![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Dec 6, 2023, 12:15 AM IST
ಹೊಸದಿಲ್ಲಿ: ಪಂಚರಾಜ್ಯ ಚುನಾವಣೆ ಬಳಿಕ ಆಯೋಜಿಸಲಾಗಿದ್ದ ವಿಪಕ್ಷಗಳ ಒಕ್ಕೂಟ ಐಎನ್‌ಡಿಐಎ ನಾಯಕರ ಸಭೆಯನ್ನು ಡಿಸೆಂಬರ್3ನೇ ವಾರಕ್ಕೆ ಮುಂದೂಡಲಾಗಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನದ ಬೆನ್ನಲ್ಲೇ ಸಭೆ ಮುಂದೂಡಿಕೆಯು ಹಲವು ಅನುಮಾನಗಳಿಗೆ ಕಾರಣವಾಗಿದೆ. ಆದರೆ ಒಕ್ಕೂಟದ ಎಲ್ಲ ನಾಯಕರಿಗೂ ಸಭೆಗೆ ಹಾಜರಾಗಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಂಡಿರುವುದಾಗಿ ಕಾಂಗ್ರೆಸ್ ತಿಳಿಸಿದೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅನಾರೋಗ್ಯದ ಕಾರಣದಿಂದ ಸಭೆಗೆ ಹಾಜರಾಗುತ್ತಿಲ್ಲ. ತಮಿಳುನಾಡು ಮುಖ್ಯ ಮಂತ್ರಿ ಸ್ಟಾಲಿನ್ ಪ್ರವಾಹ ಪರಿಸ್ಥಿತಿಯ ಕಾರಣ ನೀಡಿದ್ದಾರೆ. ಪ.ಬಂಗಾಲ ಸಿಎಂ ಮಮತಾ, ಎಸ್‌ಪಿ ನಾಯಕ ಅಖೀಲೇಶ್ ಯಾದವ್ ವೈಯಕ್ತಿಕ ಕಾರಣ ನೀಡಿರುವ ಹಿನ್ನೆಲೆಯಲ್ಲಿ ಎಲ್ಲರೂ ಭಾಗಿಯಾಗಲು ಅನುವಾಗುವಂತೆ ಸಭೆ ಮುಂದೂಡಲಾಗಿದೆ ಎನ್ನಲಾಗಿದೆ.
ಇದೇ ವೇಳೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಬುಧವಾರ ಸಂಜೆ ಇಂಡಿಯಾ ಒಕ್ಕೂಟದ ಸಮನ್ವಯ ಸಭೆ ಆಯೋಜಿಸಲಾಗಿದ್ದು, ಒಕ್ಕೂಟದ ಸಂಸದೀಯ ಪಕ್ಷದ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.