ಪತ್ರಿಕೆಗಳ ವಿರುದ್ಧ ಮಹಾ ಹೇಳಿಕೆಗೆ ಹೈಕೋರ್ಟ್ ಕಿಡಿ
Team Udayavani, Apr 28, 2020, 10:11 AM IST
ಮುಂಬಯಿ: ವೃತ್ತಪತ್ರಿಕೆಗಳಿಂದಲೂ ಕೋವಿಡ್ ಹಬ್ಬುತ್ತದೆ ಎಂದು ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠ ಸೋಮವಾರ ಕಿಡಿಕಾರಿದೆ. ಆರೋಗ್ಯ ತಜ್ಞರ ಅಭಿಪ್ರಾಯ ಪಡೆಯದೇ ನಿಮ್ಮಿಷ್ಟ ಬಂದಂತೆ ಹೇಗೆ ಹೇಳಿಕೆ ನೀಡಿದಿರಿ ಎಂದು ಪ್ರಶ್ನಿಸಿದೆ.
ಲಾಕ್‌ಡೌನ್ ಹಿನ್ನೆಲೆಯಲ್ಲಿ ಪತ್ರಿಕೆಗಳನ್ನು ಮನೆ ಮನೆಗೆ ತಲುಪಿಸುವುದಕ್ಕೆ ನಿರ್ಬಂಧ ಹೇರಿ ಮಹಾರಾಷ್ಟ್ರ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಿದ ನ್ಯಾ.ಪ್ರಸನ್ನ ಬಿ. ವರಾಲೆ, ಈ ಕುರಿತು ಸರ್ಕಾರದ ಪ್ರತಿಕ್ರಿಯೆ ಕೋರಿದ್ದರು. ಸೋಮವಾರ ಸರ್ಕಾರವು ಅಫಿಡವಿಟ್ ಸಲ್ಲಿಸಿ, ವೈರಸ್ ಒಂದೊಂದು ಮೇಲ್ಮೆ„ನಲ್ಲಿ ನಿರ್ದಿಷ್ಟ ಸಮಯದವರೆಗೆ ಉಳಿಯುತ್ತವೆ. ಪತ್ರಿಕೆಗಳು ಒಬ್ಬರ ಕೈಯಿಂದ ಮತ್ತೂಬ್ಬರ ಕೈಗೆ ಹೋಗುವಾಗ ವೈರಸ್ ಹಬ್ಬುವ ಸಾಧ್ಯತೆಯಿರುತ್ತದೆ’ ಎಂದು ಹೇಳಿತು. ಈ ಸ್ಪಷ್ಟನೆಯಿಂದ ಅಸಮಾಧಾನಗೊಂಡ ನ್ಯಾಯಮೂರ್ತಿಗಳು, ನಿಮ್ಮ ಹೇಳಿಕೆ ಹಿಂದಿನ ಲಾಜಿಕ್ ಯಾರಿಗೂ ಅರ್ಥವಾಗುತ್ತಿಲ್ಲ. ನೀವು ಅಫಿಡವಿಟ್ ನಲ್ಲಿ ಎಲ್ಲೂ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ತಜ್ಞರು ಅಥವಾ ಪರಿಣತರ ಅಭಿಪ್ರಾಯ, ಹೇಳಿಕೆಯನ್ನು ಉÇÉೇಖೀಸಿಲ್ಲ. ಆದರೆ, ಮತ್ತೂಂದೆಡೆ ಅನೇಕ ತಜ್ಞರು ಪತ್ರಿಕೆಗಳ ಮೂಲಕ ಕೋವಿಡ್ ಹರಡಲ್ಲ ಎಂದು ಹೇಳಿರುವುದು ಹಲವು ಪತ್ರಿಕೆಗಳಲ್ಲಿ ವರದಿಯಾಗಿವೆ’ ಎಂದರು.
ಜತೆಗೆ, ತಮ್ಮೆಲ್ಲ ಸಂದೇಹಗಳಿಗೂ ಉತ್ತರ ಸಿಗುವಂತೆ ಹೆಚ್ಚುವರಿ ಅಫಿಡವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದ ನ್ಯಾ.ವರಾಲೆ, ಮುಂದಿನ ವಿಚಾರಣೆಯಲ್ಲಿ ಜೂ.11ಕ್ಕೆ ಮುಂದೂಡಿದರು. ಏ.18ರಂದು ಲಾಕ್ ಡೌನ್ ಗೆ ಸಂಬಂಧಿಸಿದ ಮಾರ್ಗಸೂಚಿ ಹೊರಡಿಸಿದ್ದ ಮಹಾರಾಷ್ಟ್ರ ಸರ್ಕಾರ, ಪತ್ರಿಕೆಗಳು ಮತ್ತು ನಿಯತಕಾಲಿಕೆಗಳನ್ನು ಮನೆ ಮನೆಗೆ ತಲುಪಿಸುವುದಕ್ಕೆ ನಿರ್ಬಂಧ ಹೇರಿತ್ತು. ಈ ನಿರ್ಧಾರಕ್ಕೆ ಸಂಬಂಧಿಸಿ ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಏ.21ರಂದು ರಾಜ್ಯ ಸರ್ಕಾರಕ್ಕೆ ಕೋರ್ಟ್ ಆದೇಶಿಸಿತ್ತು. ಜತೆಗೆ, ಈ ವಿಚಾರದಲ್ಲಿ ಕೋರ್ಟ್ ಗೆ ಸಲಹೆ ನೀಡಲು ವಕೀಲ ಸತ್ಯಜಿತ್ ಬೋರಾ ಅವರನ್ನು ಅಮಿಕಸ್ ಕ್ಯೂರಿಯನ್ನಾ ಗಿಯೂ ನೇಮಕ ಮಾಡಿತ್ತು. ಅದೇ ದಿನ, ಮಹಾರಾಷ್ಟ್ರ ಸರ್ಕಾರವು ಮುಂಬೈ ಮೆಟ್ರೋಪಾಲಿಟನ್ ಪ್ರದೇಶ ಮತ್ತು ಪುಣೆ ಹೊರತು ಪಡಿಸಿ ಉಳಿದ ಕಡೆ ಪತ್ರಿಕೆಗಳ ವಿತರಣೆಗೆ ಅವಕಾಶ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.