ಹುಣಸೂರು: ರೌಡಿ ಶೀಟರ್ ತನ್ವೀರ್ ಬೇಗ್ ಗಡಿಪಾರು
Team Udayavani, Mar 30, 2023, 8:50 PM IST
ಹುಣಸೂರು: ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಹುಣಸೂರಿನ ಬಜಾರ್ ರಸ್ತೆಯ ರೌಡಿ ಶೀಟರ್ ತನ್ವೀರ್ ಬೇಗ್‌ನನ್ನು ಮೂರು ತಿಂಗಳ ಕಾಲ ಬೆಳಗಾವಿ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.
ನಗರ ಠಾಣೆ ವ್ಯಾಪ್ತಿಯಲ್ಲಿ ಈತನ ವಿರುದ್ದ ಕೊಲೆ, ದರೋಡೆಯಂತಹ ಪ್ರಕರಣ ದಾಖಲಾಗಿರುವುದರಿಂದ ಚುನಾವಣೆ ವೇಳೆಯಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ, ಸಾರ್ವಜನಿಕರ ನೆಮ್ಮದಿ, ಶಾಂತಿ ಭಂಗ ಉಂಟುಮಾಡುವ ಸಂಭವದ ಹಿನ್ನೆಲೆಯಲ್ಲಿ ಎಸ್.ಪಿ. ಸೀಮಾ ಲಾಟ್ಕರ್, ಅಡಿಷನಲ್ ಎಸ್.ಪಿ.ಡಾ.ನಂದಿನಿಯವರ ನಿರ್ದೇಶನದಂತೆ ಡಿವೈಎಸ್‌ಪಿ ಮಹೇಶ್ ಎಂ.ಕೆ.ರ ಮಾರ್ಗದರ್ಶನದಲ್ಲಿ ನಗರಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಎಂ.ದೇವೇಂದ್ರರವರು ರೌಡಿ ತನ್ವೀರ್‌ಬೇಗ್‌ನನ್ನು ಗಡಿಪಾರು ಮಾಡುವಂತೆ ಉಪವಿಭಾಗಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದರು.
ವಿಚಾರಣೆ ನಡೆಸಿ, ವಾದ ಮತ್ತು ವಿವಾದವನ್ನು ಆಲಿಸಿದ ಉಪವಿಭಾಗಾಧಿಕಾರಿ ರುಚಿ ಬಿಂದಾಲ್‌ರವರು ರೌಡಿಶೀಟರ್ ತನ್ವಿರ್‌ಬೇಗ್‌ನನ್ನು 2023 ರ ಜೂನ್ 22 ರವರೆಗೆ ಮೈಸೂರು ಜಿಲ್ಲೆಯಿಂದ ಗಡಿಪಾರುಮಾಡಿ, ಬೆಳಗಾವಿ ನಗರದ ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ನಿತ್ಯ ಹಾಜರಾತಿ ಸಲ್ಲಿಸಬೇಕೆಂದು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.