ಪ್ರಿಯಾಂಕ್‌ ಖರ್ಗೆ ಮೇಲೆಯೇ ಅನುಮಾನ: ಗೃಹ ಸಚಿವ ಆರಗ ಜ್ಞಾನೇಂದ್ರ


Team Udayavani, Apr 24, 2022, 5:55 AM IST

ಪ್ರಿಯಾಂಕ್‌ ಖರ್ಗೆ ಮೇಲೆಯೇ ಅನುಮಾನ: ಗೃಹ ಸಚಿವ ಆರಗ ಜ್ಞಾನೇಂದ್ರ

ಕುಂದಾಪುರ: ಪಿಎಸ್‌ಐ ನೇಮಕಾತಿ ಅಕ್ರಮ ಅರೋಪದ ಬಗ್ಗೆ ನಮಗೆ ಸಾಕ್ಷ್ಯಾಧಾರಗಳು ದೊರೆತ ಕೂಡಲೇ ಸಿಒಡಿ ತನಿಖೆಗೆ ಆದೇಶಿಸಲಾಗಿದೆ. ಶಾಸಕ ಪ್ರಿಯಾಂಕ್‌ ಖರ್ಗೆಬಳಿ ಪ್ರಕರಣಕ್ಕೆ ಸಂಬಂಧಿಸಿ ಸಿಡಿ ಹಾಗೂ ಇತರ ಸಾಕ್ಷ್ಯಗಳು ಇವೆ ಎಂದಾದರೆ ಈವರೆಗೂ ಅದನ್ನು ತನಿಖಾ ತಂಡಕ್ಕೆ ಹಸ್ತಾಂತರಿಸದೆ ಇರಲು ಕಾರಣ ವೇನು? ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಆಪ್ತರಿ ಬ್ಬರನ್ನು ಬಂಧಿ ಸಿದ ಬಳಿಕ ಈಗ ಏನೇನೋ ಮಾತನಾಡುವುದರಿಂದ ಅವರ ಮೇಲೆಯೇ ಅನುಮಾನ ಮೂಡುತ್ತಿದೆ ಎಂದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ.

ಅವರು ಕುಂದಾಪುರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ವೃಥಾರೋಪಗಳಿಂದ ರಾಜಕೀಯ ಲಾಭ ಪಡೆಯುವ ಉದ್ದೇಶವಲ್ಲದೆ, ನೈಜ ಆರೋಪಿ ಗಳಿಗೆ ಶಿಕ್ಷೆಯಾಗಬೇಕು ಎನ್ನುವ ಯಾವುದೆ ಕಾಳಜಿ ಕಾಣಿಸುತ್ತಿಲ್ಲ. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಯುತ್ತಿದೆ. ಈ ವೇಳೆಯಲ್ಲಿ ಸರಕಾರದ ಬೇರೆ ಇಲಾಖೆಯ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಯಾವುದಾದರೂ ಅಕ್ರಮಗಳು ಬೆಳಕಿಗೆ ಬಂದರೂ ಅದರ ವಿರುದ್ಧವೂ ವಿಸ್ತೃತ ತನಿಖೆ ನಡೆಸಲಾಗುವುದು.

ಪರೀಕ್ಷೆ ಬರೆದು ಉತ್ತೀರ್ಣವಾಗಿರುವ 545 ಅಭ್ಯರ್ಥಿಗಳ ಒಎಂಆರ್‌ ಉತ್ತರ ಪತ್ರಿಕೆಗಳ ಪರಿಶೀಲನೆ ನಡೆಸಲಾಗುವುದು ಎಂದರು.ಹುಬ್ಬಳ್ಳಿ ಗಲಭೆಗೆ ಬಾಂಗ್ಲಾ ಸಂಪರ್ಕ ಇದೆ ಎನ್ನುವ ಮಾಹಿತಿ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ. ಗಲಭೆಯಲ್ಲಿ ಪೊಲೀಸ್‌ ಇಲಾಖೆ, ದೇವಸ್ಥಾನದ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳು ನಷ್ಟವಾಗಿದ್ದು, ಕಾರಣರಾಗಿರುವವರಿಂದಲೇ ವಸೂಲಿ ಮಾಡುವ ಕುರಿತು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶಾಂತಿ ಸುವ್ಯವಸ್ಥೆ ಹಿನ್ನೆಲೆ
ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಗಂಗೊಳ್ಳಿಯಲ್ಲಿ ಮುತಾಲಿಕ್‌ ಕಾರ್ಯಕ್ರಮವನ್ನು ಪೊಲೀಸರು ನಿರ್ಬಂಧಿಸಿದ್ದಾರೆ. ಸರಕಾರ ಉದ್ದೇಶ ಪೂರ್ವಕ ನಿರ್ಬಂಧಿಸಿಲ್ಲ. ಈ ಆರೋಪದಲ್ಲಿ ಹುರುಳಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಬುಲ್ಡೋಜರ್‌ ಕ್ರಮ ಸದ್ಯ ಬೇಕಿಲ್ಲ
ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಅಧಿಕಾರಕ್ಕೆ ಬರುವ ಮುಂಚೆ ರೌಡಿ ಆಡಳಿತ ಜಾರಿಯಲ್ಲಿತ್ತು ಹಾಗೂ ಅದನ್ನು ಮಟ್ಟ ಹಾಕುವ ಸಲುವಾಗಿ ಬುಲ್ಡೋಜರ್‌ ಕ್ರಮ ಅನಿವಾರ್ಯವಾಗಿತ್ತು. ಆದರೆ ಕರ್ನಾಟಕದಲ್ಲಿ ಸದ್ಯ ಆ ರೀತಿಯ ಪರಿಸ್ಥಿತಿ ಇಲ್ಲ ಎಂದು ತಿಳಿಸಿದರು.

ಗೃಹ ಸಚಿವರ ಬದಲಾವಣೆ ಊಹಾಪೋಹ
ಕೋಟ: ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಯಾಗಲಿದೆ. ಗೃಹ ಸಚಿವರ ಬದಲಾವಣೆಯಾಗಲಿದೆ ಎನ್ನುವುದು ಕೇವಲ ಊಹಾಪೋಹ. ಗೃಹ ಇಲಾಖೆ ಸುಸ್ಥಿತಿಯಲ್ಲಿದ್ದು ಉತ್ತಮ ಕೆಲಸಗಳನ್ನು ನಿರ್ವಹಿಸುತ್ತಿದೆ. ಆದ್ದರಿಂದ ಸದ್ಯ ಯಾವುದೇ ಬದಲಾವಣೆ ಇಲ್ಲ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಶನಿವಾರ ಸಾಲಿಗ್ರಾಮ ಗುರುನರಸಿಂಹ ದೇಗುಲಕ್ಕೆ ಭೇಟಿ ನೀಡಿದ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದರು. ಕೃಷಿ ಸಚಿವ ಬಿ.ಸಿ. ಪಾಟೀಲ್‌ ಗೃಹ ಇಲಾಖೆ ಕೊಟ್ಟರೆ ನಿಭಾಯಿಸುವೆ ಎಂದಿರುವುದು ಕಾಕತಾಳೀಯ. ಗೃಹಸಚಿವರನ್ನು ಬದಲಿಸುವ ಸಲುವಾಗಿ ಈ ಮಾತು ಹೇಳಿಲ್ಲ ಎಂದರು.

 

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.