Madhya Pradesh: ಕಾಂಗ್ರೆಸ್ ಗೆದ್ದರೆ ಐಪಿಎಲ್ ಟೀಂ, 25 ಲಕ್ಷ ವಿಮೆ
ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಾಗ್ಧಾನ
Team Udayavani, Oct 17, 2023, 11:21 PM IST
ಭೋಪಾಲ/ಹೊಸದಿಲ್ಲಿ: ಕರ್ನಾಟಕ ಮಾದರಿಯಲ್ಲಿ ಪಂಚ ಗ್ಯಾರಂಟಿಗಳ ಘೋಷಣೆಯನ್ನು ಮಧ್ಯಪ್ರದೇಶದಲ್ಲಿ ಜಾರಿಗೆ ತರುವುದಾಗಿ ಕಾಂಗ್ರೆಸ್ ಈಗಾಗಲೇ ಹೇಳಿಕೊಂಡಿದೆ. ನ.17 ರಂದು ನಡೆಯುವ ಚುನಾವಣೆಯಲ್ಲಿ ಪಕ್ಷ ಗೆದ್ದರೆ ಮಧ್ಯಪ್ರದೇಶಕ್ಕಾಗಿ “ಐಪಿಎಲ್ ತಂಡ” ರಚಿಸುವ ವಾಗ್ಧಾನ ಮಾಡಿದೆ. ಈ ಮೂಲಕ ರಾಜ್ಯದಲ್ಲಿ ಕ್ರಿಕೆಟ್‌ಗೆ ಉತ್ತೇಜನ ನೀಡುವುದಾಗಿ ಹೇಳಿಕೊಂಡಿದೆ. ಇದರ ಜತೆಗೆ ಒಬಿಸಿ ಸಮುದಾಯದವರಿಗೆ ಶೇ.27 ಮೀಸಲು, ರಾಜ್ಯದ ಎಲ್ಲರಿಗೂ 25 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ ನೀಡುವ ಘೋಷಣೆ ಮಾಡಲಾಗಿದೆ.
ಮಾಜಿ ಸಿಎಂ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಮಲನಾಥ್ ಭೋಪಾಲದಲ್ಲಿ ಪ್ರಮುಖ ನಾಯಕರ ಉಪಸ್ಥಿತಿಯಲ್ಲಿ 106 ಪುಟಗಳ ಪ್ರಣಾಳಿಕೆ ಬಿಡುಗಡೆ ಮಾಡಿದರು.
ರಾಜ್ಯದಲ್ಲಿರುವ ಎಲ್ಲರಿಗೂ ಶಾಲೆಯಲ್ಲಿ ಉಚಿತ ಶಿಕ್ಷಣ ನೀಡುವ ಬಗ್ಗೆ ಕಾಂಗ್ರೆಸ್ ಭರವಸೆ ನೀಡಿದೆ. ಇದರ ಜತೆಗೆ “ಪಢೋ ಪಢಾವೋ ಯೋಜನೆ” ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ 1ರಿಂದ 8ನೇ ತರಗತಿಯ ಮಕ್ಕಳಿಗೆ 500 ರೂ., 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ 1,500 ರೂ. ನೀಡುವುದಾಗಿ ಹೇಳಿದ್ದಾರೆ.
ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಸಭೆ: ನ.25ರಂದು ರಾಜಸ್ಥಾನ ಚುನಾವಣೆಗೆ ಸಂಬಂಧಿಸಿದಂತೆ ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಹಿರಿಯ ನಾಯಕರ ಸಭೆ ನಡೆ ಯಿತು. ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೆ, ಕೇಂದ್ರ ಸಚಿವ ಪ್ರಹ್ಲಾದ್, ಗಜೇಂದ್ರ ಸಿಂಗ್ ಶೆಖಾವತ್, ಅರ್ಜುನ್ ರಾಮ್ ಮೇಘ್ವಾಲ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಒಟ್ಟು ಆರು ಗಂಟೆಗಳ ಕಾಲ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಭೆ ನಡೆಯಿತು.
