ಅಪ್ಪನ ಜತೆ ಹೆಜ್ಜೆ ಹಾಕಿ ಜನರ ಸೇವೆ ಮಾಡುತ್ತೇನೆ: ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ

ಜನಸೇವೆ ಮಾಡಬೇಕೆಂಬ ಅಚಲ ನಿರ್ಧಾರ ಮೊದಲಿನಿಂದಲೂ ಇತ್ತು ;  ಅಪ್ಪನ ಮೇಲೆ ಇಟ್ಟಿರುವ ವಿಶ್ವಾಸದಂತೆ ಕೆಲಸ ಮಾಡುವೆ

Team Udayavani, Apr 15, 2024, 7:30 AM IST

ಅಪ್ಪನ ಜತೆ ಹೆಜ್ಜೆ ಹಾಕಿ ಜನರ ಸೇವೆ ಮಾಡುತ್ತೇನೆ: ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ

ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಸಚಿವ ಸತೀಶ್‌ ಜಾರಕಿಹೊಳಿ ಪುತ್ರಿ. ಎಂಬಿಎ ಪದವೀಧರೆ. ತಂದೆ ಮಾರ್ಗದರ್ಶನದಲ್ಲಿ ರಾಜಕೀಯ ಪಾಠ ಆರಂಭಿಸಿದ್ದಾರೆ. ಸಾಮಾಜಿಕ ಚಟುವಟಿಕೆ ಮೂಲಕ ರಾಜಕೀಯ ಪ್ರವೇಶಿಸಿದ್ದಾರೆ. ಲೋಕಸಭೆ ಚುನಾವಣೆ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದ್ದಾರೆ.

ನಿಮ್ಮ ಜೀವನದಲ್ಲೇ ಮೊದಲ ಬಾರಿಗೆ ಚುನಾವಣ ಕಣಕ್ಕಿಳಿದಿದ್ದೀರಿ. ಏನನ್ನಿಸುತ್ತಿದೆ?
ತುಂಬ ಹೆಮ್ಮೆ ಹಾಗೂ ಖುಷಿ ಆಗುತ್ತಿದೆ. ಮೊದಲ ಬಾರಿ ಚುನಾವಣ ಕಣಕ್ಕೆ ಇಳಿದಿರುವುದರಿಂದ ಜನರ ಆಶೀರ್ವಾದ ಬಹಳಷ್ಟಿದೆ. ಜನ ನಮ್ಮ ಕುಟುಂಬ ಮೇಲೆ ಇಟ್ಟಿರುವ ನಂಬಿಕೆ
ಯಿಂದಾಗಿ ಬಹಳ ಸಂತೋಷ ವಾಗುತ್ತಿದೆ.

ಚುನಾವಣೆಗೆ ಸ್ಪರ್ಧಿಸಬೇಕೆಂದು ನಿಮಗೆ ಅನ್ನಿಸಿದ್ದು ಯಾವಾಗ, ಯಾಕೆ ಮತ್ತು ಪ್ರೇರಣೆ ಏನು?
ಚಿಕ್ಕೋಡಿ ಲೋಕಸಭೆ ಚುನಾವಣೆಗೆ ಅವಕಾಶ ಸಿಕ್ಕ ಬಳಿಕ ಈ ಸುವರ್ಣಾ ವಕಾಶವನ್ನು ಬಿಡಬಾರದು ಎಂಬ ಗಟ್ಟಿ ನಿರ್ಧಾರ ಮಾಡಿದೆ. ಜನಸೇವೆ ಮಾಡಬೇಕೆಂಬ ಅಚಲ ನಿರ್ಧಾರ ಮೊದಲಿನಿಂದಲೂ ಇದೆ. ಇದಕ್ಕೆ ನಮ್ಮ ತಂದೆಯವರಾದ ಸತೀಶ ಜಾರಕಿಹೊಳಿ ಅವರ ಪ್ರೇರಣೆ ಬಹಳಷ್ಟಿದೆ.

ರಾಜಕೀಯದಲ್ಲಿ ನಿಮ್ಮ ಗಾಡ್‌ಫಾದರ್‌ ಯಾರು ಮತ್ತು ಯಾಕೆ?
ತಂದೆಯೇ ನನ್ನ ರಾಜಕಾರಣದ ಗಾಡ್‌ಫಾದರ್‌. ಅವರ ಜನಪರ ಕಾಳಜಿ, ದೀನ ದಲಿತರ ಬಗೆಗಿನ ಕಳಕಳಿ, ಬಡವರಿಗೆ ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ ಹಾಗೂ ಜನರ ನೋವಿಗೆ ಸ್ಪಂದಿಸುತ್ತಿರುವುದೇ ನಮಗೆ ಮೂಲ ಪ್ರೇರಣೆಯಾಗಿದೆ.

ಮೊದಲ ಪ್ರಯತ್ನದಲ್ಲೇ ನೀವು ಲೋಕಸಭೆಗೆ ಸ್ಪರ್ಧಿಸುತ್ತಿದ್ದೀರಿ, ಕಾರಣವೇನು?
ನನಗೆ ಮೊದಲಿಂದಲೂ ಸಾಮಾಜಿಕ ಸೇವೆ ಮಾಡಬೇಕೆಂಬ ಆಸೆ ಇತ್ತು. ತಂದೆಯವರ ಮೇಲೆ ಹೈಕಮಾಂಡ್‌ ಹಾಗೂ ಪಕ್ಷದ ವರಿಷ್ಠರು ಇಟ್ಟಿರುವ ವಿಶ್ವಾಸ, ಯುವ ಪೀಳಿಗೆಗೆ ರಾಜಕೀಯದಲ್ಲಿ ಪ್ರಾಮುಖ್ಯ ನೀಡಬೇಕು ಎಂಬ ಕಾರಣಕ್ಕೆ ಚುನಾವಣ ಕಣಕ್ಕೆ ಇಳಿದಿದ್ದೇನೆ.

