ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
ಯತ್ನಾಳ್ ಸೇರಿ ಹಲವರು ಸಲ್ಲಿಸಿರುವ ಅರ್ಜಿ ವಿಚಾರಣೆ... ಡಿ. 12ಕ್ಕೆ ಮುಂದಿನ ವಿಚಾರಣೆ ನಿಗದಿ
Team Udayavani, Nov 22, 2024, 11:43 PM IST
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ದಾಖಲಿಸಿಕೊಂಡಿರುವ (ಜೂ. 3, 2024) ಎಫ್ಐಆರ್‌ನ ಅನುಸಾರ ನಡೆಸಿರುವ ತನಿಖೆಯ ಪ್ರಗತಿ ವರದಿ ಸಲ್ಲಿಸುಂತೆ ಸಿಬಿಐಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಪ್ರಕರಣದ ತನಿಖೆಯಲ್ಲಿ ಸೂಕ್ತ ಪ್ರಗತಿಯಾಗಿಲ್ಲ. ಆದ್ದರಿಂದ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಶುಕ್ರವಾರ ಈ ನಿರ್ದೇಶನ ನೀಡಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ ಸಿಬಿಐಗೆ ನೋಟಿಸ್ ನೀಡಿದ್ದು ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ. 12ಕ್ಕೆ ನಿಗದಿಪಡಿಸಿದ್ದು, ಅಂದು ಸಿಬಿಐ ತನ್ನ ತನಿಖಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.
ಅರ್ಜಿದಾರರ ಪರ ವಕೀಲ ಪಿ. ವೆಂಕಟೇಶ್ ದಳವಾಯಿ ವಾದ ಮಂಡಿಸಿ, ಸಿಬಿಐ ತನಿಖೆಯನ್ನು ಹೈಕೋರ್ಟ್ ನಿಗಾದಲ್ಲಿಯೇ ನಡೆಸಬೇಕು. ಪ್ರತಿ 15 ದಿನಗಳಿಗೊಮ್ಮೆ ಸಿಬಿಐ ತನಿಖೆಯ ಪ್ರಗತಿ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಬೇಕು ಮತ್ತು ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.