ರೈತರ ಕುಂದು ಕೊರತೆಗಳ ನಿವಾರಣೆ ಬಗ್ಗೆ ಮಾಹಿತಿ ಕೇಳಿದ ಹೈಕೋರ್ಟ್
Team Udayavani, Apr 30, 2020, 1:17 PM IST
ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಾಗ ರೈತರು ಎದುರಿಸುತ್ತಿರುವ ಕುಂದುಕೊರತೆಗಳನ್ನು ನಿವಾರಿಸಲು ಯಾವ ಕಾರ್ಯವಿಧಾನದ ವ್ಯವಸ್ಥೆ ಮಾಡಲಾಗಿದೆ ಎಂಬ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ ಸರ್ಕಾರಕ್ಕೆ ಈ ನಿರ್ದೇಶನ ನೀಡಿದೆ. ಮೇ 4ರೊಳಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೆಚ್ಚುವರಿ ಅಡ್ವೋಕೇಟ್ ಜನರಲ್ ತಿಳಿಸಿದರು. ನ್ಯಾಯಪೀಠ ವಿಚಾರಣೆಯನ್ನು ಮೇ 5ಕ್ಕೆ ಮುಂದೂಡಿತು.
ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ
ರೈತರಿಗೆ ಟೋಲ್ ವಿನಾಯಿತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಅರ್ಜಿ ವಿಚಾರಣೆ ವೇಳೆ, ಕೇಂದ್ರ ಸರ್ಕಾರದ ಪರ ಸಹಾಯಕ ಸಾಲಿಸಿಟರ್ ಜನರಲ್ ಅವರು, ಟೋಲ್ ವಿನಾಯಿತಿ ಏ.28ರವರೆಗೆ ಚಾಲ್ತಿಯಲ್ಲಿತ್ತು. ಈ ಮಧ್ಯೆ, ಟೋಲ್ ವಿನಾಯಿತಿ ವಿಚಾರದಲ್ಲಿ ನಿಲುವು ತಿಳಿಸಲು ವಿಚಾರಣೆಗೆ ಹಾಜರಾಗಲು ಅನುಮತಿ ನೀಡಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಇ-ಮೇಲ್ ಕೋರಿಕೆ ಬಂದಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಅದಕ್ಕೆ ಮೇ 5ರ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ಉತ್ತರಿಸುವಂತೆ ರಾಷ್ಟ್ರೀಯ ಪ್ರಾಧಿಕಾರಕ್ಕೆ ಸೂಚನೆ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.