ಬೆಂಗಳೂರಿನಲ್ಲಿ ಅಕ್ರಮ ಡ್ಯಾನ್ಸ್ ಬಾರ್: ಮೂವರ ಬಂಧನ ;28 ಮಹಿಳೆಯರ ರಕ್ಷಣೆ
Team Udayavani, Feb 20, 2022, 2:52 PM IST
ಬೆಂಗಳೂರು: ಕೋರಮಂಗಲದಲ್ಲಿ ಪರವಾನಗಿ ನಿಯಮ ಉಲ್ಲಂಘಿಸಿ ಅಕ್ರಮವಾಗಿ ನಡೆಸುತ್ತಿದ್ದ ಡ್ಯಾನ್ಸ್ಬಾರ್ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿ, 28 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಕೋರಮಂಗಲ 6ನೇ ಬ್ಲಾಕ್ನಲ್ಲಿರುವ ಸಿಕ್ಸಿ r ದೇಸಿ ಪಬ್ ಬಾರ್ ಮತ್ತು ರೆಸ್ಟೋ ರೆಂಟ್ನಲ್ಲಿ ಅಕ್ರಮವಾಗಿ ಮಹಿಳೆಯರನ್ನು ಇರಿಸಿಕೊಂಡು ಡ್ಯಾನ್ಸ್ ಬಾರ್ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ತಿಳಿದು ಬಂದಿತ್ತು. ಮಾಹಿತಿ ಆಧರಿಸಿ ಫೆ.18ರಂದು ದಾಳಿ ನಡೆಸಿದ ಸಿಸಿಬಿ ಪೊಲೀಸರು, ಡ್ಯಾನ್ಸ್ ಬಾರ್ ನಡೆಸುತ್ತಿದ್ದ ಮೂವರನ್ನು ಬಂಧಿಸಿ, 28 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಈ ಡ್ಯಾನ್ಸ್ಬಾರ್ನ ಪರವಾನಗಿಯನ್ನು ರದ್ದು ಪಡಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಪೊಲೀಸರು ಶಿಫಾರಸು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾರ್ಟೆಂಡರ್ ಉದ್ಯೋಗದ ನೆಪದಲ್ಲಿ ಮಹಿಳೆಯರನ್ನು ಅಲ್ಲಿಗೆ ಕರೆತಂದು ಬಲವಂತವಾಗಿ ಕುಣಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಪಾರ್ಟಿ ಮುಗಿದ ನಂತರ ಅವರು ಮಹಿಳೆಯರನ್ನು ಪಬ್ನ ಮೊದಲ ಮತ್ತು ಎರಡನೇ ಮಹಡಿಯಲ್ಲಿನ ಕೋಣೆಗಳಲ್ಲಿ ಲಾಕ್ ಮಾಡಲಾಗುತ್ತಿತ್ತು. ದಾಳಿ ವೇಳೆ ಪೊಲೀಸರು ಧ್ವನಿ ವ್ಯವಸ್ಥೆಗಳು ಮತ್ತು ಗ್ಯಾಜೆಟ್ಗಳನ್ನು ಸಹ ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.