ರೈತರಿಗೆ ಕರೆಂಟು ಕೊಡದ ಕಾಂಗ್ರೆಸ್: ಕೆಸಿಆರ್: ಕಾಂಗ್ರೆಸ್ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡುವ ಹೇರಳ ಅವಕಾಶ ಇತ್ತು. ಆದರೂ ಅದನ್ನು ಸದುಪಯೋಗ ಮಾಡುವಲ್ಲಿ ವಿಫಲ ಹೊಂದಿತು ಎಂದು ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಆರೋಪಿಸಿದ್ದಾರೆ. ಸಿರ್ಸಿಲಾ ಎಂಬಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರಿಗೆ ಉಚಿತ ವಿದ್ಯುತ್ ನೀಡುವ ವಿಚಾರದಲ್ಲಿ ವಿನಾ ಕಾರಣ ರಾಜಕೀಯ ಮಾಡುತ್ತಿದೆ. ತೆಲಂಗಾಣದಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈಗ ಜಾರಿಯಲ್ಲಿ ಯೋಜನೆಗಳು ರದ್ದು ಮಾಡಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಹುದ್ದೆಗೆ ಖರ್ಗೆ ಅಥವಾ ರಾಹುಲ್
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಐ.ಎನ್.ಡಿ.ಐ.ಎ. ಒಕ್ಕೂಟ ಅಧಿಕಾರಕ್ಕೆ ಬರು ವುದು ನಿಶ್ಚಿತ. ಒಂದು ವೇಳೆ, ಕಾಂಗ್ರೆಸ್ ನೇತೃತ್ವದ ಮೈತ್ರಿ ಕೂಟ ಅಧಿಕಾರಕ್ಕೆ ಏರಿದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾ ರ್ಜುನ ಖರ್ಗೆ ಅಥವಾ ವಯನಾಡ್ ಸಂಸದ ರಾಹುಲ್ ಗಾಂಧಿ ಪ್ರಧಾನಮಂತ್ರಿ ಹುದ್ದೆಗೆ ಏರಲಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಹೇಳಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಯಾರೂ ಊಹಿಸಲಾಗದ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.
ಐ.ಎನ್.ಡಿ.ಐ.ಎ. ಶೇ.60ನ್ನು ಪ್ರತಿನಿಧಿಸುತ್ತದೆ
ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಒಕ್ಕೂಟ ಐ.ಎನ್.ಡಿ.ಐ.ಎ. ದೇಶದ ಶೇ.60 ಜನರನ್ನು ಪ್ರತಿನಿಧಿಸುತ್ತದೆ ಎಂದು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಐದು ರಾಜ್ಯಗಳ ಚುನಾವಣೆಯಲ್ಲಿ ನಮ್ಮ ಪಕ್ಷವೇ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಿಜೋರಾಂನ ಐಜ್ವಾಲ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಕಾಂಗ್ರೆಸ್ ಪರ ಆಯೋಜಿಸಲಾಗಿದ್ದ ಪ್ರಚಾರ ಸಭೆಗಳಲ್ಲಿ ಅವರು ಮಾತನಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪ್ರಬಲವಾಗಿ ಬೇರೂರಲು ಮಿಜೋ ನ್ಯಾಷನಲ್ ಫ್ರಂಟ್ ಮತ್ತು ಝೆಡ್‌ಪಿಎಂ ಪಕ್ಷಗಳು ಪ್ರಬಲ ಕಾರಣ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು 2 ಸಾವಿರ ರೂ. ಮಾಸಾಶನ, 750 ರೂ.ಗೆ ಎಲ್‌ಪಿಜಿ ಸಿಲಿಂಡರ್, ಉದ್ಯಮಶೀಲರಿಗೆ ಅನುಕೂಲಕರವಾಗಿರುವ ವಾತಾವರಣ ಕಲ್ಪಿಸಿಕೊಡಲಾಗುತ್ತದೆ ಎಂದು ವಾಗ್ಧಾನ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.