ಹಿಜಾಬ್ ವಿವಾದ : ಶಾಂತವಾಗಿ ತೀರ್ಪು ಸ್ವೀಕರಿಸಿದ ಉಡುಪಿ ಜನತೆ
Team Udayavani, Mar 16, 2022, 3:23 PM IST
ಉಡುಪಿ : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮಂಗಳವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದರಿಂದ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ, ವಿಜಯೋತ್ಸವಗಳು ನಡೆದಿಲ್ಲ. ನ್ಯಾಯಾಲಯದ ತೀರ್ಪನ್ನು ವಿದ್ಯಾರ್ಥಿಗಳು ಸಹಿತವಾಗಿ ಬಹುತೇಕರು ಶಾಂತವಾಗಿ ಸ್ವೀಕರಿಸಿ, ಸ್ವಾಗತಿಸಿದ್ದಾರೆ. ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬುಧವಾರದಿಂದ ಎಂದಿನಂತೆ ಶೈಕ್ಷಣಿಕ ತರಗತಿಗಳು ಹಾಗೂ ಪರೀಕ್ಷೆ ನಡೆಯುವುದರಿಂದ ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕ, ಪೋಷಕರು, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಣ ಸಂಸ್ಥೆಗಳು, ಶೈಕ್ಷಣಿಕ ಸಂಘಟನೆಗಳು ನ್ಯಾಯಾಲಯದ ತೀರ್ಪನ್ನು ಗೌರವಿಸಿ ಯಾವುದೇ ಅಹಿತಕರ ಘಟನೆ ಆಗದಂತೆ ಎಚ್ಚರ ವಹಿಸುವುದು ಅತಿ ಮುಖ್ಯವಾಗಿದೆ ಎಂಬುದು ಜನಾಭಿಪ್ರಾಯವಾಗಿದೆ.
ಮಂಗಳವಾರ ಎಲ್ಲ ಶಾಲಾ ಕಾಲೇಜು ಗಳಿಗೂ ರಜೆ ನೀಡಿದ್ದರೂ ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಕಾಲೇಜು ಗಳ ಆಡಳಿತಾತ್ಮಕ ಕಾರ್ಯಗಳಲ್ಲಿ ಭಾಗ ವಹಿಸಿದ್ದಾರೆ. ಎಲ್ಲೆಡೆಯಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಹಿಜಾಬ್ ವಿವಾದ ಆರಂಭವಾದ ಸರಕಾರಿ ಬಾಲಕಿಯರ ಪಿಯು ಕಾಲೇಜು, ಎಂಜಿಎಂ ಕಾಲೇಜು ಸಹಿತವಾಗಿ ಎಲ್ಲ ಪ್ರೌಢಶಾಲೆ, ಕಾಲೇಜುಗಳಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿತ್ತು.
144 ಸೆಕ್ಷನ್ ಜಾರಿ
ಜಿಲ್ಲೆಯ ಶಾಲಾ ಕಾಲೇಜುಗಳ ಆವರಣದಲ್ಲಿ ಯಾವುದೇ ವಿಜಯೋತ್ಸವ, ಗುಂಪು ಘರ್ಷಣೆ ನಡೆಯದಂತೆ ಮಾ. 21ರ ಸಂಜೆ 6ರ ವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ನ್ಯಾಯಾಲಯದ ತೀರ್ಪನ್ನು ಎಲ್ಲರೂ ಗೌರವಿಸಿ, ಪಾಲಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ಸ್ವಾಗತ X ವಿರೋಧ
ಕೆಲವು ಮುಸ್ಲಿಂ ಸಂಘಟನೆಗಳು ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿವೆ. ಹಿಂದೂ ಪರ ಸಂಘಟನೆಗಳು ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.