HC: ಕಲ್ಲಡ್ಕ ಭಟ್ಟರ ಭಾಷಣದ ಪೂರ್ಣಪಾಠ ಸಲ್ಲಿಸುವಂತೆ ಹೈಕೋರ್ಟ್ ನಿರ್ದೇಶನ
Team Udayavani, Jan 20, 2024, 12:11 AM IST
ಬೆಂಗಳೂರು: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ಮಾಡಿದ ಭಾಷಣದ ಪೂರ್ಣಪಾಠವನ್ನು ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರರಾರಕ್ಕೆ ನಿರ್ದೇಶನ ನೀಡಿದೆ.
ಭಟ್ಟರ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಬೇಕು ಮತ್ತು ವಿಚಾರಣೆಗೆ ತಡೆ ನೀಡಬೇಕು ಎಂದು ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಿತು.
ಕಲ್ಲಡ್ಕ ಪ್ರಭಾಕರ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಂ ವಾದಿಸಿ, ದೂರುದಾರರು ಭಾಷಣದ ಮಧ್ಯದಿಂದ ಪದಗಳನ್ನು ಹೆಕ್ಕಿ ದೂರು ನೀಡಿದ್ದಾರೆ. ದೂರುದಾರರು ರಾಜಕೀಯ ಕಾರ್ಯಕರ್ತೆಯಾಗಿದ್ಧಾರೆ. ಭಾಷಣದ ಕೆಲವು ಪದಗಳನ್ನು ಹೆಕ್ಕಿ ತೆಗೆದು ಅದಕ್ಕೆ ಅಪರಾಧದ ಬಣ್ಣ ನೀಡಲಾಗಿದೆ. ಈ ಹಿಂದೆ ಸರಕಾರವೇ ಹೈಕೋರ್ಟ್‌ನಲ್ಲಿ ಪ್ರಭಾಕರ ಭಟ್ಟರನ್ನು ಬಂಧಿಸುವುದಿಲ್ಲ ಎಂದು ಹೇಳಿದೆ. ಪೊಲೀಸರು ರಾಜಕೀಯ ಒತ್ತಡದಿಂದ ಪ್ರಕರಣ ದಾಖಲಿಸಿದ್ಧಾರೆ ಎಂಬುದು ಸರಕಾರಕ್ಕೆ ಮನವರಿಕೆ ಆಗಿದೆ. ಸುಳ್ಳು ದೂರನ್ನು ಉದ್ದೇಶಪೂರ್ವಕವಾಗಿ ದಾಖಲಿಸಿದ್ಧಾರೆ. ಹಾಗಾಗಿ ತತ್‌ಕ್ಷಣಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿಕೊಂಡರು.
ದೂರುದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್. ಬಾಲನ್, ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಭಾಷಣ ಮಾಡುತ್ತಿರುತ್ತಾರೆ. ರಾಜ್ಯಾದ್ಯಂತ ದ್ವೇಷ ಭಾಷಣ ಮಾಡುತ್ತಾ ಕೋಮುಗಲಭೆ ಸೃಷ್ಟಿಸಿ ಹಿಂಸಾಚಾರಗಳನ್ನು ಮಾಡಿದ ಇತಿಹಾಸ ಇದೆ. ಈವರೆಗೆ ಅವರ ವಿರುದ್ದ ದಾಖಲಾದ ದೂರುಗಳನ್ನು ಪೀಠ ತರಿಸಿಕೊಳ್ಳಬೇಕು. ಮುಸ್ಲಿಮರಿಗೆ ದಿನಕ್ಕೊಬ್ಬ ಗಂಡ ಎಂದು ಆರೋಪಿ ಹೇಳಿರುವುದು ಇಡೀ ಮುಸ್ಲಿಂ ಸಮುದಾಯಕ್ಕೆ ಮಾಡಿದ ಅವಮಾನ. ಹಾಗಾಗಿ ರಾಜ್ಯಾದ್ಯಂತ ಮುಸ್ಲಿಂ ಸಮುದಾಯ ಬೀದಿಗಿಳಿದು ಪ್ರತಿಭಟನೆ ನಡೆಸಿದೆ ಎಂದು ವಾದಿಸಿದರು.
ಸುಪ್ರಿಂ ಕೋರ್ಟ್ ತೀರ್ಪುಗಳು, ಕಾನೂನುಗಳು ಈ ರೀತಿಯ ದ್ವೇಷ ಭಾಷಣಕ್ಕೆ ಅವಕಾಶ ಕೊಡುವುದಿಲ್ಲ. ಆರೋಪಿ ಪರ ವಕೀಲರು ಭಾಷಣವನ್ನು ಬರಹ ರೂಪದಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ್ಧಾರೆ. ಆ ಕೆಲಸವನ್ನು ಸರಕಾರ ಮಾಡಬೇಕೇ ಹೊರತು ಆರೋಪಿ ಪರ ವಕೀಲರಲ್ಲ. ಸರಕಾರಕ್ಕೆ ಈ ನಿಟ್ಟಿನಲ್ಲಿ ನಿರ್ದೇಶನ ನೀಡಬೇಕು. ಅದಲ್ಲದೆ, ಆರೋಪಿಯ ಪೂರ್ತಿ ಭಾಷಣವನ್ನು ಕಲಾಪದಲ್ಲಿ ಕೇಳಲು ಕೋರ್ಟ್‌ನಲ್ಲಿ ವೀಡಿಯೋ ಪ್ರದರ್ಶನಕ್ಕೆ ಅವಕಾಶ ಕೊಡಬೇಕು. ಆರೋಪಿಯ ಪ್ರಕರಣಕ್ಕೆ ತಡೆಯಾಜ್ಞೆ ನೀಡಬಾರದು ಎಂದು ಬಾಲನ್ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.