ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತೇನೆ
Team Udayavani, Jun 2, 2019, 3:06 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಡಿ ಸಂಸದೀಯ ವ್ಯವಹಾರಗಳ ಖಾತೆಯನ್ನು ಸಮರ್ಥವಾಗಿ ನಿಭಾಯಿಸುವುದರ ಜತೆಗೆ ಕಲ್ಲಿದ್ದಲು ಖಾತೆಯ ಸಚಿವನಾಗಿ ರಾಜ್ಯದ ಬೇಡಿಕೆಗೆ ತಕ್ಕಂತೆ ಕಲ್ಲಿದ್ದಲು ಪೂರೈಕೆಯಾಗುವಂತೆ ನೋಡಿಕೊಳ್ಳುತ್ತೇನೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಂಸದೀಯ ವ್ಯವಹಾರ, ಕಲ್ಲಿದ್ದಲು ಹಾಗೂ ಗಣಿ ಖಾತೆ ಪಡೆದಿರುವ ಹುಬ್ಬಳ್ಳಿ-ಧಾರವಾಡದ ಸಂಸದ ಪ್ರಹ್ಲಾದ್ ಜೋಶಿಯವರ ಮಾತುಗಳಿವು.
ಬೆಂಗಳೂರಿನಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ಶನಿವಾರ ಭೇಟಿ ನೀಡಿದ ಸಂದರ್ಭದಲ್ಲಿ “ಉದಯವಾಣಿ’ಗೆ ಸಂದರ್ಶನ ನೀಡಿದ ಅವರು, ಉತ್ತರ ಕರ್ನಾಟಕ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವುದರ ಜತೆಗೆ ಸಮಗ್ರ ಕರ್ನಾಟಕದ ಅಭಿವೃದ್ದಿಗೂ ಶ್ರಮಿಸಲಿದ್ದೇನೆ ಎಂದು ಹೇಳಿದರು.
ಸಂದರ್ಶನದ ಸಾರಾಂಶ
* ಸಂಸದೀಯ ವ್ಯವಹಾರದಂತಹ ಮಹತ್ವದ ಖಾತೆ ತಮಗೆ ಲಭಿಸಿರುವ ಬಗ್ಗೆ ಹೇಗನಿಸುತ್ತದೆ?
ಈಗ ಉಪರಾಷ್ಟ್ರಪತಿಗಳಾಗಿರುವ ವೆಂಕಯ್ಯ ನಾಯ್ಡು ಹಾಗೂ ನಮ್ಮ ನಾಯಕರಾಗಿದ್ದ ದಿವಂಗತ ಅನಂತ ಕುಮಾರ್ ಅವರು ಕೇಂದ್ರದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಸಂದರ್ಭದಲ್ಲಿ ನಾನೂ ಕೂಡ ಸಂಸತ್ತಿನಲ್ಲಿದ್ದೆ. ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲೇ ಖಾತೆಯನ್ನು ಮುನ್ನಡೆಸುತ್ತೇನೆ. ನನಗೆ ಈ ಖಾತೆ ನೀಡಿರುವುದು ಸಂತಸ ತಂದಿದೆ. ಖಾತೆಯ ಗೌರವ ಹೆಚ್ಚಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸಲಿದ್ದೇನೆ.
* ಸಂಸದೀಯ ವ್ಯವಹಾರಗಳ ಖಾತೆಯನ್ನು ಹೇಗೆ ನಿಭಾಯಿಸುವಿರಿ?
ಸಂಸದೀಯ ವ್ಯವಹಾರಗಳ ಖಾತೆಗೆ ಹೊಸ ಆಯಾಮ ತರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜತೆ ಚರ್ಚೆ ಮಾಡಲಿದ್ದೇನೆ. ಜೂನ್ 17ರಿಂದ ಆರಂಭವಾಗಲಿರುವ 17ನೇ ಲೋಕಸಭೆಯ ಮೊದಲ ಅಧಿವೇಶನವನ್ನು ಯಶಸ್ವಿಯಾಗಿ ನಡೆಸುವ ಸಂಬಂಧ ಪ್ರಧಾನಿ ಮೋದಿಯವರು ಅನೇಕ ರೀತಿಯ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅಗಾಧವಾದ ಮಾಹಿತಿ ಮತ್ತು ಸಾಮರ್ಥ್ಯ ಇರುವಂತಹ, ಅನುಭವಿ ಪ್ರಧಾನಿಯವರ ನೇತೃತ್ವದಲ್ಲಿ ಈಗಾಗಲೇ ಕೆಲಸ ಆರಂಭ ಮಾಡಿದ್ದೇನೆ. ಇದರ ಫಲಿತಾಂಶ ಮುಂದೆ ಜನರಿಗೆ ತಿಳಿಯುತ್ತದೆ.
