Census: ದೇಶದಲ್ಲೇ ಮೊದಲ ಬಾರಿಗೆ ಗಣತಿ ನಡೆಸಿದ್ದು ನಾನು: ಸಿಎಂ ಸಿದ್ದರಾಮಯ್ಯ
ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಮಾತು
Team Udayavani, Nov 30, 2023, 10:36 PM IST
ಬೆಂಗಳೂರು: ಪ್ರತಿಯೊಂದು ಜಾತಿ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯುವುದಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ನಾನೇ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಗಣತಿಯನ್ನು ಆರಂಭಿಸಿದೆ. ಬಳಿಕ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಲ್ಲಿ ಜಾರಿಗೆ ತಂದರು. ಆದರೆ 168 ಕೋ. ರೂ. ಖರ್ಚು ಮಾಡಿ ತಯಾರಿಸಿದ ಆ ವರದಿಯನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುರುವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಭಿಕರು ಜನಗಣತಿ ಜಾರಿಯಾಗಬೇಕು ಎಂದು ಕೂಗು ಎಬ್ಬಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲೇ ಈ ಕೂಗು ಕೇಳಿಸಿದ್ದು ವಿಶೇಷವಾಗಿತ್ತು.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಯಾಕೆ ವರದಿ ಸ್ವೀಕರಿಸಿಲ್ಲ ಎಂದು ನೀವು ಕೇಳಲಿಲ್ಲ. ಸಮಸಮಾಜ ನಿರ್ಮಾಣ ಆಗಬೇಕಾದರೆ ಜನಗಣತಿ ಜಾರಿಯಾಗಬೇಕು. ಜಾತಿ ಗಣತಿಗೆ ಕಾಂಗ್ರೆಸ್ ಬದ್ಧವಾಗಿದೆ. ಇಡೀ ದೇಶದಲ್ಲಿ ಜಾರಿ ಮಾಡಲು ಕಾಂಗ್ರೆಸ್ ಬದ್ದವಾಗಿದೆ ಎಂದರು.
ಕನಕಶ್ರೀ ಪ್ರಶಸ್ತಿ ತಡೆ ಹಿಡಿದಿದ್ದನ್ನು ಪ್ರಶ್ನಿಸಿದ್ದಿರಾ?
ಸುಖಾ ಸುಮ್ಮನೆ ಎಲ್ಲರಿಗೂ ಚಪ್ಪಾಳೆ ತಟ್ಟಬೇಡಿ. ನಿಮ್ಮಲ್ಲೊಂದು ತತ್ವ ಇರಲಿ. ಕಳೆದ 3 ವರ್ಷಗಳ ಆಡಳಿತ ಅವಧಿಯಲ್ಲಿ “ಕನಕಶ್ರೀ ಪ್ರಶಸ್ತಿ’ಯನ್ನು ಯಾಕೆ ಕೊಟ್ಟಿಲ್ಲ ಎಂದು ನೀವು ಹಿಂದಿನ ಸರಕಾರವನ್ನು ಪ್ರಶ್ನೆ ಮಾಡಲಿಲ್ಲ. ಕನಕದಾಸರ ತತ್ವಗಳು ಒಂದು ಜಾತಿಗೆ ಸೀಮಿತವಾಗಿದೆಯೇ ಎಂದು ಕೇಳಿದರು.
ಪ್ರಶಸ್ತಿ ಪ್ರದಾನ
ಕಾರ್ಯಕ್ರಮದಲ್ಲಿ ಸಮಾಜ ಸೇವಕ ದಿ| ಲಿಂಗಪ್ಪ ಅವರಿಗೆ ಮರಣೋತ್ತರವಾಗಿ “ಕನಕಶ್ರೀ’ ಪ್ರಶಸ್ತಿಯನ್ನು ಅವರ ಕುಟುಂಬದವರಿಗೆ ಪ್ರದಾನಿಸಲಾಯಿತು.
ತಿಂಥಣಿ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠದ ಸಿದ್ದರಾಮಾನಂದ ಸ್ವಾಮೀಜಿ ಮಾತನಾಡಿ, ಈ ಹಿಂದೆ ವಿಶ್ವೇಶ ತೀರ್ಥ ಶ್ರೀಗಳಿದ್ದಾಗ ಸಿಗುತ್ತಿದ್ದ ರೀತಿಯಲ್ಲಿಯೇ ಉಡುಪಿಯಲ್ಲಿ ಕನಕದಾಸರಿಗೆ ಮಾನ್ಯತೆ ಸಿಗಬೇಕಾಗಿದೆ ಎಂದು ಹೇಳಿದರು.
ಮಾಜಿ ಸಚಿವ ಎಚ್. ಎಂ. ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮತ್ತಿತರರು ಇದ್ದರು.
ಮೂರು ವರ್ಷಗಳ ಹಿಂದೆ ಬಿಜೆಪಿ ಸರಕಾರ ಕನಕಶ್ರೀ ಪ್ರಶಸ್ತಿ ನೀಡುವುದನ್ನು ನಿಲ್ಲಿಸಿತ್ತು. ಪ್ರಶಸ್ತಿ ವಿಚಾರದಲ್ಲಿ ಸಣ್ಣ ತನ ತೋರುವುದು ಸರಿಯಲ್ಲ. ಆ ಹಿನ್ನೆಲೆಯಲ್ಲಿ ಜನರು ಬಿಜೆಪಿಗೆ ಸರಿಯಾದ ಉತ್ತರ ನೀಡಿದ್ದಾರೆ. ಈಗ ನಮ್ಮ ಸರಕಾರ ಕನಕಶ್ರೀ ಪ್ರಶಸ್ತಿಯನ್ನು ಮತ್ತೆ ಆರಂಭಿಸಿದೆ.
– ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ
ಕನಕಶ್ರೀ ಪ್ರಶಸ್ತಿ ಆಯ್ಕೆಗೆ ಈ ವರ್ಷ ಸಮಿತಿ ರಚಿಸಲಿಲ್ಲ. ಇಲಾಖೆ ತಪ್ಪಿನಿಂದಾಗಿ ಪ್ರಶಸ್ತಿ ಬೆಳಗ್ಗಿನವರೆಗೂ ಘೋಷಣೆ ಆಗಿರಲಿಲ್ಲ. ಇನ್ನು ಮುಂದೆ ಪ್ರತಿವರ್ಷವೂ ಕನಕಶ್ರೀ ಪ್ರಶಸ್ತಿಯನ್ನು ಪ್ರದಾನಿಸಲಾಗುವುದು.
– ಶಿವರಾಜ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.