Daily Horoscope: ಸಂಚಾರದಿಂದ ನಿರೀಕ್ಷಿತ ಸಫಲತೆ, ಉತ್ತಮ ಧನಾರ್ಜನೆ
Team Udayavani, Jun 10, 2023, 7:26 AM IST
ಮೇಷ: ವಿದ್ಯಾ ಜ್ಞಾನ ವೃದ್ಧಿ. ನಾಯಕತ್ವ ಗುಣಗಳಿಂದ ಕಾರ್ಯಕ್ಷೇತ್ರದಲ್ಲಿ ಸರ್ವಜನ ರಿಂದ ಗೌರವ. ಭಾತೃ ಮಾತೃ ಸಮಾನರಿಂದ ಪ್ರೋತ್ಸಾಹ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಭೂಮಿ, ಭವನಾದಿ ವ್ಯವಹಾರಗಳಿಗೆ ಅನುಕೂಲಕರ ಸಮಯ.
ವೃಷಭ: ಉದ್ಯೋಗದಲ್ಲಿ ಉತ್ತಮ ಬದಲಾವಣೆಗೆ ಅವಕಾಶ. ಸ್ವಾವಲಂಬಿಗಳಾಗಿ ಕಾರ್ಯ ಸಾಧಿಸುವ ಕಾಲ. ಆಹಾರೋದ್ಯಮ, ಪಾಲುದಾರಿಕಾ ವ್ಯವಹಾರಸ್ಥರಿಗೆ, ಕೃಷಿ, ಹೈನುಗಾರರಿಗೆ, ವಿದ್ಯಾರ್ಥಿಗಳಿಗೆ, ದಂಪತಿಗಳಿಗೆ, ಶುಭ ಫಲ.
ಮಿಥುನ: ಸಂಚಾರದಿಂದ ನಿರೀಕ್ಷಿತ ಸಫಲತೆ. ಉತ್ತಮ ಧನಾರ್ಜನೆ. ಉದಾರತೆಯಿಂದಲೂ ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಜನಮನ್ನಣೆ ಗೌರವ ಪ್ರಾಪ್ತಿ. ಆರೋಗ್ಯದಲ್ಲಿ ಸುಧಾರಣೆ. ದೇವತಾ ಕಾರ್ಯಗಳಿಂದ ನೆಮ್ಮದಿ.
ಕರ್ಕ: ಧಾರ್ಮಿಕ, ಸಾಮಾಜಿಕ, ಆರ್ಥಿಕ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡದೇ ತಾಳ್ಮೆ ಸಮಧಾನದಿಂದ ವ್ಯವಹರಿಸಿ. ಕಾರ್ಯ ಸಾಧಿಸಿಕೊಳ್ಳಿ. ಆರೋಗ್ಯದ ಕಡೆ ಗಮನಹರಿಸಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಧನಾರ್ಜನೆಗೆ ಕೊರತೆ ಇರದು.
ಸಿಂಹ: ದೈಹಿಕ ಮಾನಸಿಕ ಒತ್ತಡವಿದ್ದರೂ ಕಾರ್ಯ ಕ್ಷೇತ್ರದಲ್ಲಿ ಸಫಲತೆ. ನಿರೀಕ್ಷಿತ ಧನಾಗಮ. ಸಹೋದರಾದಿ ಸಮಾನರಿಂದಲೂ ಕಾರ್ಮಿಕ ರಿಂದಲೂ ಸುಖ ಲಭಿಸುವ ಸಮಯ. ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ.
ಕನ್ಯಾ: ಉತ್ತಮ ಅಭಿವೃದ್ಧಿ ಇದ್ದರೂ ಆರ್ಥಿಕ ವಿಚಾರದಲ್ಲಿ ಹಿಡಿತವಿರಲಿ. ದಾಕ್ಷಿಣ್ಯ ಪ್ರವೃತ್ತಿಯಿಂದ ಧನ ನಷ್ಟವಾಗುವ ಸಂಭವ. ಪಾಲುದಾರಿಕೆ ವ್ಯವಹಾರಸ್ಥರಿಗೆ ಉತ್ತಮ ಫಲಿತಾಂಶ ಲಭಿಸುವ ಅವಕಾಶ. ವಿದ್ಯಾರ್ಥಿಗಳಿಗೆ ಶುಭ ದಿನ.
ತುಲಾ: ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ವ್ಯವಹಾರ ಉದ್ಯೋಗಗಳಲ್ಲಿ ಹೆಚ್ಚಿನ ಜವಾಬ್ದಾರಿ ಒತ್ತಡ. ಉತ್ತಮ ಧನಾರ್ಜನೆ ಇದ್ದರೂ ಖರ್ಚಿಗೆ ಹಲವಾರು ಮಾರ್ಗಗಳು ಎದುರಾಗುವುವು. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ.
ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವ ಆದರಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನ ಸಂಪಾದನೆಯಿಂದ ಆತ್ಮಸ್ಥೆರ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ.
ಧನು: ಆರೋಗ್ಯದಲ್ಲಿ ಪ್ರಗತಿ. ಅಧಿಕ ಧನಾರ್ಜನೆ. ಭೂಮಿ, ಆಸ್ತಿ ವ್ಯವಹಾರದಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸಹಾಯ ಒದಗಿ ಅಭಿವೃದ್ಧಿ. ಕುಟುಂಬಿಕರ ಉತ್ತಮ ಸಹಕಾರ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ.
ಮಕರ: ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ದಾಯಕ ಬದಲಾವಣೆ. ಧನಾರ್ಜನೆಗೆ ಸರಿಯಾಗಿ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ.
ಕುಂಭ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಉತ್ತಮ ಧನಸಂಪತ್ತು ಪ್ರಾಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಗೃಹೋಪವಸ್ತುಗಳ ಸಂಗ್ರಹ. ದೀರ್ಘ ಪ್ರಯಾಣದಿಂದ ದೇಹಾಯಾಸ ತೋರೀತು.
ಮೀನ: ಸುದೃಢ ಆರೋಗ್ಯ. ಮಾತಿನಲ್ಲಿ ತಾಳ್ಮೆ ಹಿಡಿತವಿರಲಿ. ಅನಗತ್ಯ ಚರ್ಚೆಗೆ ಒಳಗಾಗಿ ಆರ್ಥಿಕ ನಷ್ಟಕ್ಕೆ ಒಳಗಾಗದಿರಿ. ಪಾಲುದಾರಿಕಾ ಕ್ಷೇತ್ರದಲ್ಲಿ, ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹವಿರಲಿ. ವಿದ್ಯಾರ್ಥಿಗಳಿಗೆ ಅತ್ಯುತ್ತಮ ದಿನ. ದೇವತಾ ಸ್ಥಳಗಳಿಗೆ ಸಂದರ್ಶನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ
Mangaluru: ಕೈಕೊಡುವ ವೆಟ್‌ವೆಲ್; ನಂದಿನಿ, ಬಾವಿ ನೀರು ಕಲುಷಿತ
Bajpe: ಪಂಚ ಭಾಷೆಗಳಲ್ಲಿ ಎಕ್ಕಾರು ಶಾಲಾ ವಾರ್ತೆಗಳು
ಇನ್ಮುಂದೆ ಶಿವಣ್ಣನಿಗೆ ಡಬಲ್ ಪವರ್ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್ ಹೀರೋ ಮಾತು
New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.