High Court ಕೆ. ನಾಗಣ್ಣ ಗೌಡ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾ
Team Udayavani, Nov 20, 2023, 10:15 PM IST
ಬೆಂಗಳೂರು: ಕೇಂದ್ರ ಸರಕಾರ ಅಧಿಸೂಚಿತ ಸಂಸ್ಥೆಗಳಿಗೆ, ಹುದ್ದೆಗಳ ನೇಮಕಕ್ಕೆ ಆಯ್ಕೆ ಸಮಿತಿ ರಚನೆ ಮಾಡಿರುವಾಗ ಅಂಥ ಹುದ್ದೆಗೆ ಯಾರು ಅರ್ಹರು ಎಂದು ನ್ಯಾಯಾಲಯಗಳು ನಿರ್ಧರಿಸಲಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅಧ್ಯಕ್ಷರ ಹುದ್ದೆಗೆ ಕೆ. ನಾಗಣ್ಣ ಗೌಡ ಅವರನ್ನು ನೇಮಿಸಿದ್ದ ಸರಕಾರದ ಆದೇಶವನ್ನು ಎತ್ತಿಹಿಡಿದಿದೆ.
ನಾಗಣ್ಣ ಗೌಡರ ನೇಮಕವನ್ನು ರದ್ದುಗೊಳಿಸಿ ಹೊಸದಾಗಿ ನೇಮಕ ಪ್ರಕ್ರಿಯೆ ನಡೆಸುವಂತೆ ಕೋರಿ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅಧ್ಯಕ್ಷರ ಹುದ್ದೆಯ ಆಕಾಂಕ್ಷಿಯಾಗಿದ್ದ ವಕೀಲ ಆಶೋಕ್ ಡಿ.ಸನಾದಿ ಎಂಬವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಸರಕಾರದ ನೇಮಕಾತಿಗಳನ್ನು ನ್ಯಾಯಿಕ ಪರಾಮರ್ಶೆ ಮಾಡುವ ಸಂದರ್ಭದಲ್ಲಿ ನ್ಯಾಯಾಲಯವು ಆಯ್ಕೆ ಸಮಿತಿ ಹಾಗೂ ಮೇಲ್ಮನವಿ ನ್ಯಾಯಾಧಿಕರಣದಂತೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ನ್ಯಾಯಾಲಯಗಳು ಎಲ್ಲ ಸಂದರ್ಭದಲ್ಲಿ ತಮ್ಮ ವಿವೇಚನಾಧಿಕಾರ ಬಳಸುವುದಕ್ಕೆ ಸಾಧ್ಯವಿಲ್ಲ. ಆದರೆ ಸರಕಾರದ ನೇಮಕಾತಿಯು ಕಾನೂನಿನ ಉಲ್ಲಂಘನೆ ಅಥವಾ ನಿರಂಕುಶತೆಯಿಂದ ಕೂಡಿದ್ದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಬಹುದಾಗಿದೆ ಎಂದು ಪೀಠ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.