ನಿಮ್ಮ ಕ್ಷೇತ್ರದ ಜನ ನಿಮಗೆ ಯಾವ ಕಾರಣಕ್ಕಾಗಿ ಮತ ಹಾಕಬೇಕು?
ಕಾಂಗ್ರೆಸ್‌ ಸರಕಾರದ ಪಂಚ ಗ್ಯಾರಂಟಿಗಳು ಜನರ ಮನೆ ಮನೆಗೆ ತಲುಪಿವೆ. ತಂದೆ ಸತೀಶ ಜಾರಕಿಹೊಳಿ ಮಾಡುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಇನ್ನಷ್ಟು ಮುಂದುವರಿಸಲು ನನ್ನನ್ನು ಆಶೀರ್ವದಿಸಬೇಕು.

ಈ ಚುನಾವಣೆಯನ್ನು ನೀವು ಹೇಗೆ ಗೆಲ್ಲುತ್ತೀರಿ? ಪ್ರಮುಖ ಕಾರಣಗಳನ್ನು ತಿಳಿಸಿ.
ಕ್ಷೇತ್ರದ ಜನರ ಅಶೀರ್ವಾದ ಇದೆ. ತಂದೆಯವರು ಮಾಡಿದ ಅಭಿವೃದ್ಧಿ ಕೆಲಸಗಳು ನನ್ನ ನೆರವಿಗೆ ಬರುತ್ತವೆ. ಮುಖ್ಯವಾಗಿ ಕ್ಷೇತ್ರದ ಜನರ ಜತೆಗೆ ನಿಕಟ ಸಂಪರ್ಕ ಇಟ್ಟುಕೊಂಡಿದ್ದೇನೆ. ಭರವಸೆಯನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದ ಸರಕಾರ, ಕಾಂಗ್ರೆಸ್‌ ಕಾರ್ಯಕರ್ತರ ಸಕ್ರಿಯ ಸಂಘಟನೆ.

ನಿಮ್ಮ ಕನಸೇನು? ಗೆದ್ದು ದಿಲ್ಲಿಗೆ ಹೋಗಿ ಏನು ಮಾಡಬೇಕು ಎಂದಿದ್ದೀರಿ?
ಇಡೀ ಕ್ಷೇತ್ರವನ್ನು ಸಂಪೂರ್ಣವಾಗಿ ಅಭಿವೃದ್ಧಿ ಮಾಡುವುದು. ಸಂಪೂರ್ಣವಾಗಿ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸುವುದು. ಹಳ್ಳಿ ಹಳ್ಳಿಗಳಿಗೂ ಸರಕಾರದ ಯೋಜನೆಗಳನ್ನು ತಲುಪಿಸುವುದು.

ಗೆದ್ದರೆ ನಿಮ್ಮ ಲೋಕಸಭಾ ಕ್ಷೇತ್ರಕ್ಕೆ ಮಾಡುವ ಮೊದಲ ಕೆಲಸ ಏನು?
ಚಿಕ್ಕೋಡಿ ಕ್ಷೇತ್ರದ ಮಹಿಳಾ ಸ್ವಸಹಾಯ ಸಂಘಗಳನ್ನು ಇನ್ನಷ್ಟು ಬಲಪಡಿಸುವುದು. ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಸುವುದು.

ನಿಮ್ಮ ಕ್ಷೇತ್ರದ ಭವಿಷ್ಯಕ್ಕೆ ಇರುವ 5 ಕನಸುಗಳೇನು? ಅವುಗಳನ್ನು ಹೇಗೆ ಈಡೇರಿಸುತ್ತೀರಿ?
ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಕಲ್ಪಿಸುವುದು, ರೈತರಿಗೆ ನೀರಾವರಿ ಸೌಲಭ್ಯ ಒದಗಿಸುವುದು, ಶಾಲಾ-ಕಾಲೇಜು ದಿನಗಳಲ್ಲಿಯೇ ಮಕ್ಕಳಿಗೆ ಕ್ರೀಡಾ ಸೌಲಭ್ಯ ನೀಡುವುದು, ಆರೋಗ್ಯ ಸೇವೆಗೆ ಒತ್ತು ನೀಡುವುದು ನನ್ನ ಪ್ರಮುಖ ಗುರಿಗಳು.

ಚುನಾವಣೆ ವೇಳೆ ಅನೇಕ ಹಿರಿಯ ನಾಯಕರನ್ನು ನೀವು ಸಂಭಾಳಿಸಬೇಕಾಗುತ್ತದೆ. ಹೇಗೆ ನಿಭಾಯಿಸುತ್ತೀರಿ?
ಎಲ್ಲ ಹಿರಿಯರ ಆಶೀರ್ವಾದ ಪಡೆಯುತ್ತಿದ್ದೇನೆ. ಹಿರಿಯರು ನೀಡಿದ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿಭಾಯಿಸುತ್ತೇನೆ.

– ಕೇಶವ ಆದಿ

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

baby

Belagavi; ಬಿಮ್ಸ್‌ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು

jenu nona

Belgavi; ಅರಣ್ಯಾಧಿಕಾರಿ, ಸಿಬಂದಿ ಮೇಲೆ ಜೇನು ನೊಣಗಳ ದಾಳಿ

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

jagadish shettar

Loksabha: ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.