“777 ಚಾರ್ಲಿ’ ಜೊತೆ ಹಂಬಲ್ ಪೊಲಿಟಿಷಿಯನ್!
Team Udayavani, Jul 2, 2020, 7:56 AM IST
ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ “777 ಚಾರ್ಲಿ’ ಸಾಹಸ ಪ್ರಧಾನ ಕಾಮಿಡಿ ಚಿತ್ರವನ್ನು ಕಿರಣ್ ರಾಜ್ ನಿರ್ದೇಶಿಸುತ್ತಿದ್ದು, ಇದರಲ್ಲಿ ಹಂಬಲ್ ಪೊಲಿಟಿಷಿಯನ್ ನೊಗರಾಜ್ ಖ್ಯಾತಿಯ ದಾನೀಶ್ ಸೇಠ್ ಕೂಡಾ ನಟಿಸಿದ್ದಾರೆ. ಹೌದು! “777 ಚಾರ್ಲಿ’ ಚಿತ್ರದಲ್ಲಿ ದಾನೀಶ್ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.
ಟಿವಿ ಆಂಕರ್ ಹಾಗೂ ಕಾಮಿಡಿಯನ್ ಆಗಿರುವ ದಾನೀಶ್ ಹುಟ್ಟುಹಬ್ಬದ ಪ್ರಯುಕ್ತ ಅವರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಚಿತ್ರದ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ, ದಾನಿಷ್ ಅವರನ್ನು ಚಿತ್ರತಂಡಕ್ಕೆ ಸ್ವಾಗತಿಸಿದ್ದು, ಕರ್ಶನ್ ರಾಯ್ ಪಾತ್ರದಲ್ಲಿ ದಾನೀಶ್ ಕಾಣಿಸಿಕೊಂಡಿದ್ದಾರೆ. ಅಲ್ಲದೇ ದಾನೀಶ್ ಭಾಗದ ಚಿತ್ರೀಕರಣ ಮುಗಿದಿದ್ದು, ಚಿತ್ರದಲ್ಲಿ ವಿಭಿನ್ನ ರೀತಿಯಲ್ಲಿ ಪಾತ್ರವನ್ನು ನಿಭಾಯಿಸಿದ್ದಾರೆ.
Happy birthday Bro @DanishSait ? It’s going to be Kickass Fun having u in #777Charlie ❤️ All the best for #HPN2 can’t wait to see ? pic.twitter.com/xufKFabtZk
— Pushkara Mallikarjunaiah (@Pushkara_M) July 1, 2020
ಇನ್ನು ಪುಷ್ಕರ್ ಫಿಲ್ಮ್ಸ್ ನಡಿ ತಯಾರಾಗುತ್ತಿರುವ ಈ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಮತ್ತು ಜಿಎಸ್ ಗುಪ್ತಾ ಕೂಡ ಬಂಡವಾಳ ಹಾಕಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿ ಚಿತ್ರತಂಡವಿದೆ. ಚಿತ್ರದಲ್ಲಿ ರಾಜ್ ಬಿ ಶೆಟ್ಟಿ, ಸಂಗೀತ ಶೃಂಗೇರಿ ನಟಿಸಿದ್ದು, ನೊಬಿನ್ ಪೌಲ್ ಸಂಗೀತ, ಅರವಿಂದ್ ಕಶ್ಯಪ್ ಕ್ಯಾಮೆರಾ ಕೈಚಳಕವಿದೆ.
Not many have the ability to make people laugh and smile during these tough times; you do! Wishing you a very happy birthday my dearest friend @DanishSait ?
It’s awesome to have you on board for #777Charlie pic.twitter.com/T8h6Odcunr
— Rakshit Shetty (@rakshitshetty) July 1, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.