಸಿದ್ದು ಗೊಂದಲಕ್ಕೆ ಕಾರಣವಾಗಿದೆ.
ಸೀಲ್‌ಡೌನ್ ಗೊಂದಲ?
ಇಲ್ಲಿ ಸದ್ಯ ಐವರು ಸಿಬಂದಿ ಕಾರ್ಯ ನಿರ್ವಹಿಸುತ್ತಿದ್ದು, ಇವರು ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಯ ಎರಡನೇ ಸಂಪರ್ಕ ಆಗಿರುವುದರಿಂದ ಸೀಲ್‌ಡೌನ್ ಮಾಡಬೇಕೆ ? ಅಥವಾ ಬೇಡವೇ ಎನ್ನುವ ಗೊಂದಲ ಉಂಟಾಗಿದ್ದು, ಈ ಬಗ್ಗೆ ತಾಲೂಕು ಆಡಳಿತದ ಆದೇಶಕ್ಕೆ ಕಾಯುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.