ಹುಬ್ಬಳ್ಳಿ ಗಲಭೆಯ ರಿಂಗ್ ಮಾಸ್ಟರ್, ಮಹಾನಾಯಕನಾ, ಮೀರ್‌ಸಾಧಿಕಾ : ಬಿಜೆಪಿ
Team Udayavani, Apr 23, 2022, 6:35 AM IST
ಬೆಂಗಳೂರು: ರಾಜ್ಯದಲ್ಲಿ ಜಿಹಾದಿಗಳಿಗೆ ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದ್ದು, ಹುಬ್ಬಳ್ಳಿ ಗಲಭೆಯನ್ನು ರಾಜ್ಯ ಸರ್ಕಾರ ಕೇವಲ ಮೂರು ಗಂಟೆಯಲ್ಲಿ ತಹಬದಿಗೆ ತಂದಿದೆ, ಮತಾಂಧ ಅಲ್ಪಮತೀಯ ಆರೋಪಿಗಳ ಬಂಧನವಾಗಿದೆ. ಆದರೆ, ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಕಾಂಗ್ರೆಸ್ ಹುಯಿಲೆಬ್ಬಿಸುತ್ತಿದೆ. ಕಾಂಗ್ರೆಸ್ ದೃಷ್ಟಿಯಲ್ಲಿ ಆರೋಪಿಗಳಿಗೆ ಹಲಾಲ್ ಕಬಾಬ್ ನೀಡಿ ಉಪಚರಿಸಬೇಕಿತ್ತೇ? ಎಂದು ಬಿಜೆಪಿ ಪ್ರಶ್ನಿಸಿದೆ.
ಡಿಜೆಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಂಪತ್ ರಾಜ್ ಸೇರಿದಂತೆ 110 ಕ್ಕೂ ಹೆಚ್ಚು ಮತಾಂಧರ ಬಂಧನವಾಗಿದೆ. ಪಾದರಾಯನಪುರ ಗಲಭೆಯಲ್ಲಿ 116 ದಂಗೆಕೋರರ ಬಂಧನ. ಉಪ್ಪಿನಂಗಡಿಯ ಠಾಣೆಯ ಮುಂದೆ ಗಲಭೆ ಮಾಡಿದವರ ಬಂಧನ. ಹುಬ್ಬಳ್ಳಿ ಗಲಭೆಯಲ್ಲಿ ಮೌಲ್ವಿ ಸೇರಿದಂತೆ 126 ಸಮಾಜ ಘಾತುಕರ ಬಂಧನ.
ಕಾಂಗ್ರೆಸ್ ರಣಹದ್ದುಗಳಿಗೆ ಹುಬ್ಬಳ್ಳಿ ಘಟನೆ ನಿರೀಕ್ಷಿತ ಪ್ರಮಾಣದಲ್ಲಿ ಸಂತೋಷ ನೀಡಿಲ್ಲ. ಸಮಾಜದ ಶಾಂತಿ ಸರ್ವನಾಶವಾಗುವಂಥ ಫಲಿತಾಂಶವನ್ನು ಕಾಂಗ್ರೆಸ್ಸಿಗರು ಬಯಸಿದ್ದರು. ಆದರೆ, ರಾಜ್ಯ ಬಿಜೆಪಿ ಸರ್ಕಾರ ಮಿಂಚಿನ ಕಾರ್ಯಾಚರಣೆ ನಡೆಸಿ, ಪರಿಸ್ಥಿತಿ ನಿಭಾಯಿಸಿದ್ದು ಹರಳೆಣ್ಣೆ ಕುಡಿಸಿದ ಅನುಭವ ನೀಡಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಬಂಧನವಾಗಿದೆ. ಆದರೆ, ರಿಂಗ್ ಮಾಸ್ಟರ್ ಯಾರೆಂದು ತಿಳಿಯಬೇಕಲ್ಲವೇ? ಆ ರಿಂಗ್ ಮಾಸ್ಟರ್ ಮಹಾನಾಯಕ ಆಗಿರಬಹುದೇ ಅಥವಾ ಮೀರ್ ಸಾಧಿಕ್ ಆಗಿರಬಹುದೇ? ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ಆಗಿರಲಿ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷಿ ವಿಧಿಸುತ್ತೇವೆ. ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ತನಿಖೆ ಪಾರದರ್ಶಕವಾಗಿ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ನೀಡಿರುವ ಹೇಳಿಕೆಯನ್ನು ಬಿಜೆಪಿ ಪುನರುಚ್ಚರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.