Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Team Udayavani, Nov 26, 2024, 7:09 PM IST
ಬೆಂಗಳೂರು: ಸ್ವಾತಂತ್ರ್ಯ ಬಂದಾಗಿನಿಂದ ದೇಶದ ಆಡಳಿತದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷವು ಹಲವಾರು ಬಾರಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿದೆ. ಅಲ್ಲದೆ, ಸಂವಿಧಾನದ ದುರುಪಯೋಗ ಪಡಿಸಿಕೊಂಡು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಹೇಯ ಕೃತ್ಯಕ್ಕೆ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಆಗಿದೆ ಎಂಬುದನ್ನು ದೇಶ- ರಾಜ್ಯದ ಜನರು ಮರೆತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಸಂವಿಧಾನ ದಿನಾಚರಣೆಯ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ (ನ.26) ಸಂವಿಧಾನ ಸನ್ಮಾನ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಹಿಂದೆ ಕಾನೂನು ದಿನವನ್ನಾಗಿ ಇದನ್ನು ಆಚರಿಸಲಾಗುತ್ತಿತ್ತು. ಇದನ್ನು ಸಂವಿಧಾನ ಸಮರ್ಪಣಾ ದಿನವಾಗಿ ಅರ್ಥಪೂರ್ಣವಾಗಿ ಆಚರಿಸುವ ಅಭಿಲಾಷೆ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರದ್ದು ಎಂದರು.
ನ.26ರಿಂದ ಜನವರಿ 26ರವರೆಗೆ 2 ತಿಂಗಳುಗಳ ಕಾಲ ದೇಶಾದ್ಯಂತ ಸಂವಿಧಾನ ಸನ್ಮಾನ ಅಭಿಯಾನ ಆಚರಿಸಲಾಗುತ್ತಿದೆ. ಸಂವಿಧಾನ ಒಂದು ಧರ್ಮಗ್ರಂಥ ಎಂದ ಅವರು, ಸಂವಿಧಾನಕ್ಕೆ ಅವಹೇಳನ ಮಾಡಿದ ಕಾಂಗ್ರೆಸ್ಸಿಗರು ಸಂವಿಧಾನದ ರಕ್ಷಕರು, ಸಂವಿಧಾನ ಪ್ರತಿಪಾದಕರಂತೆ ಕಪಟ ನಾಟಕವನ್ನು ಹಲವಾರು ದಶಕಗಳಿಂದ ನಿರಂತರವಾಗಿ ಮಾಡುತ್ತ ಬಂದಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷದವರು ಸಂವಿಧಾನಕ್ಕೆ ಧಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಆದರೆ, ಸಂವಿಧಾನಕ್ಕೆ ಗೌರವ ತರುವ ನಿಟ್ಟಿನಲ್ಲಿ, ಸಂವಿಧಾನವನ್ನು ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಕೂಡ ಗೌರವದಿಂದ ಕಾಣುವ ಮತ್ತು ಪಾಲಿಸುವ ಕಡೆ ಬಿಜೆಪಿ ಮುಂದಾಗಿದೆ. ಈ ಆಚರಣೆಯು ಕೇವಲ ನವೆಂಬರ್ 26ಕ್ಕೆ ಸೀಮಿತ ಆಗಬಾರದು ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದವರು ಇತಿಹಾಸವನ್ನು ಮರೆಮಾಚಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿದ್ದಾರೆ. ಅದನ್ನು ತೊಡೆದು ಹಾಕಿ, ಡಾ. ಬಾಬಾಸಾಹೇಬ ಅಂಬೇಡ್ಕರರ ನೇತೃತ್ವದಲ್ಲಿ ರಚಿಸಿದ ಸಂವಿಧಾನಕ್ಕೆ ಸಂಪೂರ್ಣ ಗೌರವ ತಂದು ಕೊಡುವ ಪ್ರಾಮಾಣಿಕ ಕೆಲಸವನ್ನು ನರೇಂದ್ರ ಮೋದಿಯವರು ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಡಾ.ಅಂಬೇಡ್ಕರರ ಪರಿಶ್ರಮ, ಬೆವರಿನ ಫಲಶ್ರುತಿಯ ಫಲವಾಗಿ ಸಮಾನತೆ, ಸ್ವಾವಲಂಬನೆ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಂವಿಧಾನದ ಮೂಲಕ ಕೊಡಲಾಗಿದೆ. ಸಂವಿಧಾನವು ಪ್ರಜಾಪ್ರಭುತ್ವ ವ್ಯವಸ್ಥೆಯ ಪಾಲಿಗೆ ಒಂದು ಧರ್ಮಗ್ರಂಥ ಎಂದು ವಿಶ್ಲೇಷಿಸಿದರು. ನಮ್ಮೆಲ್ಲರ ನೇತೃತ್ವದಲ್ಲಿ ಸಂವಿಧಾನಕ್ಕೆ ಗೌರವ ಕೊಡುವ ಕೆಲಸ ಆಗಬೇಕಿದೆ ಎಂದರು.
ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಸ್ವಾತಂತ್ರ್ಯ ನಂತರದಲ್ಲಿ ಸಂವಿಧಾನ ರಚನೆ ದೊಡ್ಡ ಸವಾಲಾಗಿತ್ತು. ಆಗ ಸಂವಿಧಾನ ಸಮಿತಿಯು ಸುದೀರ್ಘ- ಎಲ್ಲ ಆಯಾಮಗಳಲ್ಲಿ ಚರ್ಚೆ ಮಾಡಿ, ಬಾಬಾಸಾಹೇಬ ಅಂಬೇಡ್ಕರರ ಮಾನವೀಯ ತತ್ವಗಳನ್ನು ಸೇರಿಸಿದ್ದರಿಂದ ನಮ್ಮ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನ ಎನಿಸಿದೆ ಎಂದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಸರ್ವರಿಗೂ ಸಮಾನ ಅವಕಾಶ ನೀಡುವ ಸಂವಿಧಾನವನ್ನು ಡಾ.ಅಂಬೇಡ್ಕರ್ ನೀಡಿದ್ದು, ಅದು ಸಾರ್ವಕಾಲಿಕ; ಸದಾ ಪ್ರಸ್ತುತ ಎಂದು ವಿವರಿಸಿದರು. ಸಂವಿಧಾನದ ಕುರಿತು ಅಪಸ್ವರ ಬರಬಾರದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.