Honey Trap Case ರದ್ದತಿಗೆ ಮುನಿರತ್ನ ಅರ್ಜಿ: ಪೊಲೀಸರಿಗೆ ಹೈಕೋರ್ಟ್ ನೋಟಿಸ್
Team Udayavani, Dec 13, 2024, 1:37 AM IST
ಬೆಂಗಳೂರು: ತಮ್ಮ ಕುಟುಂಬದ ವಿರುದ್ಧ ಹನಿಟ್ರ್ಯಾಪ್ ಪಿತೂರಿ ನಡೆಸಿದ ಹಾಗೂ ಕೊಲೆಗೆ ಸುಪಾರಿ ನೀಡಿದ ಆರೋಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬಿಬಿಎಂಪಿ ಮಾಜಿ ಸದಸ್ಯೆ ಮಂಜುಳಾ ಪತಿ ಲಗ್ಗೆರೆ ನಾರಾಯಣ ಸ್ವಾಮಿ ನಂದಿನಿ ಲೇಔಟ್ ಠಾಣೆಯಲ್ಲಿ ದಾಖಲಿಸಿರುವ ದೂರಿನ ಸಂಬಂಧ ಪೊಲೀಸರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಪ್ರಕರಣ ರದ್ದುಪಡಿಸುವಂತೆ ಕೋರಿ ಮುನಿರತ್ನ ಸಲ್ಲಿಸಿದ ಅರ್ಜಿಯು ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ ನಂದಿನಿಲೇಔಟ್ ಪೊಲೀಸರಿಗೆ ನೋಟಿಸ್ ನೀಡಿದೆ.
ಅಲ್ಲದೇ ಪ್ರಕರಣದಲ್ಲಿ ಇಲ್ಲಿವರೆಗೆ ಏನೆಲ್ಲಾ ಆಗಿದೆ ಎಂಬ ಬಗ್ಗೆ ದಾಖಲೆಗಳನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರಕಾರಿ ಅಭಿಯೋಜಕರಿಗೆ ಸೂಚಿಸಿದ ನ್ಯಾಯಪೀಠ, ಅದನ್ನು ಗಮನಿಸಿ ಅರ್ಜಿ ಯಲ್ಲಿ ಎರಡನೇ ಪ್ರತಿವಾದಿಯಾಗಿರುವ ದೂರುದಾರ ನಾರಾಯಣ ಸ್ವಾಮಿಗೆ ನೋಟಿಸ್ ಜಾರಿಗೊಳಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…
Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ
Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್
Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.