“ನಾನೇ ಸರ್ಕಾರ.. ಇಲ್ಲಿಯೇ ಇದೆ ಸರ್ಕಾರ’

Team Udayavani, Jul 17, 2019, 3:08 AM IST

naane-sar

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರಾಜೀನಾಮೆಗೆ ಪ್ರತಿಪಕ್ಷದ ಸದಸ್ಯರು ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ಸತತ ಎರಡನೇ ದಿನವೂ ವಿಧಾನ ಪರಿಷತ್‌ ಕಲಾಪ ಬಲಿಯಾಯಿತು. ಅಂತಿಮವಾಗಿ ಸಭಾಪತಿ ಸ್ಥಾನದಲ್ಲಿದ್ದ ಉಪ ಸಭಾಪತಿ ಎಸ್‌.ಎಲ್‌. ಧರ್ಮೇಗೌಡ ಕಲಾಪವನ್ನು ಗುರುವಾರಕ್ಕೆ ಮುಂದೂಡಿದರು.

ಮಂಗಳವಾರ ಕಲಾಪ ಆರಂಭವಾಗುತ್ತಿದ್ದಂತೆ ಬಾವಿಗಿಳಿದ ಪ್ರತಿಪಕ್ಷದ ಸದಸ್ಯರೆಲ್ಲರೂ, ಬಹುಮತ ಇಲ್ಲದವರಿಗೆ ಆಡಳಿತ ನಡೆಸಲು ಅವಕಾಶವೇ ಇಲ್ಲ. ಬಹುಮತ ಕಳೆದುಕೊಂಡ ಮುಖ್ಯಮಂತ್ರಿಗಳು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಧರಣಿಗೆ ಮುಂದಾದರು. ಇದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಸದಸ್ಯರು ಮತ್ತು ಸಚಿವರು, “ನಾವೆಲ್ಲರೂ ಸರ್ಕಾರದ ಭಾಗವೇ. ನಾವೇ ಸರ್ಕಾರ’ ಎಂದು ತಿರುಗೇಟು ನೀಡಿದರು. ಆರೋಪ-ಪ್ರತ್ಯಾರೋಪ ತೀವ್ರಗೊಂಡಿದ್ದರಿಂದ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು.

ಕಲಾಪ ಶುರುವಾಗುತ್ತಿದ್ದಂತೆ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸಿ ಫ‌ಲಕಗಳನ್ನು ಹಿಡಿದು ಪ್ರತಿಪಕ್ಷದ ಸದಸ್ಯರು ಬಾವಿಗಿಳಿದರು. ಆಗ ಉಪ ಸಭಾಪತಿಗಳು, “ಬಾವಿಯಿಂದ ಹೊರಬನ್ನಿ ಮಾತನಾಡಲು ಅವಕಾಶ ಮಾಡಿಕೊಡಲಾಗುವುದು’ ಎಂದು ಹೇಳಿದರು. ಆದರೆ ಪಟ್ಟುಸಡಿಲಿಸದ ಬಿಜೆಪಿ ಸದಸ್ಯರು, “ಕೊಡಿ ಕೊಡಿ ರಾಜೀನಾಮೆ ಕೊಡಿ…’ ಎಂದು ಘೋಷಣೆ ಕೂಗಿದರು. ಇದರಿಂದ ಕೆರಳಿದ ಕಾಂಗ್ರೆಸ್‌ ಸದಸ್ಯರು, “ನಿಲ್ಲಿಸಿ ನಿಲ್ಲಿಸಿ ಕುದುರೆ ವ್ಯಾಪಾರ ನಿಲ್ಲಿಸಿ…’ ಎಂದು ತಿರುಗೇಟು ನೀಡಿದರು.

“ಐ ಆ್ಯಮ್‌ ಗವರ್ನಮೆಂಟ್‌…’: ಈ ಮಧ್ಯೆ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, “ಸಚಿವರೆಲ್ಲರೂ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿಗಳು ವಿಶ್ವಾಸ ಮತಯಾಚನೆಗೆ ಮುಂದಾಗಿದ್ದಾರೆ. ಮತ್ತೂಂದೆಡೆ ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದಾರೆ. ಹೀಗಾಗಿ, ಸರ್ಕಾರದ ಅಸ್ತಿತ್ವವೇ ಇಲ್ಲ’ ಎಂದು ಆರೋಪಿಸಿದರು. ಇದಕ್ಕೆ ಬಿಜೆಪಿ ಇತರ ಸದಸ್ಯರೂ ದನಿಗೂಡಿಸಿದರು. ಈ ಸಂದರ್ಭದಲ್ಲಿ ಎದ್ದುನಿಂತ ಸಚಿವ ಡಿ.ಕೆ. ಶಿವಕುಮಾರ್‌, “ನಾನೇ ಸರ್ಕಾರ (ಐ ಆ್ಯಮ್‌ ಗವರ್ನಮೆಂಟ್‌). ಇಲ್ಲಿಯೇ ಇದೆ ಸರ್ಕಾರ’ ಎಂದು ತಮ್ಮ ಸಾಲಿನಲ್ಲಿ ಕುಳಿತ ಸಚಿವರನ್ನು ತೋರಿಸಿದರು.

ವಿಧಾನ ಪರಿಷತ್‌ ಸಭಾ ನಾಯಕಿ ಹಾಗೂ ಸಚಿವೆ ಜಯಮಾಲಾ ಮಾತನಾಡಿ, “ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ಮಾಡಿಕೊಡಬೇಕು’ ಎಂದು ಮನವಿ ಮಾಡಿದರು. ಸಚಿವ ಸಾ.ರಾ. ಮಹೇಶ್‌, “ಸರ್ಕಾರ ಇದ್ದುದರಿಂದಲೇ ಇಲ್ಲಿ ಉತ್ತರ ಕೊಡಲು ಬಂದಿದ್ದು’ ಎಂದು ತಿರುಗೇಟು ನೀಡಿದರು. ಮಧ್ಯಪ್ರವೇಶಿಸಿದ ಉಪ ಸಭಾಪತಿಗಳು 15 ನಿಮಿಷ ಕಲಾಪ ಮುಂದೂಡಿದರು. ಪುನರಾರಂಭವಾಗುತ್ತಿದ್ದಂತೆ ಮತ್ತೆ ಆರೋಪ-ಪ್ರತ್ಯಾರೋಪಗಳು ಶುರುವಾದವು. ಇವುಗಳ ನಡುವೆಯೇ ಪ್ರಶ್ನೋತ್ತರ ಮಂಡನೆ ಆಯಿತು. ಸಭೆಯನ್ನು ಜುಲೈ 18ಕ್ಕೆ ಮುಂದೂಡಲಾಯಿತು.

ಟಾಪ್ ನ್ಯೂಸ್

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.