ಸೊರಬ: ಸಡಗರದಿಂದ ನಡೆದ ಹೋರಿ ಬೆದರಿಸುವ ಹಬ್ಬ
Team Udayavani, Apr 4, 2022, 7:42 PM IST
ಸೊರಬ: ಮಲೆನಾಡು ಹಾಗೂ ಬಯಲುಸೀಮೆ ಭಾಗದ ರೈತರ ಹಬ್ಬವಾಗಿರುವ ಜನಪದ ಕ್ರೀಡೆ, ಸಾಂಪ್ರದಾಯಿಕ ರಾಜ್ಯ ಮಟ್ಟದ ಹೋರಿ ಬೆದರಿಸುವ ಹಬ್ಬ ತಾಲೂಕಿನ ಕುಬಟೂರು ಗ್ರಾಮದಲ್ಲಿ ಸೋಮವಾರ ಜರುಗಿತು.
ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಬೆದರಿಸುವ ಹಬ್ಬ ಮಹತ್ವವನ್ನು ಪಡೆದಿದ್ದು, ಅಖಾಡದಲ್ಲಿ ಹೋರಿಗಳು ಓಡಿ ಹೋಗುವುದನ್ನು ನೋಡಲು ತಾಲೂಕಿನ ವಿವಿಧ ಗ್ರಾಮಗಳು ಸೇರಿದಂತೆ ನೆರೆಯ ತಾಲೂಕು, ಜಿಲ್ಲೆಗಳಿಂದ ಭಾರಿ ಸಂಖ್ಯೆಯಲ್ಲಿ ಹೋರಿ ಪ್ರೀಯರು ಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡಿ ಹೋಗುವ ದೃಶ್ಯ ನೋಡುಗರ ಮೈನವಿರೇಳಿಸಿತು.
ಹೋರಿಗಳ ಮಾಲೀಕರು ಹೋರಿಗಳಿಗೆ ವಿವಿಧ ಬಗೆಯ ಜೂಲಗಳನ್ನು ಹೊದಿಸಿ, ಬಣ್ಣ ಬಣ್ಣದ ಬಲೂನುಗಳು ಹಾಗೂ ಕೊಬ್ಬರಿ ಕಟ್ಟಿ ಶೃಂಗರಿಸಿದ್ದರು. ಅಖಾಡದಲ್ಲಿ ಚಾಮುಂಡಿ ಎಕ್ಸ್‍ಪ್ರೆಸ್, ಅಗಸನಹಳ್ಳಿ ನರಸಿಂಹ, ನಲ್ಲಿಕೊಪ್ಪದ ಬಸವ, ಶಿಕಾರಿಪುರ ಹಿಟ್ಲರ್, ಎನ್‍ಟಿಸಿ ಸಾಹುಕಾರ, ಹೊಸಳ್ಳಿ ವಾರಸುದಾರ, ನಿಟ್ಟಕ್ಕಿ ಸಿಪಾಯಿ ದಂಗೆ, ಶಿಕಾರಿಪುರ ಅಘೋರ, ಮಲೆನಾಡ ಮಹಾರಾಜ, ಮರೂರು ತಾರಕಾಸುರ, ಬಿಳವಾಣಿ ಮಣಿಕಂಠ, ಶಿಕಾರಿಪುರದ ಸಿಂಹ, ಕೊಡಕಣಿ ಡೇಂಜರ್ ಬಸವ, ಮಲೆನಾಡ ಮಾಣಿಕ್ಯ, ಅಗಸನಹಳ್ಳಿ ಹೊಯ್ಸಳ, ಕರ್ನಾಟಕದ ನಂದಿ, ಹಾನಗಲ್ಲ ಟೈಗರ್, ತಾವರೆಕೊಪ್ಪದ ಪೈಲ್ವಾನ್, ಸೊರಬದ ಪ್ರಳಯ, ಮಧುರವಳ್ಳಿ ಡೇಂಜರ್‍ಮುತ್ತು, ಹೋತನಕಟ್ಟಿ ರಾಜಕುಮಾರ, ಸೊರಬದ ಭಾರತರತ್ನ, ಹಿರೇಇಡಗೋಡು ಉಡಾಳ ಕರಿಯ, ದೊಡ್ಡಿಕೊಪ್ಪದ ಜಂಪಿಂಗ್ ಸ್ಟಾರ್, ಹಾಲಗಳಲೆ ಹೆಬ್ಬುಲಿ ಹಾಗೂ ಹಿಂದೂ ಹುಲಿ ಹರ್ಷ ಸವಿನೆನಪಿಗಾಗಿ ಉದ್ರಿ ಮಣಿಕಂಠ ಸೇರಿದಂತೆ ವಿವಿಧ ಹೆಸರುಗಳ ಹೋರಿಗಳು ಅಖಾಡದಲ್ಲಿ ಓಡಿದವು. ಯುವಕರು ಹೋರಿಗಳನ್ನು ಹಿಡಿದು ಬಲ ಪ್ರದರ್ಶಿಸಿದರೆ, ಜನತೆ ಅದನ್ನು ನೋಡಿ ರೋಮಾಂಚನಗೊಂಡರು. ಅಖಾಡದಲ್ಲಿ ತೇರಿನಂತೆ ಕಾಣುವ ಪೀಪಿ ಹೋರಿಗಳು ಓಡಿ ಬರುತ್ತಿದ್ದಂತೆ ನೆರೆದವರಿಂದ ಕೇಕೆ, ಶಿಳ್ಳೆ, ಚಪ್ಪಾಳೆಗಳು ಜೋರಾಗಿಯೇ ಕೇಳಿಬಂದಿತು.
ಹೋರಿ ಹಬ್ಬದ ಆಯೋಜಿಸಿದ್ದ ಕುಬಟೂರು ಗ್ರಾಮಸ್ಥರು ಅಖಾಡದಲ್ಲಿ ಎರಡು ಬದಿಯಲ್ಲಿ ಸುರಕ್ಷತಾ ಕ್ರಮ ಕೈಗೊಂಡು, ಅಖಾಡದಲ್ಲಿ ಕ್ರಮವಾಗಿ ಒಂದೊಂದೆ ಹೋರಿಗಳನ್ನು ಓಡಿಸಿದರು. ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ. ಆಯೋಜಕರು ಉತ್ತಮ ರೀತಿಯಲ್ಲಿ ಸುರಕ್ಷತೆಗೆ ಗಮನ ನೀಡಿದ್ದರು. ಇದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರನ್ನು ಗುರುತಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.