Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್-ಯುವಕನಿಗೆ ಮರುಜನ್ಮ
ಸುಮಾರು 98 ಸೆಂಟಿಮೀಟರ್‌ನಷ್ಟು ಪೈಪ್ ದೇಹದಲ್ಲಿಯೇ ಉಳಿದಿತ್ತು.
Team Udayavani, Oct 4, 2024, 3:22 PM IST
■ ಉದಯವಾಣಿ ಸಮಾಚಾರ
ಹುಬ್ಬಳ್ಳಿ: ರಸ್ತೆ ಅಪಘಾತವೊಂದರಲ್ಲಿ ಯುವಕನ ಎದೆಗೂಡಿಗೆ ಹೊಕ್ಕಿದ್ದ ದೊಡ್ಡ ಕಬ್ಬಿಣದ ಪೈಪ್ ಅನ್ನು ಕೆಎಂಸಿಆರ್‌ಐ
ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದು ಯುವಕನ ಪ್ರಾಣ ರಕ್ಷಣೆ ಮಾಡಿದೆ. ಅತ್ಯಂತ ಸಂಕೀರ್ಣ ಹಾಗೂ ಸವಾಲು ರೂಪದ ಪ್ರಕರಣವನ್ನು ಯಶಸ್ವಿಯಾಗಿ ನಿರ್ವಹಿಸಿದೆ.
ಹಾವೇರಿ ಜಿಲ್ಲೆ ರಾಣಿಬೆನ್ನೂರು ಬಳಿ ಬುಧವಾರ ಬೆಳಗಿನ ಜಾವ ಲಾರಿ ಮಗುಚಿ ರಾಷ್ಟ್ರೀಯ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಬಿದ್ದಿತ್ತು. ಲಾರಿಯ ಕ್ಲೀನರ್ ಸ್ಥಾನದಲ್ಲಿ ಕುಳಿತಿದ್ದ ಉತ್ತರ ಕನ್ನಡ ಜಿಲ್ಲೆ ಶಿರಸಿಯ ದಯಾನಂದ ಜವಳಮಕ್ಕಿ (27)ಎಂಬ ಯುವಕ ತೀವ್ರವಾಗಿ ಗಾಯಗೊಂಡಿದ್ದ. ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದವರು ದಯಾನಂದ ಎದೆಗೂಡು ಸೇರಿದ್ದ ಉದ್ದನೆಯ ಕಬ್ಬಿಣದ ಪೈಪ್ ಅನ್ನು ಒಂದು ಭಾಗದಲ್ಲಿ ಗ್ಯಾಸ್ ಕಟರ್ ಬಳಸಿ ಕತ್ತರಿಸಿದ್ದರಾದರೂ ಸುಮಾರು 98 ಸೆಂಟಿಮೀಟರ್‌ನಷ್ಟು
ಪೈಪ್ ದೇಹದಲ್ಲಿಯೇ ಉಳಿದಿತ್ತು.
ತೀವ್ರವಾಗಿ ಗಾಯಗೊಂಡ ದಯಾನಂದನನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ, ತಜ್ಞ ವೈದ್ಯರ ಲಭ್ಯತೆ ಇಲ್ಲದೆ ಹುಬ್ಬಳ್ಳಿಯ ಕೆಎಂಸಿಆರ್ ಐಗೆ ತರಲಾಗಿತ್ತು. ಕೆಎಂಸಿಆರ್‌ಐ ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ಕೈಗೊಂಡು
ಯುವಕನನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.
ದಯಾನಂದಗೆ ಶಸ್ತ್ರಚಿಕಿತ್ಸೆ ಹಾಗೂ ಪ್ರಾಣ ರಕ್ಷಣೆ ಅತ್ಯಂತ ಸವಾಲಿನದ್ದಾಗಿತ್ತು. ನಮ್ಮ ವೈದ್ಯರು, ತಾಂತ್ರಿಕ ಸಿಬ್ಬಂದಿ, ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿ ಪ್ರತಿಯೊಬ್ಬ ಸಿಬ್ಬಂದಿ ಸೈನಿಕರ ರೀತಿಯಲ್ಲಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿದ್ದು, ಕೇವಲ ಎರಡ್ಮೂರು ತಾಸಿನಲ್ಲಿಯೇ ಎಲ್ಲ ಪರೀಕ್ಷೆ ಕೈಗೊಂಡು ಯಶಸ್ವಿ ಶಸ್ತ್ರಚಿಕಿತ್ಸೆ ಕೈಗೊಂಡಿದ್ದಾರೆ. ತುಕ್ಕು ಹಿಡಿದ ಕಬ್ಬಿಣ ಒಳಗೆ ಸೇರಿದ್ದರಿಂದ ಧನುರ್ವಾಯು ಹಾಗೂ ನಂಜು ಕಾರಣದ ಅಪಾಯ ಬಾರದ ರೀತಿಯಲ್ಲಿ ನಂಜುನಿವಾರಕ, ಇನ್ನಿತರ ಔಷಧ ನೀಡಲಾಗಿದೆ.
*ಡಾ| ಎಸ್.ಎಫ್. ಕಮ್ಮಾರ, ಕೆಎಂಸಿಆರ್‌ಐ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.