ಫೆ.23ರಂದು ಸಂಡೂರಿಗೆ ಗೃಹ ಸಚಿವ ಅಮಿತ್ ಶಾ; ಸಚಿವ ಶ್ರೀರಾಮುಲು
Team Udayavani, Feb 19, 2023, 6:20 AM IST
ಬಳ್ಳಾರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.23ರಂದು ಸಂಡೂರಿಗೆ ಆಗಮಿಸಲಿದ್ದಾರೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11.45ಕ್ಕೆ ಸಂಡೂರು ರೆಸಿಡೆನ್ಸಿ ಶಾಲೆ ಆವರಣದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ನಂತರ ಜಿಂದಾಲ್‌ನ ಹಯಾತ್ ಹೊಟೇಲ್‌ನಲ್ಲಿ ಪಕ್ಷದ ಕಲಬುರಗಿ ವಿಭಾಗದ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಜಿಲ್ಲೆಗಳ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.
ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು ಎಂದರು.
ಮುಂಬರುವ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣ ಅಥವಾ ಸಂಡೂರು ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಅಂದುಕೊಂಡಿದ್ದೇನೆ. ಆದರೆ, ಅಂತಿಮವಾಗಿ ಪಕ್ಷದ ವರಿಷ್ಠರು ಹೇಳಿದ ಕಡೆ ಸ್ಪರ್ಧೆ ಮಾಡಬೇಕಾಗುತ್ತದೆ. ಪಕ್ಷದ ನಿರ್ಣಯಕ್ಕೆ ಬದ್ಧ ಎಂದು ಸ್ಪಷ್ಟಪಡಿಸಿದರು.
ಕೆಆರ್‌ಪಿ ಪಕ್ಷದ ವಿರುದ್ಧ ಸ್ಪರ್ಧೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶ್ರೀರಾಮುಲು, ರಾಜಕೀಯ ಮತ್ತು ಸ್ನೇಹವನ್ನು ಒಂದೇ ತಕ್ಕಡಿಯಲ್ಲಿ ಇಟ್ಟುಕೊಳ್ಳಲ್ಲ. ರಾಜಕೀಯ ವಿಷಯದಲ್ಲಿ ನನ್ನದೇ ಹೋರಾಟ ಇರುತ್ತದೆ. ಸ್ನೇಹವನ್ನು ಪರಿಗಣಿಸಲ್ಲ ಎಂದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಬಿಜೆಪಿ ಶಾಸಕರನ್ನು ಗೆಲ್ಲಿಸುವುದು ನನ್ನ ಉದ್ದೇಶ. ಈ ವಿಷಯದಲ್ಲಿ ರಾಜಕೀಯವೇ ಮುಖ್ಯವಾಗಿದೆ. ಯಾವುದೇ ಪಕ್ಷದಲ್ಲಿನ ಸ್ನೇಹವನ್ನು ನಾನು ರಾಜಕೀಯದಿಂದ ದೂರ ಇಡುವೆ. ನಮ್ಮದೇನಿದ್ದರೂ ಬಿಜೆಪಿ ಗೆಲುವಿನ ಯತ್ನ. ನಗರ ಕ್ಷೇತ್ರದಿಂದ ಹಾಲಿ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರ ಸ್ಪರ್ಧೆ ಕುರಿತು ಅನುಮಾನದ ಮಾತುಗಳು ಬೇಡ. ಅವರು ನಗರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತಾರೆ. ಬೇರೆ ಎಲ್ಲೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಜಿ.ಸೋಮಶೇಖರರೆಡ್ಡಿ, ಜಿಲ್ಲಾಧ್ಯಕ್ಷ ಗೋನಾಳ್ ಮುರಹರಗೌಡ ಇನ್ನಿತ ರ ರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.