ಅಧಿಕ ದರ ವಸೂಲಿ: ಗ್ರಾ.ಪಂ.ಕಣ್ಗಾವಲು:ಸಚಿವ ಶ್ರೀನಿವಾಸ ಪೂಜಾರಿ ಸೂಚನೆ
Team Udayavani, Apr 29, 2020, 5:45 AM IST
ಮಂಗಳೂರು: ದಿನಸಿ ಸಾಮಗ್ರಿ, ತರಕಾರಿ ಹಣ್ಣು ಹಂಪಲುಗಳ ದರ ನಿಯಂತ್ರಣಕ್ಕೆ ಗ್ರಾಮ ಪಂಚಾಯತ್‌ಗಳು ಅವಶ್ಯ ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.
ದ.ಕ. ಜಿ.ಪಂ. ಸಭಾಂಗಣದಲ್ಲಿ ಮಂಗಳ ವಾರ ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳ ಆಯ್ದ ಗ್ರಾ.ಪಂ. ಅಧ್ಯಕ್ಷರು ಹಾಗೂ ಪಿಡಿಒಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದರು.
ಕೆಲವು ಅಂಗಡಿಗಳಲ್ಲಿ ನಿಗದಿಗಿಂತ ಹೆಚ್ಚು ದರ ವಸೂಲು ಮಾಡುತ್ತಿರುವ ಬಗ್ಗೆ ಸಾರ್ವಜನಿಕರ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಗ್ರಾ.ಪಂ.ಗಳು ತಮ್ಮ ವ್ಯಾಪ್ತಿಯ ಅಂಗಡಿಗಳಲ್ಲಿ ಆಹಾರ ಸಾಮಗ್ರಿಗಳ ದರ ಪರಿಶೀಲನೆ ನಡೆಸಬೇಕು ಎಂದರು.
ಆರೋಗ್ಯ ಸಮೀಕ್ಷೆ
ಗ್ರಾ.ಪಂ. ಸದಸ್ಯರು ತಮ್ಮ ವ್ಯಾಪ್ತಿಯ ಎಲ್ಲ ಮನೆಗಳಿಗೆ ಆಶಾ ಕಾರ್ಯಕರ್ತೆಯ ರೊಂದಿಗೆ ತೆರಳಿ ಮನೆಯ ಸದಸ್ಯರ ಆರೋಗ್ಯ ಸಮೀಕ್ಷೆ ಮಾಡಬೇಕು. ಗ್ರಾ.ಪಂ. ಅಧ್ಯಕ್ಷರು ಮತ್ತು ಸದಸ್ಯರು ತಂಡವಾಗಿ ಕೆಲಸ ಮಾಡಿ ಸಾರ್ವಜನಿಕರಲ್ಲಿ ಆತ್ಮಸ್ಥೈರ್ಯ ತುಂಬಬೇಕು ಎಂದು ಸಚಿವರು ಸೂಚಿಸಿದರು.
ಕಾರ್ಡ್ ಇಲ್ಲದವರಿಗೂ ಅಕ್ಕಿ
ಗ್ರಾ.ಪಂ.ಗಳಲ್ಲಿ ಪಡಿತರ ವಿತರಣೆಯನ್ನು ಪರಿಶೀಲಿಸಿದ ಸಚಿವರು, ಕಾರ್ಡ್ ಇಲ್ಲದವರಿಗೆ ಅಕ್ಕಿ ಕೊಡುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಗ್ರಾ.ಪಂ.ಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ, ಕುಡಿಯುವ ನೀರಿನ ಕಾಮಗಾರಿ ಗಳ ಪರಿಶೀಲನೆ ನಡೆಸಿದ ಸಚಿವರು, ಕುಡಿಯುವ ನೀರಿನ ಅಗತ್ಯ ಇರುವ ಕಡೆ ಕೊಳವೆ ಬಾವಿಗಳನ್ನು ಕೊರೆಯಲು ಅನುಮತಿ ನೀಡಲಾಗುತ್ತದೆ ಎಂದರು.
ಕೋವಿಡ್ 19 ನಿರ್ವಹಣೆಗಾಗಿ ಪ್ರತಿ ಗ್ರಾ.ಪಂ.ಗೆ 20,000 ರೂ. ನೀಡಲಾಗಿದೆ. ಅದರಲ್ಲಿ ವಿವಿಧ ಜಾಗೃತಿ ಕಾರ್ಯಗಳನ್ನು ಹಾಗೂ ಆಶಾ ಕಾರ್ಯಕರ್ತೆಯರಿಗೆ ಅಗತ್ಯ ಸಾಮಗ್ರಿಗಳನ್ನು ಖರೀದಿಸಿ ನೀಡಬಹು ದಾಗಿದೆ ಎಂದು ಸಚಿವರು ಹೇಳಿದರು.
ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸಿಇಒ ಡಾ| ಸೆಲ್ವಮಣಿ ಆರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಚಂದ್ರ ಬಾಯರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.