ಲೋಕಸಭೆ ಚುನಾವಣೆಯ ಜವಾಬ್ದಾರಿ ನನ್ನದು- ಡಾ.ಜಿ. ಪರಮೇಶ್ವರ್
ಸಂಭ್ರಮದ 73ನೇ ವರ್ಷದ ಹುಟ್ಟುಹಬ್ಬ ಆಚರಣೆ
Team Udayavani, Aug 6, 2023, 6:50 PM IST
ಕೊರಟಗೆರೆ: ನನಗೆ ಧಮ್ಮು-ತಾಕತ್ತು ಎರಡು ಇದೆ. ಅದಕ್ಕಾಗಿಯೇ 5 ಗ್ಯಾರಂಟಿಯ ಜೊತೆ 76 ಅಂಶದ ಯೋಜನೆ ಅನುಷ್ಟಾನ ಮಾಡ್ತೀವಿ. ಪ್ರತಿವರ್ಷ 36 ಸಾವಿರ ಕೋಟಿ ಅನುಧಾನ ಬಡವರ ಕಲ್ಯಾಣಕ್ಕಾಗಿ ಖರ್ಚು ಮಾಡ್ತೀವಿ. ಬಿಜೆಪಿ ಪಕ್ಷದ ನಾಯಕರಿಗೆ ಬಡವರ ಹಸಿವಿನ ಬಗ್ಗೆ ಕಾಳಜಿ ಇಲ್ಲ. ಮುಂದಿನ 5 ವರ್ಷ ಟೀಕೆ ಮಾಡುವುದೇ ಬಿಜೆಪಿ ಪಕ್ಷದ ನಾಯಕ ಕೆಲಸ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಕೊರಟಗೆರೆ ಪಟ್ಟಣದ ರಾಜೀವ ಭವನದ ಆವರಣದಲ್ಲಿ ಬ್ಲಾಕ್‌ಕಾಂಗ್ರೆಸ್ ಸಮಿತಿ, ಯುವ ಕಾಂಗ್ರೆಸ್ ಮತ್ತು ಡಾ.ಜಿ.ಪರಮೇಶ್ವರ ಅಭಿಮಾನಿ ಬಳಗದ ಡಾ.ಜಿ.ಪರಮೇಶ್ವರ ಅವರ 73 ನೇ ಹುಟ್ಟುಹಬ್ಬದ ಪ್ರಯುಕ್ತ ವತಿಯಿಂದ ಭಾನುವಾರ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರ ಮತ್ತು ಆರೋಗ್ಯ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ತುಮಕೂರು ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಜವಾಬ್ದಾರಿ ನನ್ನದು. ನಿಮ್ಮನ್ನು ನಂಬಿ ನಾನು ನಮ್ಮ ನಾಯಕ ರಾಹುಲ್‌ಗಾಂಧಿಗೆ ಮಾತು ನೀಡಿದ್ದೇನೆ. ಕಲ್ಪತರು ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅತಿಹೆಚ್ಚಿನ ಲೀಡ್ ನೀಡಿ ಲೋಕಸಭೆ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕಿದೆ. ನನ್ನ ಸ್ವಕ್ಷೇತ್ರದಲ್ಲಿ ಅತಿಹೆಚ್ಚಿನ ಲೀಡ್ ಬರಬೇಕಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಚುನಾವಣೆಯ ಪ್ರಣಾಳಿಕೆ ಬರೆದವನು ನಾನು. ರಾಜ್ಯದಲ್ಲಿ ಇಲ್ಲಿವರ್ಗು 30ಕೋಟಿ ಜನ ಮಹಿಳೆಯರು ಸರಕಾರಿ ಬಸ್ಸಿನಲ್ಲಿ ಪ್ರಯಾಣ ಮಾಡ್ತಿದ್ದಾರೇ. ಉಚಿತ ವಿದ್ಯುತ್ ಯೋಜನೆಗೆ ನಾವು ಚಾಲನೆ ನೀಡಿದ್ದೇವೆ. ೫ಕೆಜಿ ಅಕ್ಕಿ ಮತ್ತು ೫ಕೆಜಿಯ ಹಣ ನಿಮ್ಮ ಖಾತೆಗೆ ಬರ್ತಿದೆ. ಕೇಂದ್ರ ಸರಕಾರ ನಮ್ಮ ಜನರಿಗೆ ಅಕ್ಕಿ ನೀಡಲು ನಿರಾಕರಿಸಿದೆ. ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆದಿದೆ. ಜನರಿಗೆ ನೀಡಿದ ಮಾತನ್ನು ಉಳಿಸಿಕೊಳ್ತೇವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಾವಗಡ ಶಾಸಕ ವೆಂಕಟೇಶ್, ಎಂಎಲ್‌ಸಿ ವೇಣುಗೋಪಾಲ್, ಕೆಪಿಸಿಸಿ ಕಾರ್ಯದರ್ಶಿ ಮುರುಳಿಧರ ಹಾಲಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ, ಬ್ಲಾಕ್‌ಕಾಂಗ್ರೆಸ್ ಅಧ್ಯಕ್ಷ ಅರಕೆರೆಶಂಕರ್, ಅಶ್ವತ್ಥನಾರಾಯಣ್, ಮಹಿಳಾಧ್ಯಕ್ಷೆ ಜಯಮ್ಮ, ಯುವಧ್ಯಕ್ಷ ಬೈರೇಶ್, ಉಪಾಧ್ಯಕ್ಷ ದೀಪಕ್, ಮುಖಂಡರಾದ ಎಂಎಲ್‌ಜೆ ಮಂಜುನಾಥ, ವಾಲೇಚಂದ್ರಯ್ಯ, ಬಲರಾಮಯ್ಯ, ಓಬಳರಾಜು, ನಂದೀಶ್, ನಾಗರಾಜು, ಜಯರಾಮು, ವೆಂಕಟೇಶಬಾಬು, ವಿನಯ್, ರಘುವೀರ್ ಸೇರಿದಂತೆ ಇತರರು ಇದ್ದರು.
ಇದನ್ನೂ ಓದಿ: ಕಾಡು ಹಂದಿ ಬೇಟೆಗೆ ಇಟ್ಟಿದ್ದ ಸಜೀವ ಬಾಂಬ್ ಪತ್ತೆ: ಬಾಂಬ್ ನಿಷ್ಕ್ರೀಯ ದಳದಿಂದ ಕಾರ್ಯಾಚರಣೆ
ರಕ್ತದಾನ ಮತ್ತು ಆರೋಗ್ಯ ಶಿಬಿರ
ಗೃಹಸಚಿವ ಡಾ.ಜಿ.ಪರಮೇಶ್ವರ 73 ನೇ ಹುಟ್ಟುಹಬ್ಬದ ಪ್ರಯುಕ್ತ ಕೊರಟಗೆರೆ ಯುವಕಾಂಗ್ರೆಸ್ ವತಿಯಿಂದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಬ್ರೇಡ್ ವಿತರಣೆ. ಕೊರಟಗೆರೆ ಪಟ್ಟಣದ ರಾಜೀವ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು. ಕೊರಟಗೆರೆ ಕ್ಷೇತ್ರದ ಜನತೆಗೆ ಸಿಹಿಯೂಟ ಮತ್ತು 10 ಸಾವಿರಕ್ಕೂ ಅಧಿಕ ಲಾಡುಗಳ ವಿತರಣೆ ಮಾಡಲಾಯಿತು. ನೂರಾರು ಜನ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸಿಹಿಹಂಚಿ ಸಂಭ್ರಮಿಸಿದರು.
ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ
ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಹೆಚ್ಚು ಸದಸ್ಯತ್ವ ಮಾಡಿದ ಮುಖಂಡರು ಮತ್ತು ಬೂತ್‌ನಲ್ಲಿ ಅತಿಹೆಚ್ಚು ಮತಗಳ ಲೀಡ್ ನೀಡಿದ ಬೂತ್ ಅಧ್ಯಕ್ಷರು ಮತ್ತು ಸದಸ್ಯರಿಗೆ ಸನ್ಮಾನ ಮಾಡುತ್ತೇನೆ. ಕೊರಟಗೆರೆ ಕ್ಷೇತ್ರದಲ್ಲಿ ನನ್ನ ವಿಜಯೋತ್ಸವ ಮತ್ತು ಮತದಾರ ಪ್ರಭುಗಳಿಗೆ ಅಭಿನಂದನಾ ಕಾರ್ಯಕ್ರಮವು ಮುಂದಿನ ದಿನಗಳಲ್ಲಿ ಅದ್ದೂರಿಯಿಂದ ನಡೆಯಲಿದೆ.
ಜಿಪಂ-ತಾಪಂ ಚುನಾವಣೆಗೆ ಸಜ್ಜಾಗಿ..
ರಾಜ್ಯದಲ್ಲಿ ಜಿಪಂ ಮತ್ತು ತಾಪಂ ಚುನಾವಣೆಯು ಅತಿ ಶಿರ್ಘದಲ್ಲಿ ನಡೆಯಲಿದೆ. ಕೊರಟಗೆರೆ ಕ್ಷೇತ್ರದ 6 ಜಿಪಂ ಮತ್ತು 16 ತಾಪಂ ಕ್ಷೇತ್ರಕ್ಕೆ ಸ್ಪರ್ಧಿಸುವ ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಅಭ್ಯರ್ಥಿಗಳು ಚುನಾವಣೆಗೆ ಸಜ್ಜಾಗಬೇಕಿದೆ. ಜನರ ಆರ್ಶಿವಾದ ಮತ್ತು ಅವರ ನಡುವೆ ಇರುವ ಮುಖಂಡರಿಗೆ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಮಣೆ ಹಾಕುತ್ತೇವೆ. ಅಭ್ಯರ್ಥಿಯ ಆಯ್ಕೆಯ ತಿರ್ಮಾನ ನಮ್ಮ ಕಾಂಗ್ರೆಸ್ ಪಕ್ಷದ ವರಿಷ್ಟರಿಗೆ ಬಿಟ್ಟಿದ್ದು.
ಅಭಿಮಾನಿ ದೇವರುಗಳ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಚಿರಾಋಣಿ. ಕರ್ನಾಟಕ ರಾಜ್ಯ ಮತ್ತು ತುಮಕೂರು ಜಿಲ್ಲೆಯಲ್ಲಿ ನನ್ನ ಹುಟ್ಟುಹಬ್ಬದ ಸಂಭ್ರಮ ಮನೆಮಾಡಿದೆ. ನನ್ನ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಅಭಿಮಾನಿ ಬಳಗಗಳಿಂದ ನನ್ನ ಹೆಸರಿನಲ್ಲಿ ದೇವರಿಗೆ ಅಭಿಷೇಕ, ರಕ್ತದಾನ ಶಿಬಿರ ಮತ್ತು ಆರೋಗ್ಯ ಶಿಬಿರ ನಡೆದಿವೆ. ಯಾವ ಜನ್ಮದ ಪುಣ್ಯವೂ ನನಗೇ ಗೋತ್ತಿಲ್ಲ ನಿಮ್ಮೆಲ್ಲರ ಋಣವನ್ನ ತೀರಿಸ್ತೀನಿ.
– ಡಾ.ಜಿ.ಪರಮೇಶ್ವರ. ಗೃಹಸಚಿವ. ಕರ್ನಾಟಕ.
ಇದನ್ನೂ ಓದಿ: Yogi Adityanath ವಿರುದ್ಧ ಕಾಮೆಂಟ್ ಮಾಡಿದ್ದಕ್ಕಾಗಿ ವಾಟ್ಸಾಪ್ ಗ್ರೂಪ್ ಅಡ್ಮಿನ್ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.