Daily Horoscope: ಅತಿಯಾದ ಕಾರ್ಯ ಒತ್ತಡ ಎದುರಾದೀತು, ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ
Team Udayavani, Apr 21, 2023, 7:18 AM IST
ಮೇಷ: ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ, ಉದ್ಯೋಗ, ಸರಕಾರೀ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಗುರುಹಿರಿಯರ ಮಾರ್ಗದರ್ಶನ.
ವೃಷಭ: ಜವಾಬ್ದಾರಿಯುತ ಕಾರ್ಯವೈಖರಿ ಯಿಂದ ಸ್ಥಾನ ಗೌರವಾದಿ ಸುಖ ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ.
ಮಿಥುನ: ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ. ಹಣಕಾಸಿನ ಬಗ್ಗೆ ಮತ್ತೂಬ್ಬರಲ್ಲಿ ವ್ಯವಹರಿಸುವಾಗ ಎಚ್ಚರ.
ಕರ್ಕ: ದೀರ್ಘ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರುಹಿರಿಯರ ಆರೋಗ್ಯದ ಬಗ್ಗೆ ನಿಗಾ ವಹಿಸಿ.
ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಿದರಿಂದಲೂ ದೃಢ ನಿರ್ಧಾರದಿಂದ ಕಾರ್ಯ ಸಫಲತೆ. ಅನ್ಯರಿಗೆ ಸಹಾಯ ಮಾಡುವಾಗ ಸ್ಪಷ್ಟತೆ ಇರಲಿ.
ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆ ನಡೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಪ್ರಾಪ್ತಿ.
ತುಲಾ: ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಕಲ ವಿಧದ ಲಾಭ. ದಾಂಪತ್ಯ ಸುಖಾದಿಗಳು ವೃದ್ಧಿ. ಸ್ತ್ರೀಪುರುಷರಿಗೆ ಪರಸ್ಪರರ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.
ವೃಶ್ಚಿಕ: ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ಧನು: ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ ಶ್ರಮದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆ ಕಾಣದು. ಪಾಲುದಾರರಲ್ಲಿ ಸಾಮರಸ್ಯ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಗುರುಹಿರಿಯರ ಆರೋಗ್ಯ ಬಗ್ಗೆ ಗಮನಿಸಿ.
ಮಕರ: ದೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಪರಊರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ.
ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖದಲ್ಲಿ ಸಮೃದ್ಧಿ.
ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖದಲ್ಲಿ ಸಮೃದ್ಧಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಸಪ್ತಾಹದ ಕೊನೆಯ ದಿನ ಉತ್ತಮ ಫಲಗಳು, ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ
Daily Horoscope: ಶುಭಫಲಗಳೇ ಅಧಿಕವಾಗಿರುವ ದಿನ, ಉದ್ಯೋಗದಲ್ಲಿ ವೇತನ ಏರಿಕೆಯ ಸಾಧ್ಯತೆ
Daily Horoscope: ತಲೆತಿನ್ನುತ್ತಿದ್ದ ಚಿಂತೆಗಳಿಂದ ಬಿಡುಗಡೆ, ಕ್ಷಿಪ್ರ ಲಾಭದ ನಿರೀಕ್ಷೆ ಬೇಡ
Daily Horoscope;ಹಿತಶತ್ರುಗಳ ಹುನ್ನಾರದ ಕುರಿತು ಎಚ್ಚರ,ರಾತ್ರಿ ಪ್ರಯಾಣದಿಂದ ದೂರವಿರಿ…
Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ
MUST WATCH
ಹೊಸ ಸೇರ್ಪಡೆ
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.