* ಗಣಿ ಹಾಗೂ ಕಲ್ಲಿದ್ದಲು ಖಾತೆಯ ಹೊಣೆಗಾರಿಕೆಯೂ ಇದೆಯಲ್ಲವೇ?
ದೇಶದ ಒಂದೇ ಒಂದು ಉಷ್ಣ ವಿದ್ಯುತ್ ಸ್ಥಾವರ, ಕಲ್ಲಿದ್ದಲು ಕೊರತೆಯಿಂದ ಒಂದು ದಿನ ಅಥವಾ ಒಂದು ಗಂಟೆಯೂ ಸ್ಥಗಿತವಾಗದಂತೆ ಖಾತೆಯನ್ನು ನಿಭಾಯಿಸುತ್ತೇನೆ. ಇದು ಜನರಿಗೆ ಕೇಂದ್ರ ಸರ್ಕಾರದಿಂದ ನೀಡುವ ಭರವಸೆ.
* ರಾಜ್ಯದ ವಿದ್ಯುತ್ ಕೊರತೆ ನೀಗಿಸಲು ಸಹಕಾರ ನೀಡುವಿರಾ?
ರಾಜ್ಯ ಸರ್ಕಾರ ಗರಿಷ್ಠ ಮಟ್ಟದಲ್ಲಿ ವಿದ್ಯುತ್ ಉತ್ಪಾದನೆ ಮಾಡಲಿ. 24 ಅಥವಾ 25 ದಿನಕ್ಕೆ ಬೇಕಾಗುವಷ್ಟು ಕಲ್ಲಿದ್ದಲು ಸಂಗ್ರಹ ಇರಬೇಕು. ಆದರೆ, ರಾಜ್ಯದಲ್ಲಿ ಈಗ 15 ಅಥವಾ 16 ದಿನಕ್ಕೆ ಬೇಕಾಗುವಷ್ಟು ಸಂಗ್ರಹ ಇದೆ. ಕಲ್ಲಿದ್ದಲು ಸಂಗ್ರಹ ಇಲ್ಲ ಎಂದು ಉಷ್ಣ ವಿದ್ಯುತ್ ಸ್ಥಾವರ ಬಂದ್ ಆಗಲು ಬಿಡುವುದಿಲ್ಲ. ಒಂದು ದಿನ ಅಲ್ಲ, ಒಂದು ಗಂಟೆಯೂ ಉತ್ಪಾದನೆ ಬಂದ್ ಆಗಲು ಬಿಡುವುದಿಲ್ಲ. ದೇಶಾದ್ಯಂತ ಕಲ್ಲಿದ್ದಲು ಉತ್ಪಾದನೆಯ ಸಂಗ್ರಹ ಶೇ.84ರಷ್ಟಿದೆ. ಕರ್ನಾಟಕದಲ್ಲಿ ಶೇ.86ರಷ್ಟಿದೆ. ರಾಷ್ಟ್ರೀಯ ಮಟ್ಟಕ್ಕಿಂತಲೂ ಕರ್ನಾಟಕ ಮುಂದಿದೆ. ಕರ್ನಾಟಕದ ಬೇಡಿಕೆಗೆ ಸಂಬಂಧಿಸಿದಂತೆ ನಾಲ್ಕು ವಿದ್ಯುತ್ ಉತ್ಪಾದನಾ ಘಟಕದಲ್ಲೂ ಸಾಕಷ್ಟು ಸಂಗ್ರಹ ಇದೆ. ಕರ್ನಾಟಕಕ್ಕೆ ಎಷ್ಟು ಬೇಡಿಕೆ ಇದೆಯೋ ಅಷ್ಟು ಪೂರೈಸಲು ನಾವು ಸಿದ್ಧರಿದ್ದೇವೆ.
* ಉತ್ತರ ಕರ್ನಾಟಕದ ಭಾಗದವರು ನಿಮ್ಮಿಂದ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದಾರಲ್ಲವೇ?
ನಾನು ಆ ಭಾಗದಿಂದ ಆಯ್ಕೆಯಾಗಿರುವುದರಿಂದ ಸಹಜವಾಗಿ ಆ ನಿರೀಕ್ಷೆ ಇದ್ದೇ ಇರುತ್ತದೆ. ಆದರೆ, ಉತ್ತರ ಕರ್ನಾಟಕದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದರ ಜತೆಗೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಕೆಲಸ ಮಾಡಲಿದ್ದೇನೆ. ರಾಜ್ಯದ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಹಿರಿಯರ ಮಾರ್ಗದರ್ಶನ ಪಡೆದು ಮುನ್ನಡೆಯಲಿದ್ದೇನೆ.
* ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.